ಮಂಗಳೂರು | ನಗರಾಭಿವೃದ್ಧಿಗೆ ಭಾರೀ ಉತ್ತೇಜನ : 25 ಕಾಮಗಾರಿಗಳಿಗೆ ₹200 ಕೋಟಿ ಅನುದಾನ

Date:

ರಾಜ್ಯದಲ್ಲಿ ನಗರಗಳ ಸಮಗ್ರ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ–2) ಅಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ 25 ಕಾಮಗಾರಿಗಳಿಗೆ ₹200 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಿಳಿಸಿದೆ. ಈ ವಿಷಯವನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

- Advertisement -

ಶನಿವಾರ ನಗರದ ಉರ್ವಸ್ಟೋರ್‌ನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿವಿಧ ನಗರಾಭಿವೃದ್ಧಿ ಯೋಜನೆಗಳಿಗೆ ಒಟ್ಟು ₹2,600 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ರಾಜ್ಯದ ನಗರಗಳ ಅಭಿವೃದ್ಧಿಗೆ ₹24,000 ಕೋಟಿ ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಮಹಾರಾಷ್ಟ್ರ, ತಮಿಳುನಾಡು ಹಾಗೂ ಕರ್ನಾಟಕ ದೇಶದಲ್ಲಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಾಗಿದ್ದು, ಕರ್ನಾಟಕಕ್ಕೆ ಅದರಲ್ಲಿನ ಕೇವಲ 10ರಿಂದ 12 ಶೇಕಡಾ ಮಾತ್ರ ಹಿಂದಿರುಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯದ 13 ಮಹಾನಗರ ಪಾಲಿಕೆಗಳಿಗೆ ಸಮಾನವಾಗಿ ಅನುದಾನ ಹಂಚಿಕೆ ಮಾಡಲಾಗಿದ್ದು, ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು. ಮಂಗಳೂರು ನಗರದ ಒಳಚರಂಡಿ ಕಾಮಗಾರಿಗಳಿಗೆ ಈಗಾಗಲೇ ₹40 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಮಂಗಳೂರು ನಗರಾಭಿವೃದ್ಧಿಗೆ ₹165 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿದಕ್ಕಾಗಿ ನಗರಾಭಿವೃದ್ಧಿ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು.

ಜಿಲ್ಲೆಯಲ್ಲಿ ಸುಮಾರು ₹100 ಕೋಟಿ ವೆಚ್ಚದಲ್ಲಿ ಕಿಯೋನಿಕ್ಸ್ ಮೂಲಕ ಐಟಿ ಪಾರ್ಕ್ ಸ್ಥಾಪನೆಗೆ ಯೋಜನೆ ರೂಪಿಸಲಾಗಿದ್ದು, ಕರಾವಳಿ ಪ್ರದೇಶದ ರಸ್ತೆ ಅಭಿವೃದ್ಧಿಗೂ ವಿಶೇಷ ಯೋಜನೆ ಸಿದ್ಧವಾಗಿದೆ. ನದಿ ತೀರ ಪ್ರದೇಶಗಳಲ್ಲಿ ಅತಿಕ್ರಮಣ ತಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇದಲ್ಲದೆ, ವೆನ್ಲಾಕ್ ಆಸ್ಪತ್ರೆಯಲ್ಲಿ ₹70 ಕೋಟಿ ವೆಚ್ಚದಲ್ಲಿ ಒಪಿಡಿ ಬ್ಲಾಕ್ ನಿರ್ಮಾಣ, ಕುದ್ಮಲ್ ರಂಗರಾವ್ ಸ್ಮಾರಕ ಹಾಗೂ ಅಂಬೇಡ್ಕರ್ ವೃತ್ತದ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

“ಸರಕಾರದ ಹಣವೆಂದರೆ ಜನರ ಹಣ. ರಾಜ್ಯ ಅಥವಾ ಕೇಂದ್ರದ ಅನುದಾನ ಎಂದು ಬೇಧಿಸದೆ ಅಭಿವೃದ್ಧಿಗೆ ಬಳಸಬೇಕು. ಒಳಚರಂಡಿ ಯೋಜನೆಗೆ ಇನ್ನಷ್ಟು ಅನುದಾನ ಅಗತ್ಯವಿದೆ,” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದ ವ್ಯಾಸ ಕಾಮತ್ ಮಾತನಾಡಿ, ಮಂಗಳೂರು ನಗರದ ಒಳಚರಂಡಿ ವ್ಯವಸ್ಥೆಗೆ ₹1,000 ಕೋಟಿ ಅನುದಾನ ನೀಡುವಂತೆ ಆಗ್ರಹಿಸಿದರು. ಹಿಂದಿನ ಅವಧಿಯಲ್ಲಿ ನಿಂತಿದ್ದ ಕಾಮಗಾರಿಗಳನ್ನು ಪುನರಾರಂಭಿಸಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್. ಲೋಬೊ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃಕ್ಷಥಾನ್ ಹೆರಿಟೇಜ್ ರನ್ 2026: ತೆರೆಮರೆಯ ಸಾಧಕರಿಗೆ ಗೌರವ

ಕ್ರೀಡೆ, ಪಾರಂಪರಿಕ ಕ್ಷೇತ್ರ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಮನಾರ್ಹ ಸೇವೆ...

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...