ಹತ್ಯೆಯಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ರೂ. ಪರಿಹಾರ: ಬಿ ವೈ ವಿಜಯೇಂದ್ರ

Date:

ಸುಹಾಸ್ ಶೆಟ್ಟಿಯವರ ಹತ್ಯೆಯಿಂದ ಅವರ ಬಡ ಕುಟುಂಬದ ಆಧಾರಸ್ತಂಭ ಕಳಚಿಬಿದ್ದಂತಾಗಿದೆ. ಸುಹಾಸ್ ಶೆಟ್ಟಿಯವರ ಕುಟುಂಬಕ್ಕೆ ಬಿಜೆಪಿ ಪರವಾಗಿ 25 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

- Advertisement -

ಮಂಗಳೂರಲ್ಲಿ ಮಾಧ್ಯಮಗಳ ಜೊತೆ ಶುಕ್ರವಾರ ಮಾತನಾಡಿದ ಅವರು, “ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಈ ಘಟನೆಯ ಗಂಭೀರತೆಯನ್ನು ಅರ್ಥ ಮಾಡಿಕೊಂಡು, ಕುಟುಂಬದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ರಾಜ್ಯ ಸರಕಾರ ಪರಿಹಾರ ಘೋಷಿಸಬೇಕು. ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್‍ಐಎ) ಘಟನೆ ತನಿಖೆ ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

“ಈ ದುರ್ಘಟನೆಯಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಅವರ ಜೀವಕ್ಕೆ ಬೆದರಿಕೆ ಇದ್ದರೂ ರಕ್ಷಣೆ ನೀಡಿಲ್ಲ. ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ, ಗೃಹ ಇಲಾಖೆಯ ವೈಫಲ್ಯ ಮತ್ತು ಕಾಂಗ್ರೆಸ್ ಸರಕಾರದ ನೀತಿಯಿಂದ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ದೂರಿದರು.

“ರಾಜ್ಯದ ಜನತೆಗೆ ಹಾಗೂ ಹಿಂದೂ ಕಾರ್ಯಕರ್ತರಿಗೆ ಕಾಂಗ್ರೆಸ್ ಸರಕಾರದ ಕುರಿತು ವಿಶ್ವಾಸ ಇಲ್ಲದಂತಾಗಿದೆ ಎಂದ ಅವರು, ನಾನು, ವಿಪಕ್ಷ ನಾಯಕರು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದೇವೆ. ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...