ಮಂಗಳೂರು | ಕುಡಿಯುವ ನೀರಿನ ಪೂರೈಕೆಗೆ ಸ್ಪೀಕರ್ ಖಾದರ್ ಕಟ್ಟು ನಿಟ್ಟಿನ ಸೂಚನೆ, “ಜಲ್ ಜೀವನ್ ಮಿಷನ್, ಸಂಪರ್ಕ ಕೊಟ್ಟರೂ ನೀರು ಎಲ್ಲಿದೆ ?

Date:

ಸಾರ್ವಜನಿಕರಿಗೆ ಬೇಸಿಗೆ ಸಂದರ್ಭದಲ್ಲೂ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

- Advertisement -

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಪರಿಸ್ಥಿತಿಯನ್ನು ಪರಿಶೀಲಿಸಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಗ್ರಾಮ ಪಂಚಾಯತ್‌ಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಯಾವುದೇ ಅಡೆತಡೆ ಇಲ್ಲದೆ ನಿರಂತರವಾಗಿ ನೀರು ಪೂರೈಸುವಂತೆ ಕ್ರಮವಹಿಸಬೇಕು. ಸ್ಥಳೀಯ ಮಟ್ಟದಲ್ಲಿ ಎದುರಾಗುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ, ಲಭ್ಯ ಅನುದಾನವನ್ನು ಬಳಸಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರ ದೂರುಗಳಿಗೆ ಶೀಘ್ರ ಸ್ಪಂದನೆ ನೀಡುವುದು ಅಗತ್ಯ ಎಂದು ಅವರು ತಿಳಿಸಿದರು.

WhatsApp Image 2026 04 08 at 3.46.19 PM

ಜಲ್ ಜೀವನ್ ಮಿಷನ್ ಜಾರಿಗೆ ಒತ್ತು

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ ಜಲ್ ಜೀವನ್ ಮಿಷನ್ ಅಡಿಯಲ್ಲಿ ಪ್ರತಿಯೊಂದು ಮನೆಗೂ ನೀರಿನ ಸಂಪರ್ಕ ಕಲ್ಪಿಸುವ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಬೇಕು. ನಿರ್ಮಿತ ಟ್ಯಾಂಕ್‌ಗಳಿಗೆ ನೀರಿನ ಮೂಲಗಳಿಂದ ಸಮರ್ಪಕವಾಗಿ ನೀರು ತಲುಪಿಸಿ ಜನವಸತಿ ಪ್ರದೇಶಗಳಿಗೆ ನಿರಂತರ ಸರಬರಾಜು ಖಚಿತಪಡಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಸೂಚಿಸಿದರು.

ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವಲ್ಲಿ ವಿಳಂಬವಾಗಬಾರದು. ಪೈಪ್‌ ಅಳವಡಿಕೆಗಾಗಿ ಅಗೆದಿರುವ ರಸ್ತೆಗಳನ್ನು ತಕ್ಷಣ ಪುನಃಸ್ಥಾಪನೆ ಮಾಡಬೇಕು. ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅವರು ನಿರ್ದೇಶನ ನೀಡಿದರು.

ಇದೇ ವೇಳೆ, ಜಲ್ ಜೀವನ್ ಮಿಷನ್ ಅಡಿಯಲ್ಲಿ ಇನ್ನೂ ಸಂಪರ್ಕ ಸಿಗದ ಮನೆಗಳಿಗೆ ಮೀಟರ್ ಅಳವಡಿಕೆ ಕಾರ್ಯವನ್ನು ವೇಗಗೊಳಿಸಬೇಕು. ಬಾಕಿ ಇರುವ ಮನೆಗಳ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ, ಹೆಚ್ಚುವರಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಮಾತನಾಡಿ, ಕುಡಿಯುವ ನೀರಿನ ಯೋಜನೆಗಳು ಸಂಪೂರ್ಣಗೊಂಡ ಬಳಿಕವೇ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಬೇಕು. ಅಪೂರ್ಣ ಕಾಮಗಾರಿಗಳನ್ನು ಹಸ್ತಾಂತರಿಸಲು ಒತ್ತಡ ಹೇರುವಂತಿಲ್ಲ. ಗುತ್ತಿಗೆದಾರರು ಒಂದು ವರ್ಷದವರೆಗೆ ನಿರ್ವಹಣೆ ಹೊಣೆ ಹೊರುವುದಾಗಿ ತಿಳಿಸಿದರು.

ಸಭೆಯ ನಂತರ ಸ್ಪೀಕರ್ ಉಳ್ಳಾಲ ತಾಲೂಕಿನ ಗ್ರಾಮೀಣ ಪ್ರದೇಶಗಳು ಸೇರಿದಂತೆ ಕೋಟೆಕಾರ್, ಸೋಮೇಶ್ವರ ಹಾಗೂ ಉಳ್ಳಾಲ ಪಟ್ಟಣಗಳಲ್ಲಿ ನೀರಿನ ಪರಿಸ್ಥಿತಿಯನ್ನು ಪರಿಶೀಲಿಸಿದರು.

WhatsApp Image 2026 04 08 at 3.15.47 PM 1

“ಪೈಪ್ ಇದೆ, ನೀರು ಇಲ್ಲ; ಜಲ್ ಜೀವನ್ ಮಿಷನ್ ಜಾರಿಗೆ ಪ್ರಶ್ನೆ”

ಈ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಸಾಮಾಜಿಕ ಹೋರಾಟಗಾರ ಮುನೀರ್ ಪದ್ರಂಗಿ, 2019ರಲ್ಲಿ ಕೇಂದ್ರ ಸರ್ಕಾರ ಆರಂಭಿಸಿದ ಜಲ್ ಜೀವನ್ ಮಿಷನ್ ಯೋಜನೆಯ ಪ್ರಗತಿ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದರು.

“ಪ್ರತಿ ಮನೆಗೂ ಕುಡಿಯುವ ನೀರಿನ ಸರಬರಾಜು ಮಾಡುವ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಗಿದೆ. ಆದರೆ 2026ರವರೆಗೆ ಇದು ಎಷ್ಟರ ಮಟ್ಟಿಗೆ ಸಾಧನೆಯಾಗಿದೆ ಎಂಬುದನ್ನು ಸಮಗ್ರವಾಗಿ ಪರಿಶೀಲಿಸುವ ಅಗತ್ಯವಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಬಗ್ಗೆ ಉತ್ತರ ನೀಡಬೇಕು,” ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 3-4 ವರ್ಷಗಳಿಂದ ಬಹುತೇಕ ಗ್ರಾಮಗಳಲ್ಲಿ ಪೈಪ್‌ಲೈನ್ ಅಳವಡಿಕೆ ಕಾರ್ಯ ನಡೆದಿದೆ. ಮನೆ ಮನೆಗೆ ನಳ ಸಂಪರ್ಕ ನೀಡಲಾಗಿದೆ. ಆದರೆ ಆ ನಳಗಳಲ್ಲಿ ನಿರಂತರವಾಗಿ ನೀರು ಬರುತ್ತಿದೆಯೇ, ಜನರಿಗೆ ಅದು ಉಪಯುಕ್ತವಾಗಿದೆಯೇ ಎಂಬುದರ ಬಗ್ಗೆ ಸರ್ಕಾರ ಅಥವಾ ಯೋಜನೆ ಅಧಿಕಾರಿಗಳು ಸಮರ್ಪಕವಾಗಿ ಗಮನ ಹರಿಸಿಲ್ಲ ಎಂದು ಅವರು ಆರೋಪಿಸಿದರು.

ವಿಶೇಷವಾಗಿ ಯು.ಟಿ. ಖಾದರ್ ಅವರು ಅಧಿಕಾರಿಗಳ ಮಟ್ಟದಲ್ಲಿ ಈ ಪ್ರಶ್ನೆಯನ್ನು ಗಂಭೀರವಾಗಿ ತೆಗೆದುಕೊಂಡು, “ನಳ ಸಂಪರ್ಕ ನೀಡಿರುವ ಮನೆಗಳಲ್ಲಿ ನೀರು ಏಕೆ ಬರುತ್ತಿಲ್ಲ?” ಎಂಬುದಕ್ಕೆ ಸ್ಪಷ್ಟ ಉತ್ತರ ಕೇಳಬೇಕು ಎಂದು ಒತ್ತಾಯಿಸಿದರು.

ಮಾರ್ಚ್-ಏಪ್ರಿಲ್ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಅಭಾವ ತೀವ್ರಗೊಳ್ಳುತ್ತದೆ. ಕರಾವಳಿ ಭಾಗಗಳಲ್ಲಿ ಕೆಲವಡೆ ಜನರು ನೀರಿನ ಸಮಸ್ಯೆಯಿಂದ ವಲಸೆ ಹೋಗುವ ಪರಿಸ್ಥಿತಿಯೂ ಎದುರಾಗುತ್ತದೆ. ಹಳ್ಳಿಗಳಲ್ಲಿಯೂ ನೀರಿನ ಕೊರತೆ ಸಾಮಾನ್ಯವಾಗಿದೆ ಎಂದು ಅವರು ಹೇಳಿದರು.

“ಸರ್ಕಾರ ಜಲ್ ಜೀವನ್ ಮಿಷನ್ ಯೋಜನೆಯನ್ನು ಯಾವ ಉದ್ದೇಶದಿಂದ ಆರಂಭಿಸಿತೋ, ಅದನ್ನು ನೆಲಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಯೋಜನೆಯ ದೋಷಗಳು ಏನು ಎಂಬುದನ್ನು ಜನತೆಗೆ ಸ್ಪಷ್ಟಪಡಿಸಿ, ಅವುಗಳನ್ನು ಸರಿಪಡಿಸುವ ಕ್ರಮ ಕೈಗೊಳ್ಳಬೇಕು,” ಎಂದು ಮುನೀರ್ ಪದ್ರಂಗಿ ಆಗ್ರಹಿಸಿದರು.

ಯೋಜನೆಯ ಹಿನ್ನೆಲೆ

ಜಲ್ ಜೀವನ್ ಮಿಷನ್ ಅನ್ನು 2019ರಲ್ಲಿ ಆರಂಭಿಸಲಾಗಿದ್ದು, 2024ರೊಳಗೆ ಗ್ರಾಮೀಣ ಭಾರತದಲ್ಲಿನ ಪ್ರತಿಯೊಂದು ಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಒದಗಿಸುವುದು ಇದರ ಉದ್ದೇಶ. ಈ ಯೋಜನೆಯಡಿ ‘ಹರ್ ಘರ್ ಜಲ್’ ಅಭಿಯಾನವನ್ನು ಜಾರಿಗೆ ತರಲಾಗಿದೆ. ಆದರೆ ನೆಲಮಟ್ಟದಲ್ಲಿ ಕಾರ್ಯಗತಗೊಳಿಸುವಲ್ಲಿ ವಿಳಂಬ, ಮೂಲ ನೀರಿನ ಕೊರತೆ, ನಿರ್ವಹಣಾ ಸಮಸ್ಯೆಗಳು ಪ್ರಮುಖ ಸವಾಲುಗಳಾಗಿ ಪರಿಣಮಿಸಿರುವುದು ವಿವಿಧ ಪ್ರದೇಶಗಳಲ್ಲಿ ಕಂಡುಬರುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...