ಮಂಗಳೂರು | ಶಾಲಾ ಆವರಣದಲ್ಲಿ ರಾಜಕೀಯ ಭಾಷಣ ಖಂಡನೀಯ: ಪದ್ಮರಾಜ್ ಪೂಜಾರಿ ಆಕ್ರೋಶ

Date:

ಮಂಗಳೂರು: ಬೆಳ್ತಂಗಡಿಯ ಪೂಂಜಾಲಕಟ್ಟೆಯ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ಪ್ರೇರಿತ ಭಾಷಣ ಮಾಡಿರುವುದು ಮತ್ತು ಶಾಲಾ ಮಕ್ಕಳಿಂದ ರಾಜಕೀಯ ಘೋಷಣೆಗಳನ್ನು ಕೂಗಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ತೀವ್ರವಾಗಿ ಖಂಡಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಶಾಲೆಗಳು ಜ್ಞಾನ ದೇಗುಲಗಳಾಗಿದ್ದು, ಮಕ್ಕಳ ಭವಿಷ್ಯವನ್ನು ರೂಪಿಸುವ ಪವಿತ್ರ ಸ್ಥಳಗಳಾಗಿವೆ. ಆದರೆ, ಪೂಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರು ಕಾಂಗ್ರೆಸ್ ಪಕ್ಷದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವುದು ಮತ್ತು ಮುಗ್ಧ ಶಾಲಾ ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ಪ್ರಜಾಪ್ರಭುತ್ವ ಮತ್ತು ಶಿಕ್ಷಣ ವ್ಯವಸ್ಥೆಗೆ ಮಾಡಿದ ಅಪಮಾನವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

“ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಾಣವಾದ ಸಭಾಭವನದ ಉದ್ಘಾಟನೆಗೆ ಶಿಷ್ಟಾಚಾರ ಉಲ್ಲಂಘಿಸಿ ಮುಂದಾಗಿದ್ದನ್ನು ಪ್ರಶ್ನಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಆ ಕಾರ್ಯಕ್ರಮ ರದ್ದಾದ ಹಿನ್ನೆಲೆಯಲ್ಲಿ, ಖಾಸಗಿ ಸಂಸ್ಥೆಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಶಾಲಾ ವೇದಿಕೆಯನ್ನು ರಾಜಕೀಯ ಭಾಷಣಕ್ಕೆ ಬಳಸಿಕೊಳ್ಳಲಾಗಿದೆ. ಅಲ್ಲದೆ, ಮಕ್ಕಳಿಂದ ರಾಜಕೀಯ ನಾಯಕರ ಪರವಾಗಿ ಜಯಕಾರ ಹಾಕಿಸಿರುವುದು ಶಿಕ್ಷಣ ಇಲಾಖೆಯ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಅವರು ತಿಳಿಸಿದ್ದಾರೆ.

” ಶೈಕ್ಷಣಿಕ ಸಂಸ್ಥೆಗಳ ಪಾವಿತ್ರ್ಯತೆಯನ್ನು ಹಾಳುಮಾಡುವ ಇಂತಹ ಬೆಳವಣಿಗೆಗಳನ್ನು ನಾಗರಿಕ ಸಮಾಜ ಎಂದಿಗೂ ಸಹಿಸುವುದಿಲ್ಲ. ಶಾಲಾ ಮಕ್ಕಳ ಮನಸ್ಸಿನಲ್ಲಿ ರಾಜಕೀಯ ವಿಷಬೀಜ ಬಿತ್ತುವ ಇಂತಹ ಪ್ರವೃತ್ತಿಯ ವಿರುದ್ಧ ಶಿಕ್ಷಣ ಇಲಾಖೆಯು ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪದ್ಮರಾಜ್ ಆರ್. ಪೂಜಾರಿ” ಅವರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಡಿನ ಸಂಸ್ಕೃತಿ, ಜನಪದ ಕಲೆಗಳ ಉಳಿವಿಗೆ ಯುವಜನೋತ್ಸವ ಪ್ರೇರಣೆ: ನಾರಾಯಣಸಾ ಭಾಂಡಗೆ

ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜನಪದ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಯುವಜನತೆಯ...

ಹಿರಿಯೂರು | ಕುಡಿಯುವ ನೀರಿಗೆ ಪರದಾಟ; ಸಮಸ್ಯೆ ಪರಿಹರಿಸಲು ನಗರಸಭೆಗೆ ಮನವಿ

ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯ ಚಿತ್ರದುರ್ಗದ ಹಿರಿಯೂರು ತಾಲೂಕು ಸಮಿತಿ ವತಿಯಿಂದ...

ಗೌನಪಲ್ಲಿ ಪಟ್ಟಣ ಪಂಚಾಯಿತಿ ಕನಸು: ಬೆಳಗಾವಿಗೆ ಕಾಲ್ನಡಿಗೆ ಹೊರಟ ಅಮ್ಜದ್ ಪಾಷಾ

ರಾಜ್ಯದ ಗಡಿಭಾಗದಲ್ಲಿರುವ ದೊಡ್ಡ ಜನಸಂಖ್ಯೆ ಹಾಗೂ ಭಾರಿ ವಿಸ್ತೀರ್ಣ ಹೊಂದಿರುವ ಕೋಲಾರ...

ಚಿಕ್ಕಬಳ್ಳಾಪುರ | ಒಕ್ಕಲಿಗ ಸಂಘದಲ್ಲಿ ಬದಲಾವಣೆ ಆಗಬೇಕಿದೆ, ಆಡಳಿತದಲ್ಲಿ ಪಾರದರ್ಶಕತೆ ಬೇಕಿದೆ: ಹರೀಶ್‌ ರೆಡ್ಡಿ ಆರೋಪ

ಜಿಲ್ಲೆಯ ಹೆಮ್ಮೆಯಾದ ಚಿಕ್ಕಬಳಾಪುರ ತಾಲೂಕು ಒಕ್ಕಲಿಗರ ಸಂಘವು ಕೆಲವೇ ಬಲಾಢ್ಯರ ಕಪಿಮುಷ್ಟಿಗೆ...