ಮಂಗಳೂರು | ಬಾಕಿ ವೇತನ, ಕನಿಷ್ಠ ಕೂಲಿಗೆ ಆಗ್ರಹಿಸಿ ಪಾಲಿಟೆಕ್ನಿಕ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

Date:

ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿಯಿರಿಸಿದ ವೇತನವನ್ನು ಕೂಡಲೇ ಪಾವತಿಸಲು ಒತ್ತಾಯಿಸಿ, ಹೊರಗುತ್ತಿಗೆ ನೌಕರರಿಗೆ ಅನ್ಯಾಯವೆಸಗಿದ ಬೆಂಗಳೂರಿನ ಆಬ್ಜೆಕ್ಟ್ ಟೆಕ್ನಾಲಜೀಸ್ ಸಂಸ್ಥೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕಾಗಿ ಒತ್ತಾಯಿಸಿ, ಸಾಮಾಜಿಕ ಭದ್ರತೆಗಾಗಿ ಹಾಗೂ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಆಗ್ರಹಿಸಿ ಇಂದು ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

CITU ಗೆ ಸಂಯೋಜಿತಗೊಂಡಿರುವ ಸರಕಾರಿ ಪಾಲಿಟೆಕ್ನಿಕ್ ಡಿ ಗ್ರೂಪ್ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಜರುಗಿದ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, “ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಡಿ’ ಗ್ರೂಪ್ ಹೊರಗುತ್ತಿಗೆಯ ಆಧಾರದಲ್ಲಿ ಲ್ಯಾಬ್,ಲೈಬ್ರರಿ, ಕಚೇರಿ ನಿರ್ವಹಣೆ ಕೆಲಸ ಸೇರಿದಂತೆ ಶಿಕ್ಷಕೇತರರಾಗಿ ಕಳೆದ 7 ವರ್ಷಗಳಿಂದ ದುಡಿಯುತ್ತಿರುವ ನೌಕರರು ಇಂದು ತೀವ್ರ ಸಂಕಷ್ಟದಲ್ಲಿದ್ದಾರೆ. ಗುತ್ತಿಗೆದಾರರಾದ ಬೆಂಗಳೂರಿನ OBJECT TECHNOLOGIES ಎಂಬ ಸಂಸ್ಥೆಯು 2026ರ ಮಾರ್ಚ್ ನಿಂದ ನೌಕರರ ಮಾಸಿಕ ವೇತನವನ್ನು ನೀಡದೆ ಸತಾಯಿಸಿತ್ತು” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

“ಕಾರ್ಮಿಕ ಇಲಾಖೆಯ ಮಧ್ಯಪ್ರದೇಶದಿಂದ ಎಪ್ರಿಲ್, ಮೇ ಜೂನ್ ಜುಲೈ ತಿಂಗಳ ವೇತನ ಪಾವತಿಯಾಯಿತು. ಆದರೆ ಮಾರ್ಚ್,ಆಗಸ್ಟ್, ಸಪ್ಟೆಂಬರ್ ಅಕ್ಟೋಬರ್ ತಿಂಗಳ ವೇತನ ಹಾಗೂ ಮಾರ್ಚ್ ನಿಂದ ಅಕ್ಟೋಬರ್ ತನಕದ PF ESI ಯ ಹಣವನ್ನು ಪಾವತಿಸಿಲ್ಲ.ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಿಗದಿಪಡಿಸಿದ ಕನಿಷ್ಠ ಕೂಲಿಯನ್ನೂ ಕೂಡ ನೀಡುತ್ತಿಲ್ಲ. ಗುತ್ತಿಗೆದಾರ ಸಂಸ್ಥೆಯು ಬಹುಸಂಖ್ಯಾತ ಮಹಿಳಾ ನೌಕರರನ್ನು ಸೇರಿದಂತೆ ಎಲ್ಲಾ ನೌಕರರನ್ನು ಅತ್ಯಂತ ಅಮಾನವೀಯಯಾಗಿ ನಡೆಸಿಕೊಳ್ಳುತ್ತಿದೆ” ಎಂದು ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

CITU ಜಿಲ್ಲಾ ನಾಯಕರಾದ ಯೋಗೀಶ್ ಜಪ್ಪಿನಮೊಗರು, ಸಂಘದ ಅಧ್ಯಕ್ಷರಾದ ಪುರುಷೋತ್ತಮ ಬಂಗೇರ ಹಾಗೂ ಪ್ರಧಾನ ಕಾರ್ಯದರ್ಶಿ ತುಳಸಿ ಯೆಯ್ಯಾಡಿಯವರು, DYFI ಜಿಲ್ಲಾ ಕಾರ್ಯದರ್ಶಿ ರಿಝ್ವಾನ್ ಹರೇಕಳ, ಸಂಘದ ನಾಯಕರಾದ ಗಿರಿಯಪ್ಪ, ದಿವ್ಯಾ ಕಾಪು, ಭುವಿಕಾ ಸಾಲ್ಯಾನ್, ಅಕ್ಷತಾ, ಪ್ರಮೀಳಾ, ಮೇಘಾ, ಪ್ರಿಯದರ್ಶಿನಿ, ರಘುನಾಥ್, ರೆಮಿತಾ, ರವಿ, ದೀಕ್ಷಾ, ರಿತೇಶ್, ಸಂದೀಪ್ ಮುಂತಾದವರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...