ಮಂಗಳೂರು | ನಾರಾಯಣ ಗುರು ಜಯಂತಿಗೆ ಸರ್ಕಾರಿ ರಜೆ ಘೋಷಿಸುವಂತೆ ಸತ್ಯಜಿತ್ ಸುರತ್ಕಲ್ ಮನವಿ

Date:

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯಂದು ಸರ್ಕಾರಿ ರಜೆ ಘೋಷಿಸಬೇಕು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಐತಿಹಾಸಿಕ ಕಾರಣಿಕ ಪುರುಷರಾದ ‘ಕೋಟಿ ಚೆನ್ನಯ್ಯ’ರ ಹೆಸರಿಡಬೇಕು ಎಂಬುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಕೆಪಿಸಿಸಿ ಅಧ್ಯಕ್ಷ ಬಿ‌ ಕೆ ಹರಿಪ್ರಸಾದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

ಅಖಿಲ ಭಾರತ ಬಿಲ್ಲವ ಯೂನಿಯನ್ ವತಿಯಿಂದ ಆಯೋಜಿಸಲಾಗಿದ್ದ ನಾರಾಯಣ ಗುರುಗಳ ಜಯಂತಿ ಮತ್ತು ಸಾರ್ವಜನಿಕ ಸನ್ಮಾನ ಸ್ವೀಕರಿಸುತ್ತಿರುವ ಸಂದರ್ಭದಲ್ಲಿ ಸತ್ಯಜಿತ್ ಸುರತ್ಕಲ್ ಮಾಧ್ಯಮಗಳೊಂದಿಗೆ ಮಾತನಾಡಿ, “ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಅಸ್ಮಿತೆಯಾಗಿರುವ ಕಾರಣಿಕ ಪುರುಷರಾದ ಕೋಟಿ – ಚೆನ್ನಯ್ಯರ ಹೆಸರನ್ನು ಇಡಬೇಕೆಂಬುದು ಇಡೀ ಸಮಾಜ ಹಾಗೂ ಜಿಲ್ಲೆಯ ಜನರ ಬಹುಕಾಲದ ಬೇಡಿಕೆಯಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಈ ಹಿಂದೆ ಕಾಂಗ್ರೆಸ್ ವಿಪಕ್ಷದಲ್ಲಿದ್ದಾಗ ಯೂತ್ ಕಾಂಗ್ರೆಸ್ ವತಿಯಿಂದಲೂ ಈ ಬಗ್ಗೆ ಭಾರೀ ಹೋರಾಟಗಳು ನಡೆದಿದ್ದವು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರೂವರೆ ವರ್ಷ ಕಳೆದರೂ ಈ ಕಾರ್ಯ ಈಡೇರಿಲ್ಲ. ಆದ್ದರಿಂದ ಸೆಪ್ಟೆಂಬರ್‌ 18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಬೇಕು” ಎಂದು ತಿಳಿಸಿದರು.

“ರಾಜ್ಯದಲ್ಲಿ ಕನಕದಾಸ, ಮಹಾವೀರ, ಬಸವೇಶ್ವರ, ಬುದ್ಧ ಮುಂತಾದ ಯುಗಪುರುಷರ ಜಯಂತಿಗಳಿಗೆ ರಜೆ ನೀಡಿದಂತೆಯೇ, ಇಡೀ ವಿಶ್ವಕ್ಕೆ ಶಾಂತಿ, ಸಮಾನತೆ ಹಾಗೂ ನೆಮ್ಮದಿಯ ಸಂದೇಶ ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ದಿನದಂದೂ ಸಾರ್ವಜನಿಕ ರಜೆ ಘೋಷಿಸಬೇಕು” ಎಂದರು.

“ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಾರಾಯಣ ಗುರುಗಳ ಹೆಸರಿನಲ್ಲಿ ಅಭಿವೃದ್ಧಿ ನಿಗಮ ಸ್ಥಾಪಿಸಿ, ವಾರ್ಷಿಕ 500 ಕೋಟಿ ರೂ.ಗಳಂತೆ ಐದು ವರ್ಷಗಳಿಗೆ 2,500 ಕೋಟಿ ರೂಪಾಯಿ ಅನುದಾನ ಒದಗಿಸುವುದಾಗಿ ಭರವಸೆ ನೀಡಿತ್ತು. ಸರ್ಕಾರದ ಕೊನೆಯ ಅವಧಿಯಲ್ಲಾದರೂ ಬಾಕಿ ಇರುವ ಸಂಪೂರ್ಣ ಅನುದಾನವನ್ನು ಒದಗಿಸಿ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಬೆಳವಣಿಗೆಗೆ ಶಕ್ತಿ ತುಂಬಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ನುಡಿದಂತೆ ನಡೆದ ಯಮಕನಮರಡಿ ಸಿಪಿಐ ಜಾವೀದ್ ಮುಷಾಪುರಿ

“ಜನಸಂಖ್ಯೆಗೆ ಅನುಗುಣವಾಗಿ ಸಮುದಾಯದ ಅರ್ಹ, ಸಶಕ್ತ ನಾಯಕರಿಗೆ ಧಾರ್ಮಿಕ ಮಂಡಳಿಗಳು, ಸಹಕಾರಿ ಸಂಸ್ಥೆಗಳು ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಮಾನ ಪ್ರಾತಿನಿಧ್ಯ ಮತ್ತು ಅಧಿಕಾರಾವಕಾಶ ಕಲ್ಪಿಸಬೇಕು. ಸಮುದಾಯದ ಹೆಮ್ಮೆಯ ನಾಯಕ ಬಿ ಕೆ ಹರಿಪ್ರಸಾದ್ ಅವರು ಈ ಎಲ್ಲ ನ್ಯಾಯಯುತ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಹಂತದಲ್ಲಿ ತಮ್ಮ ಬೇಡಿಕೆ ಈಡೇರಿಸುವರೆಂದು ನಂಬಿದ್ದೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಮೇಹಿಗಳಿಗೆ ಸಿಹಿಸುದ್ದಿ: ಇನ್ಸುಲಿನ್, ಮಾತ್ರೆಗಳ ಹಂಗಿಲ್ಲದೆ ‘ಶುಗರ್’ ನಿಯಂತ್ರಿಸುವ ಹೊಸ ಸಾಧನ!

ಇನ್ಸುಲಿನ್ ಮತ್ತು ನಿರಂತರ ಮಾತ್ರೆಗಳ ಹಂಗಿಲ್ಲದೆ ಮಧುಮೇಹವನ್ನು (ಸಕ್ಕರೆ ಕಾಯಿಲೆ) ಪರಿಣಾಮಕಾರಿಯಾಗಿ...

ಶಾಂತಿ ಮಾತುಕತೆ ಬೆನ್ನಲ್ಲೇ ಕೀವ್ ಮೇಲೆ ರಷ್ಯಾ ಕ್ಷಿಪಣಿ ದಾಳಿ; 2 ಸಾವು, 34 ಮಂದಿಗೆ ಗಾಯ

ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸುವ ಕುರಿತು ಅಮೆರಿಕದ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆದ ಕೆಲವೇ...

ಉಡುಪಿಯಲ್ಲಿ ಅ.25ರಂದು ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ 5ನೇ ಶಾಖೆ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ...

ನ.1ರಿಂದ GST ವಿನಾಯಿತಿ ಸಡಿಲಿಕೆ; ಉದ್ದೇಶಿತ ಬದಲಾವಣೆಗಳೇನು?

ಸಣ್ಣ ಇ-ಕಾಮರ್ಸ್ ಮಾರಾಟಗಾರರಿಗೆ GST ನೋಂದಣಿ ಸರಳಗೊಳಿಸುವುದು, ತೆರಿಗೆ ಮರುಪಾವತಿಯನ್ನು ತ್ವರಿತಗೊಳಿಸುವುದು...