ಮಂಗಳೂರು | ಸೇವೆಗೆ ಮನ್ನಣೆ: ಯೆನೆಪೋಯ ಪದವಿ ಕಾಲೇಜಿನ ಮೂವರಿಗೆ ರಾಜ್ಯ ಪ್ರಶಸ್ತಿ

Date:

ಯೆನೆಪೋಯ (ಪರಿಗಣಿತ) ವಿಶ್ವವಿದ್ಯಾಲಯದ ಘಟಕ ಸಂಸ್ಥೆಯಾದ ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಕರ್ನಾಟಕ ಸರ್ಕಾರದ ರಾಜ್ಯಮಟ್ಟದ ಎನ್‌ಎಸ್‌ಎಸ್ ಪ್ರಶಸ್ತಿಗೆ ಕಾಲೇಜಿನ ಒಬ್ಬ ಅಧ್ಯಾಪಕಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಕಾಲೇಜಿನ ಎನ್‌ಎಸ್‌ಎಸ್ ಘಟಕಕ್ಕೂ ಪ್ರಶಸ್ತಿ ಲಭಿಸಿದೆ. ಈ ಮೂಲಕ ಸಂಸ್ಥೆಗೆ ಒಟ್ಟು ನಾಲ್ಕು ರಾಜ್ಯಮಟ್ಟದ ಪ್ರಶಸ್ತಿಗಳು ದೊರೆತಿವೆ.

- Advertisement -

2023-24ನೇ ಸಾಲಿನ ಅತ್ಯುತ್ತಮ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಕೊಲಿನ್ ಜಾನೆಟ್ ಭಾಜನರಾಗಿದ್ದಾರೆ. ಇದೇ ಸಾಲಿನ ಅತ್ಯುತ್ತಮ ಎನ್‌ಎಸ್‌ಎಸ್ ಸ್ವಯಂಸೇವಕ ಪ್ರಶಸ್ತಿಯನ್ನು ಕಾಲೇಜಿನ ವಿದ್ಯಾರ್ಥಿ ಶ್ರೀಜನ್ ಬಿ.ಸಿ. ಪಡೆದುಕೊಂಡಿದ್ದಾರೆ. 2024-25ನೇ ಸಾಲಿನ ಅತ್ಯುತ್ತಮ ಎನ್‌ಎಸ್‌ಎಸ್ ಸ್ವಯಂಸೇವಕಿ ಪ್ರಶಸ್ತಿಗೆ ವಿದ್ಯಾರ್ಥಿನಿ ಸಾನಿಯಾ ಕೆ. ಆಯ್ಕೆಯಾಗಿದ್ದಾರೆ. ಇದರೊಂದಿಗೆ ಕಾಲೇಜಿನ ಎನ್‌ಎಸ್‌ಎಸ್ ಘಟಕಕ್ಕೂ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ...

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಮೀನುಗಾರಿಕೆಗೆ ತೆರಳುವ ಮೀನುಗಾರರ ಬದುಕು ಈಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಒಂದು ಕಡೆ ಸಮುದ್ರದ ಅಪಾಯ, ಮತ್ತೊಂದು ಕಡೆ...

ರಾಜಕೀಯದ ಅಂಧಾನುಸರಣೆ ಮತ್ತು ಮನೋವಿಜ್ಞಾನ — ಮೋದಿ ಆಡಳಿತ...

ರಾಜಕೀಯ ನಾಯಕನ ನಿರ್ಧಾರವನ್ನು ಪ್ರಶ್ನಿಸಿದರೆ ತನ್ನದೇ ಗುಂಪಿನವರು ವಿರೋಧಿಸಬಹುದು, ಅಪಹಾಸ್ಯ ಮಾಡಬಹುದು ಅಥವಾ ತನ್ನ ರಾಜಕೀಯ ನಿಷ್ಠೆ, ದೇಶಪ್ರೇಮ ಹಾಗೂ ಧರ್ಮನಿಷ್ಠೆಯ ಬಗ್ಗೆ ಅನುಮಾನ ವ್ಯಕ್ತಪಡಿಸಬಹುದು ಎಂಬ ಭಯದಿಂದ ಕೆಲವರು ಮೌನವಾಗಿರಬಹುದು. ಇನ್ನೂ...

ವೀರಪ್ಪ ಮೊಯ್ಲಿ ಹೇಳಿಕೆ- ಕಾಂಗ್ರೆಸ್‌ನ ರಾಜಕೀಯ ನಿರ್ಧಾರಗಳ ನೆರಳಲ್ಲಿ...

ಮೊಯ್ಲಿ ಅವರ ಹೇಳಿಕೆಯ ಮತ್ತೊಂದು ಪ್ರಮುಖ ಭಾಗ ಪಕ್ಷದ ಆಂತರಿಕ ಸುಧಾರಣೆಗೆ ಸಂಬಂಧಿಸಿದೆ. ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಪಕ್ಷವನ್ನು ಭವಿಷ್ಯದ ರಾಜಕೀಯ ಸವಾಲುಗಳಿಗೆ ಸಿದ್ಧಗೊಳಿಸಲು ಮಹತ್ವದ ಬದಲಾವಣೆಗಳನ್ನು ತರಲು ಬಯಸಿದ್ದರು;...

ಸಮಾಜಮುಖಿ ಚಟುವಟಿಕೆಗಳು, ಸಮುದಾಯ ಸೇವೆ, ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳು ಹಾಗೂ ವಿವಿಧ ಜನಪರ ಕಾರ್ಯಗಳಲ್ಲಿ ಎನ್‌ಎಸ್‌ಎಸ್ ಘಟಕದ ಮೂಲಕ ಸಲ್ಲಿಸಿದ ಸೇವೆ ಮತ್ತು ಬದ್ಧತೆಯನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.

ಕರ್ನಾಟಕ ಸರ್ಕಾರದ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಎನ್‌ಎಸ್‌ಎಸ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಗಣ್ಯರು ಭಾಗವಹಿಸುವರು.

ಈ ಸಾಧನೆಗೆ ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿಗಳು, ಸಹಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಅಶ್ವಿನಿ ಶೆಟ್ಟಿ ಅವರು ಕಾಲೇಜಿನ ಎನ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರಂತರ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡುತ್ತಾ ಬಂದಿದ್ದು, ಈ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ, ಕಾಲೇಜಿನ ಪ್ರಾಂಶುಪಾಲ ಹಾಗೂ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಡೀನ್ ಪ್ರೊ. ಜೀವನ್ ರಾಜ್, ಉಪಪ್ರಾಂಶುಪಾಲರಾದ ಪ್ರೊ. ರತ್ನಾಕರ ಶೆಟ್ಟಿ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿ,ಮತ್ತು ವಿದ್ಯಾರ್ಥಿಗಳು ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದ್ದಾರೆ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Vibe ಸಮೀಕ್ಷೆ: ಯೂಪಿಯಲ್ಲಿ ಮತ್ತಷ್ಟು ಕುಸಿಯುವುದೇ ಬಿಎಸ್‌ಪಿ; ಮಾಯಾವತಿ ಪಕ್ಷ ಕುಸಿದಷ್ಟೂ ಬಿಜೆಪಿಗೆ ನಷ್ಟ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯವಿದ್ದರೂ ರಾಜ್ಯದಲ್ಲಿ...

ರಾಜಕೀಯದ ಅಂಧಾನುಸರಣೆ ಮತ್ತು ಮನೋವಿಜ್ಞಾನ — ಮೋದಿ ಆಡಳಿತ ಮತ್ತು ಬೆಂಬಲಿಗರ ಮನೋಭಾವದ ವಿಶ್ಲೇಷಣೆ!

ರಾಜಕೀಯ ನಾಯಕನ ನಿರ್ಧಾರವನ್ನು ಪ್ರಶ್ನಿಸಿದರೆ ತನ್ನದೇ ಗುಂಪಿನವರು ವಿರೋಧಿಸಬಹುದು, ಅಪಹಾಸ್ಯ ಮಾಡಬಹುದು...

ಮುಂಡಗೋಡ | ಶಿವಾಜಿ ಬ್ಯಾಂಕ್ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಮುಂಡಗೋಡ: ಪಟ್ಟಣದ ಶಿವಾಜಿ ಬ್ಯಾಂಕ್ ಸಮೀಪ ನಿಲ್ಲಿಸಿದ್ದ ಹೆಚ್‌ಎಫ್ ಡಿಲಕ್ಸ್ ಮೋಟಾರ್...

ಚಿಕಿತ್ಸಾ ನಿರ್ಲಕ್ಷ್ಯದಿಂದ ಮಹಿಳೆಗೆ ತೀವ್ರ ರಕ್ತಸ್ರಾವ: ಬೆಂಗಳೂರಿನ ವೈದ್ಯೆಗೆ ₹2 ಲಕ್ಷ ದಂಡ ವಿಧಿಸಿದ ಗ್ರಾಹಕರ ಆಯೋಗ

ವಿಫಲವಾದ ಗರ್ಭಧಾರಣೆಯ ಬಳಿಕ ಗರ್ಭಕೋಶವನ್ನು ಶುಚಿಗೊಳಿಸುವ ಶಸ್ತ್ರಚಿಕಿತ್ಸೆಯನ್ನು (ಡಿ ಆ್ಯಂಡ್ ಸಿ)...