ಎಪ್ರಿಲ್ 4 – 5 , ಮಂಗಳೂರಿನಲ್ಲಿ CITU ಕರ್ನಾಟಕ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರ

Date:

ಕಾರ್ಮಿಕ ಕಾನೂನುಗಳ ರಕ್ಷಣೆಗಾಗಿ, ದುಡಿಯುವ ವರ್ಗದ ಚಳುವಳಿಯ ವಿಸ್ತರಣೆಗಾಗಿ CITU ಕರ್ನಾಟಕ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವು ಎಪ್ರಿಲ್ 4 ಮತ್ತು 5ರಂದು ಎರಡು ದಿನಗಳ ಕಾಲ ಮಂಗಳೂರಿನ ಸಂದೇಶ ಪ್ರತಿಷ್ಠಾನದಲ್ಲಿ ಜರುಗಲಿದೆ ಎಂದು ಕೇಂದ್ರ ಕಾರ್ಮಿಕ ಸಂಘಟನೆಯಾದ CITU ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಿದೆ

- Advertisement -

ಕರ್ನಾಟಕ ರಾಜ್ಯಾದ್ಯಂತ ಆಯ್ದ 250ರಷ್ಟು ಪ್ರಮುಖ CITU ನಾಯಕರು ಭಾಗವಹಿಸಲಿರುವ ಸಂಘಟನಾ ಕಾರ್ಯಾಗಾರವನ್ನು CITU ರಾಷ್ಟ್ರೀಯ ಕಾರ್ಯದರ್ಶಿಗಳಾದ ಕೆ ಎನ್ ಉಮೇಶ್ ರವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ CITU ರಾಜ್ಯಾಧ್ಯಕ್ಷರಾದ ಮೀನಾಕ್ಷಿ ಸುಂದರಂ,ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ವರಲಕ್ಷ್ಮಿ,CITU ದ.ಕ.ಜಿಲ್ಲಾಧ್ಯಕ್ಷರಾದ ಬಿ‌ಎಂ ಭಟ್ ರವರು ಭಾಗವಹಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ದ.ಕ.ಜಿಲ್ಲೆಯ ಕಾರ್ಮಿಕ ಚಳುವಳಿಯ ಹಿರಿಯ ನೇತಾರರಾದ ಜೆ ಬಾಲಕೃಷ್ಣ ಶೆಟ್ಟಿಯವರು ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಕಾರ್ಯಾಗಾರದ ಯಶಸ್ವಿಗಾಗಿ ಈಗಾಗಲೇ ಸುಮಾರು 200 ರಷ್ಟು‌ ಮಂದಿಯ ಸ್ವಾಗತ ಸಮಿತಿ ರಚನೆಯಾಗಿದ್ದು ಅದರಡಿಯಲ್ಲಿ ವಿವಿಧ ಉಪಸಮಿತಿಗಳನ್ನು ರಚಿಸಲಾಗಿದೆ.ದೇಶವನ್ನಾಳುವ ಕೇಂದ್ರ ಸರಕಾರವು ಕಾರ್ಪೊರೇಟ್ ಬಂಡವಾಳಶಾಹಿ ಪರವಾದ ನೀತಿಗಳನ್ನು ಜಾರಿಗೊಳಿಸುವ ಮೂಲಕ ಕಾರ್ಮಿಕ ವರ್ಗದ ಮೇಲೆ ತೀವ್ರ ಧಾಳಿಗಳನ್ನು ನಡೆಸುತ್ತಿದೆ. ಕಾರ್ಮಿಕ ವರ್ಗದ ಪ್ರಮುಖ ಕಾನೂನುಗಳನ್ನು ಇಲ್ಲವಾಗಿಸಿದ ಆಳುವ ವರ್ಗದ ವಿರುದ್ಧ ಸಮರಶೀಲ ಹೋರಾಟ ಚಳುವಳಿಯನ್ನು‌ ಕಟ್ಟುವ ಮೂಲಕ ದೇಶದ ಜನಸಾಮಾನ್ಯರ ಬದುಕಿಗೆ ರಕ್ಷಣೆ ನೀಡಬೇಕಾದ ಕಾರ್ಮಿಕ ವರ್ಗದ ಚಳುವಳಿವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟಲು ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.ಇಂತಹ ಮಹತ್ವದ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಎಪ್ರಿಲ್ 4 ರಂದು ಬೆಳಿಗ್ಗೆ 10 ಗಂಟೆಗೆ ಸಂದೇಶ ಪ್ರತಿಷ್ಠಾನದ ಸಭಾಂಗಣದಲ್ಲಿ ಜರುಗಲಿದ್ದು, ಜಿಲ್ಲೆಯ ವಿವಿಧ ವಿಭಾಗದ ಕಾರ್ಮಿಕರು, ಕಾರ್ಮಿಕ ವರ್ಗದ ನಾಯಕರು,ಪ್ರಗತಿಪರ ಚಿಂತಕರು, ಜೀವಪರ ಜನಪರ ಕಾಳಜಿಯುಳ್ಳ ಸಮಾನ‌ ಮನಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸ್ವಾಗತ ಸಮಿತಿಯ ಪ್ರಧಾನ‌ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಪತ್ರಿಕಾಹೇಳಿಕೆಯೊಂದರಲ್ಲಿ‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...

ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ...

ರಾಯಚೂರು | ಯರಮರಸ್ ವಿದ್ಯುತ್ ಘಟಕ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡಲು ಆಗ್ರಹ

ಯರಮರಸ್ ವಿದ್ಯುತ್ ಘಟಕಕ್ಕೆ ಭೂಮಿ ಕಳೆದುಕೊಂಡ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡದೇ...

ರಾಯಚೂರು | ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಹರಿಸದ ಅಧಿಕಾರಿಗಳ ವಿರುದ್ಧ ಅ.2ರಂದು ರೈತರಿಂದ ಮುತ್ತಿಗೆ

ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯ...