ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಭಾರೀ ಸರ್ಜರಿ, 56 ಪೊಲೀಸ್ ಸಿಬ್ಬಂದಿ ವರ್ಗಾವಣೆ

Date:

Advertisements

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ಮಾಡಲಾಗಿದ್ದು, 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ ಮಾಡಿ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಕರಾವಳಿಯ ಐಪಿಎಸ್ – ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಬಲಪಡಿಸುವ ಯತ್ನವನ್ನು ರಾಜ್ಯ ಸರ್ಕಾರ ಮಾಡಿತ್ತು.

ಕರಾವಳಿಯಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಟಾಸ್ಕ್​ಫೋರ್ಸ್ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ನಡೆದಿದೆ.

Advertisements

ಹಲವು ವರ್ಷಗಳಿಂದ ಒಂದೇ ಕಡೆ ಇದ್ದ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಬಜ್ಪೆ ಠಾಣೆ ಹೆಡ್ ಕಾನ್ಸ್‌ಟೇಬಲ್ ರಶೀದ್​ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಹೆಡ್ ಕಾನ್ಸ್‌ಟೇಬಲ್ ರಶೀದ್ ಸುಹಾಸ್ ಹಂತಕರ ಜತೆ ಕೈಜೋಡಿಸಿದ್ದರು ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು.

p 1
p 2
p 3
p 5

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ.ಕ. | ಲಾರ್ವಾ ತಾಣಗಳು ಕಂಡುಬಂದರೆ ದಂಡ: ಮನಪಾ ಆಯುಕ್ತರ ಸೂಚನೆ

ಡೆಂಗ್ಯು ಜ್ವರ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಅದರ ನಿಯಂತ್ರಣ...

ಮಂಗಳೂರು | ಪಿಎಂ ಸ್ವನಿಧಿ ಸಾಲ ಯೋಜನೆ ಮುಂದುವರಿಸಲು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳ ಸ್ವಾವಲಂಬಿ ಬದುಕಿಗಾಗಿ ಜಾರಿ ಮಾಡಿದ್ದ ಪಿಎಂ ಸ್ವನಿಧಿ ಸಾಲ...

ಮಂಗಳೂರು | ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ

ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು...

ಮಂಗಳೂರು | ಕಟ್ಟಡ ನಿರ್ಮಾಣ ಕಾರ್ಮಿಕರ ಪ್ರತಿಭಟನೆ; ಕೆಂಪು ಕಲ್ಲು, ಮರಳು ವಿತರಣೆಗೆ ತುರ್ತು ಕ್ರಮಕ್ಕೆ ಆಗ್ರಹ

ಕಳೆದ ಮೂರ್ನಾಲ್ಕು ತಿಂಗಳಿನಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದ...

Download Eedina App Android / iOS

X