ಮಂಗಳೂರು | ಕ್ಯಾನ್ಸರ್ ಅಪಾಯದ ಮುನ್ಸೂಚನೆಗೆ ಎಂ.ಐ.ಒ.ನಿಂದ ಡಿಜಿಟಲ್ ಆ್ಯಪ್ ಬಿಡುಗಡೆ

Date:

ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು ಹಾಗೂ ಆರಂಭಿಕ ಹಂತದಲ್ಲೇ ಅಪಾಯದ ಅಂಶಗಳನ್ನು ಗುರುತಿಸಿ ವೈದ್ಯಕೀಯ ಸಲಹೆ ಪಡೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಮಂಗಳೂರಿನ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿ (ಎಂ.ಐ.ಒ.) ವತಿಯಿಂದ ‘ಎಂ.ಐ.ಒ. ಕ್ಯಾನ್ಸರ್ ಸ್ಕ್ರೀನರ್’ ಡಿಜಿಟಲ್ ಆ್ಯಪ್ ಬಿಡುಗಡೆ ಮಾಡಲಾಯಿತು.

- Advertisement -

ನಗರದ ದೀಪಾ ಕಂಫರ್ಟ್ಸ್‌ನ ಶೆಹನಾಯಿ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎನ್‌ಆರ್‌ಐ ಉದ್ಯಮಿ ಹಾಗೂ ಸಮಾಜಸೇವಕ ಮೈಕಲ್ ಡಿಸೋಜಾ ಆ್ಯಪ್‌ಗೆ ಚಾಲನೆ ನೀಡಿದರು. ರಾಮಕೃಷ್ಣ ತಪೋವನ ಪೊಳಲಿಯ ಅಧ್ಯಕ್ಷ ವಿವೇಕ ಚೈತನ್ಯಾನಂದ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ದಾಯ್ಜಿವರ್ಲ್ಡ್ ಮೀಡಿಯಾ ಆಡಳಿತ ನಿರ್ದೇಶಕ ವಾಲ್ಟರ್ ನಂದಳಿಕೆ ಹಾಗೂ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಪ್ರಸ್ತುತ ಆ್ಯಪ್ ವ್ಯಕ್ತಿಯ ವಯಸ್ಸು, ಕುಟುಂಬದಲ್ಲಿ ಕ್ಯಾನ್ಸರ್ ಇತಿಹಾಸ, ತಂಬಾಕು ಮತ್ತು ಮದ್ಯಪಾನ ಬಳಕೆ, ಬೊಜ್ಜು, ಜೀವನಶೈಲಿ ಹಾಗೂ ಕ್ಯಾನ್ಸರ್‌ಗೆ ಸಂಬಂಧಿಸಿದ ಲಕ್ಷಣಗಳನ್ನು ಆಧರಿಸಿ ಅಪಾಯದ ಮಟ್ಟವನ್ನು ನಿರ್ಣಯಿಸುತ್ತದೆ. ಸಾಮಾನ್ಯ, ಮಧ್ಯಂತರ, ಮಧ್ಯಮ ಮತ್ತು ಹೆಚ್ಚಿನ ಅಪಾಯ ಎಂದು ನಾಲ್ಕು ವಿಭಾಗಗಳಲ್ಲಿ ವರ್ಗೀಕರಿಸಿ, ಅಗತ್ಯಕ್ಕೆ ಅನುಗುಣವಾಗಿ ಆರೋಗ್ಯ ಜಾಗೃತಿ, ವೈದ್ಯಕೀಯ ಸಮಾಲೋಚನೆ, ಸ್ಕ್ರೀನಿಂಗ್ ಪರೀಕ್ಷೆ ಹಾಗೂ ತಜ್ಞ ವೈದ್ಯರ ಭೇಟಿಗೆ ಮಾರ್ಗದರ್ಶನ ನೀಡುತ್ತದೆ.

ಬಾಯಿ, ಸ್ತನ, ಗರ್ಭಕಂಠ, ಕರುಳು, ಶ್ವಾಸಕೋಶ, ಪ್ರಾಸ್ಟೇಟ್, ಅಂಡಾಶಯ, ಗರ್ಭಕೋಶ ಮತ್ತು ಹೊಟ್ಟೆಯ ಕ್ಯಾನ್ಸರ್ ಸೇರಿದಂತೆ ಹಲವು ವಿಧಗಳ ಅಪಾಯದ ಮೌಲ್ಯಮಾಪನಕ್ಕೆ ಆ್ಯಪ್ ನೆರವಾಗಲಿದೆ. ಇದು ಕ್ಯಾನ್ಸರ್ ಪತ್ತೆಹಚ್ಚುವ ಅಥವಾ ರೋಗನಿರ್ಣಯ ಮಾಡುವ ಸಾಧನವಲ್ಲ; ವೈದ್ಯಕೀಯ ಪರೀಕ್ಷೆಗೆ ಪರ್ಯಾಯವೂ ಅಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಆ್ಯಪ್‌ನಲ್ಲಿ ವೈಯಕ್ತಿಕ ಮಾಹಿತಿ ಸಂಗ್ರಹಿಸುವುದಿಲ್ಲ. ಯಾವುದೇ ದಾಖಲೆ ಅಪ್‌ಲೋಡ್ ಮಾಡುವ ಅಥವಾ ಫಲಿತಾಂಶಕ್ಕಾಗಿ ಕಾಯುವ ಅಗತ್ಯವಿಲ್ಲ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಲಭ್ಯವಿರುವ ಈ ಆ್ಯಪ್ ಅನ್ನು ಸಾರ್ವಜನಿಕರು ಮಾತ್ರವಲ್ಲದೆ ಆಶಾ ಕಾರ್ಯಕರ್ತೆಯರು, ಎಎನ್‌ಎಂಗಳು ಹಾಗೂ ಆರೋಗ್ಯ ಕಾರ್ಯಕರ್ತರೂ ಮಾರ್ಗದರ್ಶಕ ಸಾಧನವಾಗಿ ಬಳಸಬಹುದು.

ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದರೆ ಸೂಕ್ತ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ ಎಂಬ ಜಾಗೃತಿ ಮೂಡಿಸುವುದು ಈ ಉಪಕ್ರಮದ ಉದ್ದೇಶವಾಗಿದೆ ಎಂದು ಎಂ.ಐ.ಒ. ನಿರ್ದೇಶಕ ಡಾ. ಸುರೇಶ್ ರಾವ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...

ಕಾರವಾರ |ಅರಣ್ಯದಲ್ಲಿ ಅಕ್ರಮ ಮದ್ಯ ಸಾಗಾಟ : 64 ಸಾವಿರ ಮೌಲ್ಯದ ಮದ್ಯ ಜಪ್ತಿ

ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ...

ಅಜಿತ್ ಪವಾರ್ ವಿಮಾನ ದುರಂತಕ್ಕೆ 10 ತಿಂಗಳು: ಇನ್ನೂ ಎಫ್‌ಐಆರ್ ಇಲ್ಲ, ತನಿಖೆಯೂ ಇಲ್ಲ: ರೋಹಿತ್ ಪವಾರ್ ಆಕ್ರೋಶ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ನಿಧನರಾಗಿ...

ಚಿಕ್ಕಮಗಳೂರು | ಎಸ್ಟೇಟ್‌ನಲ್ಲಿ ಕಾರ್ಮಿಕರಿಗೆ ದೌರ್ಜನ್ಯ: ಸಿಪಿಐ (ಎಂಎಲ್) ರೆಡ್ ಸ್ಟಾರ್ ತೀವ್ರ ಖಂಡನೆ

ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಪಕ್ಷದ ಜಿಲ್ಲಾ ಸಮಿತಿ ನಿಯೋಗ...