ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಪಡೆ, ಮಂಗಳೂರು ಘಟಕದ ವತಿಯಿಂದ ಪಣಂಬೂರು ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ವಿಶೇಷ ಕಾರ್ಯಪಡೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿ, ಬೀಚ್‌ನಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯ, ಕಸ ಹಾಗೂ ಇತರೆ ಅನಗತ್ಯ ವಸ್ತುಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಿದರು. ಸಾರ್ವಜನಿಕರಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವುದು ಹಾಗೂ ಸ್ವಚ್ಛ ಪರಿಸರವನ್ನು ಕಾಪಾಡುವಂತೆ ಪ್ರೇರೇಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ವಿಶೇಷ ಕಾರ್ಯಪಡೆಯ ಮುಖ್ಯ ಉದ್ದೇಶ ಕರಾವಳಿ ಭಾಗದಲ್ಲಿ ಕೋಮು ಸಂಘರ್ಷ ತಡೆಗಟ್ಟಿ, ಶಾಂತಿ ಹಾಗೂ ಕೋಮು ಸೌಹಾರ್ದತೆ ಕಾಪಾಡುವುದಾಗಿದೆ. ಈ ಮೂಲಕ ವಿಶೇಷ ಕಾರ್ಯಪಡೆ ಸಾಮಾಜಿಕ ಜವಾಬ್ದಾರಿ ಹಾಗೂ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ತನ್ನ ಸಹಭಾಗಿತ್ವವನ್ನು ವ್ಯಕ್ತಪಡಿಸಿತು.
ಕಾರ್ಯಕ್ರಮದಲ್ಲಿ ವಿಶೇಷ ಕಾರ್ಯಪಡೆ ಘಟಕದ ಪೊಲೀಸ್ ಉಪಾಧೀಕ್ಷಕರು ಅಂಬರಾಯ ಕಾಮನಮನಿ ಮತ್ತು ವಿಶೇಷ ಕಾರ್ಯಪಡೆ ಉಡುಪಿ ಕಂಪನಿಯ ಉಸ್ತುವಾರಿ ಅಧಿಕಾರಿ ಸಿದ್ದಯ್ಯ RPI ಮತ್ತು ದಕ್ಷಿಣ ಕನ್ನಡ SAF ಕಂಪನಿಯ ಉಸ್ತುವಾರಿ ಅಧಿಕಾರಿ ಅಶೋಕ ಸದಲಗಿ PI ಮತ್ತು ಪಣಂಬೂರ ಪೊಲೀಸ್ ಠಾಣೆಯ ಇನ್ನಿತರ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ತಿತರಿದ್ದರು.




