ಮಂಗಳೂರು | ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ನಿಧನ

Date:

ಜಾನಪದ ತಜ್ಞ, ಕವಿ, ಕಥೆಗಾರ ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ಅವರು ಶನಿವಾರ ಬೆಳಗ್ಗೆ 9.15ಕ್ಕೆ ತಮ್ಮ ಸ್ವಗೃಹ ಸೋಮೇಶ್ವರದ “ಒಲುಮೆ“ಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

- Advertisement -

ಅಮೃತ ಸೋಮೇಶ್ವರ ಅವರು ತುಳುನಾಡಿನ ಓರ್ವ ಸಾಹಿತಿ. ಹಿರಿಯ ಜಾನಪದ ವಿದ್ವಾಂಸ. ಕಾವ್ಯ, ಸಣ್ಣಕತೆ, ನಾಟಕ, ಯಕ್ಷಗಾನ, ವಿಮರ್ಶೆ ಹಾಗೂ ಜಾನಪದ ಕ್ಷೇತ್ರದಲ್ಲಿ ವಿಶೇಷವಾಗಿ ಕೆಲಸ ಮಾಡಿದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅಮೃತ ಸೋಮೇಶ್ವರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ 1953 ಸೆಪ್ಟಂಬರ್ 27 ರಂದು ಜನಿಸಿದ್ದರು. ಇವರ ತಂದೆ ಚಿರಿಯಂಡ ಮತ್ತು ತಾಯಿ ಅಮುಣಿ ಇವರ ಮಾತೃಭಾಷೆ ಮಲಯಾಳಂ.

ಪ್ರಾರಂಭಿಕ ಶಿಕ್ಷಣ ಕೋಟೆಕಾರಿನ ಸ್ಟೆಲ್ಲಾ ಮೇರಿ ಕಾನ್ವೆಂಟ್‌ನಲ್ಲಿ ಮುಗಿಸಿದ ಅವರು ಪ್ರೌಢ ಶಿಕ್ಷಣವನ್ನ ಆನಂದಾಶ್ರಮದಲ್ಲಿ ಮಾಡಿದ್ದಾರೆ. ಆನಂತರ ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನಲ್ಲಿ ಪದವಿ ಪಡೆದು, ಮದರಾಸು ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ತಾವು ಓದಿದ ಅಲೋಷಿಯಸ್ ಕಾಲೇಜಿನಲ್ಲಿಯೇ ಅಧ್ಯಾಪಕರಾಗಿ ಕೆಲಸ ಆರಂಭಿಸಿದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಪಡೆದ ನಂತರ ಪುತ್ತೂರಿನ ಸೇಂಟ್ ಫಿಲೋಮಿನ ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಂತರ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, 1993ರಲ್ಲಿ ನಿವೃತ್ತಿ ಹೊಂದಿದ್ದಾರೆ.

ನಿವೃತ್ತಿಯ ನಂತರ ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಮಾಹಿತಿ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿದರು.

ಇವರ ಮಾತೃ ಭಾಷೆ ಮಲಿಯಾಳಂ ಆದರೂ ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಸಾಹಿತ್ಯ ರಚನೆಗೆ ತೊಡಗಿದ್ದರು. ಹೈಸ್ಕೂಲ್‌ ವಿದ್ಯಾರ್ಥಿಯಾಗಿದ್ದಾಗಲೇ ಸಾಹಿತ್ಯದ ಬಗ್ಗೆ ಒಲವು ಬೆಳೆಸಿಕೊಂಡಿದ್ದ ಅವರು ಕಥೆ, ಕವನ ರಚನೆಗೆ ತೊಡಗಿಸಿಕೊಂಡು ಯಕ್ಷಗಾನ ಪ್ರಸಂಗವೊಂದನ್ನೂ ರಚಿಸಿದ್ದರು. ಸಾಕಷ್ಟು ಧ್ವನಿಸುರುಳಿಗಳಿಗೆ ಸಾಹಿತ್ಯವನ್ನು ಒದಗಿಸಿದ ಹಿರಿಮೆ ಇವರಿಗಿದೆ. ಅಮರ ಶಿಲ್ಪಿ ವೀರ ಕಲ್ಕುಡ, ಘೋರ ಮಾರಕ, ಸಹಸ್ರ ಕವಚ ಮೋಕ್ಷ, ಕಾಯಕಲ್ಪ, ಅಮರ ವಾಹಿನಿ, ತ್ರಿಪುರ ಮಥನ, ಆದಿಕವಿ ವಾಲ್ಮೀಕಿ, ಚಾಲುಕ್ಯ ಚಕ್ರೇಶ್ವರ ಮುಂತಾದ ಮೂವತ್ತಕ್ಕೂ ಹೆಚ್ಚು ಕೃತಿ ರಚಿಸಿದ್ದಾರೆ.

ನೂರಾರು ಮಂದಿ ಕಲೆ, ಸಾಹಿತ್ಯ, ಸಂಶೋಧನಾಸಕ್ತರಿಗೆ ಸದಾ ಕಾಲ ಪ್ರೇರಕ, ಮಾರ್ಗದರ್ಶಕರಾಗಿ ಗುರುತಿಸಿಕೊಂಡವರು. ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಾಡಿನ‌ ಕೀರ್ತಿ ಹೆಚ್ಚಿಸಿದ ಅಮೃತರನ್ನು ಮಂಗಳೂರು‌ ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿ: ಬೈಕ್ ಸವಾರ ಸಾವು

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ‌ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ನೇ ಸಾಲಿನ ‘ಗೌರವಶ್ರೀ’ ಪ್ರಶಸ್ತಿ, ಮಣಿಪಾಲ ಅಕಾಡೆಮಿಯ ಮಾಹೆ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿಯಿಂದ ಸಂಘ ಸಂಸ್ಥೆಗಳ ಸನ್ಮಾನದಿಂದ ಪುರಸ್ಕೃತರಾಗಿದ್ದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ ‘ಗೌರವಶ್ರೀ’ ಪ್ರಶಸ್ತಿಯನ್ನು ಅವರ 86ನೇ ಹುಟ್ಟುದಿನದಂದು ಅವರ ಮನೆಯಲ್ಲಿಯೇ ಪ್ರದಾನ ಮಾಡಲಾಗಿತ್ತು.

ತುಳು ಭಾಷೆ ಹಾಗೂ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ 2016ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಮೃತರು ಪತ್ನಿ ನರ್ಮದಾ, ಮಕ್ಕಳಾದ ಚೇತನ್, ಜೀವನ್ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಸೋಮೇಶ್ವರ ಪುರಸಭೆ ಕಚೇರಿ ಬಳಿಯ ಅವರ ಸ್ವಗೃಹದಲ್ಲಿ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಜ.7ರಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...