ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

Date:

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ.

- Advertisement -

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್‍ನಲ್ಲಿರುವ ಹಾನಿಕಾರಕ ರಾಸಾಯನಿಕಗಳು ಬಿಸಿ ಆಹಾರಕ್ಕೆ ಸೇರಿ ಕ್ಯಾನ್ಸರ್ ರೋಗಕ್ಕೆ ಕಾರಣವಾಗುತ್ತಿದೆ. ಹೋಟೆಲ್, ಕ್ಯಾಂಟೀನ್‍ಗಳಿಂದ ಹೆಚ್ಚಾಗಿ ಕಾರ್ಮಿಕರು ಅಥವಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಬಿಸಿ ಆಹಾರ ಪದಾರ್ಥಗಳನ್ನು ಕೊಂಡೊಯ್ಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಕವರ್, ನ್ಯೂಸ್ ಪೇಪರ್‍ಗಳಲ್ಲಿ ಬಿಸಿ ಆಹಾರ ಪದಾರ್ಥಕ್ಕೆ ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್, ತಂಬಾಕು ಸೇವನೆ ನಿಷೇಧ, ಎಚ್ಚರಿಕೆಯ ಫಲಕ ಇಲ್ಲದೆ ಇರುವುದು, ಅಂಗಡಿ, ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರ್ ಲೈಟರ್, ಬೆಂಕಿ ಪೊಟ್ಟಣಗಳನ್ನು ಇಟ್ಟರೆ ಅವರಿಗೆ ದಂಡÀ ವಿಧಿಸಬೇಕು. ತಂಬಾಕು ಬ್ರಾಂಡ್ ಹೆಸರಿನೊಂದಿಗೆ ಜಾಹಿರಾತು ಫಲಕಗಳು ಅಥವಾ ಯಾವುದೇ ರೀತಿಯಲ್ಲಿ ತಂಬಾಕು ಉತ್ಪನ್ನಗಳ ಪ್ರಚಾರ, 21 ವರ್ಷದೊಳಗಿನವರಿಗೆ ತಂಬಾಕು ಮಾರಾಟ ಮಾಡಿದರೆ, ಚಿಲ್ಲರೆ ಅಂಗಡಿಗಳಲ್ಲಿ ಸಿಗರೇಟ್, ತಂಬಾಕು ಉತ್ಪನ್ನಗಳ ಪ್ರದರ್ಶನ ಮಾಡಿದರೆ ದಂಡ ವಿಧಿಸಲು ಅಪರ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಾಲಾ ಕಾಲೇಜುಗಳ 100 ಮೀಟರ್ ಅಂತರದೊಳಗೆ ತಂಬಾಕು ಮಾರಾಟ ಮಾಡುವವರ ಬಗ್ಗೆ ಶಾಲಾ-ಕಾಲೇಜುಗಳ ಮುಖ್ಯಸ್ಥರು ನಿಗಾವಹಿಸಬೇಕು. ಅಂತಹ ಅಂಗಡಿಗಳ ಪಟ್ಟಿಯನ್ನು ತಮ್ಮ ವ್ಯಾಪಿಯಲ್ಲಿರುವ ಸ್ಥಳಿಯಾಡಳಿತಕ್ಕೆ ಮತ್ತು ಪೆÇಲೀಸ್ ಠಾಣೆಗೆ ಕಡ್ಡಾಯವಾಗಿ ಸಲ್ಲಿಸಬೇಕು. ಪೋಲಿಸ್ ಇಲಾಖೆ, ಶಿಕ್ಷಣ ಇಲಾಖೆ, ಸ್ಥಳೀಯಾಡಳಿತ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಜಿಲ್ಲೆಯಲ್ಲಿ ತಂಬಾಕು ಮಾರಾಟ ಮತ್ತು ಸೇವನೆಯನ್ನು ನಿಯಂತ್ರಿಸಬಹುದು ಎಂದು ರಾಜು ಕೆ. ತಿಳಿಸಿದರು.

ಶಾಲಾ ಕಾಲೇಜುಗಳಲ್ಲಿ 100 ಮೀಟರ್ ಅಂತರದೊಳಗೆ ತಂಬಾಕು ಮಾರಾಟ ನಿಷೇಧ ಬೋರ್ಡ್ ಕಡ್ಡಾಯವಾಗಿ ಹಾಕಬೇಕು ಮತ್ತು ತಂಬಾಕು ಉತ್ಪನ್ನಗಳನ್ನು ಬಳಸದಂತೆ ಸೂಕ್ತ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ತಂಬಾಕಿಗೆ ಸಂಬಂಧಿಸಿದಂತೆ ಜಾಹೀರಾತು ಫಲಕಗಳು ಕಂಡು ಬಂದಿದ್ದು, ತಂಬಾಕು ನಿಯಂತ್ರಣ ಕಾಯ್ದೆ ಪ್ರಕಾರ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ತಂಬಾಕಿನ ಅಪಾಯಕ್ಕೆ ಸಿಲುಕುವ ರಿಕ್ಷಾ ಚಾಲಕರು, ಕಟ್ಟಡ ಕಾರ್ಮಿಕರು, ಪೌರ ಕಾರ್ಮಿಕರು ಇರುವ ಸ್ಥಳಕ್ಕೆ ಹೋಗಿ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವಿಸಿದವರಿಗೆ ಮತ್ತು ಗುಟ್ಕಾ ಜಗಿದು ಉಗಿಯುವವರಿಗೆ 1000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಅಂಗಡಿಗಳಲ್ಲಿ ಚಿಲ್ಲರೆ ಸಿಗರೇಟ್ ಮಾರಾಟ ಮಾಡಲು ಅವಕಾಶವಿಲ್ಲ. ಇದನ್ನು ಉಲ್ಲಂಘಿಸಿದ ಅಂಗಡಿಗಳಿಗೂ ದಂಡ ವಿಧಿಸಲಾಗುವುದು. ಕೋಟ್ಪಾ ಕಾರ್ಯಾಚರಣೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 2,587 ಪ್ರಕರಣ ದಾಖಲಾಗಿದ್ದು, ರೂ 3.89 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ತಂಬಾಕಿಗೆ ಸಂಬಂಧಿಸಿದಂತೆ ಸುಮಾರು 52 ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗಿದೆ. ತಂಬಾಕು ಉತ್ಪನ್ನ ಪ್ಯಾಕ್‍ನಲ್ಲಿ ಆರೋಗ್ಯ ಎಚ್ಚರಿಕೆಯ ಚಿತ್ರಗಳು ಶೇ.85 ಕ್ಕಿಂತ ಕಡಿಮೆ ಅಳತೆಯಲ್ಲಿದ್ದರೆ ಮತ್ತು ಹಳೆಯದಾದ ಎಚ್ಚರಿಕೆಯ ಚಿತ್ರಗಳನ್ನು ಹಾಕಿದರೆ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನವೀನ್‍ಚಂದ್ರ ಕುಲಾಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಕಬ್ಬು ಬೆಳೆಗಾರರು ಮುತ್ತಿಗೆ

ಕಬ್ಬು ಬೆಳೆಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕಳೆದ...

ಕೊಡಗು ಅಭಿವೃದ್ಧಿ ವಿಚಾರಗಳ ಕುರಿತು ಯುವ ಸಂಸತ್‌ನಲ್ಲಿ ಚರ್ಚೆ

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಕ್ಷೇತ್ರಕ್ಕೆ ಎದುರಾಗಿರುವ ಹಿನ್ನಡೆ, ಮಾನವ-ವನ್ಯಜೀವಿ...

ಕಾರ್ಖಾನೆಗಳ ವಿಸ್ತರಣೆಗೆ ವಿರೋಧ: ಕೊಪ್ಪಳ-ಭಾಗ್ಯನಗರ ಬಂದ್‌ಗೆ ಉತ್ತಮ ಸ್ಪಂದನೆ

ತಾಲ್ಲೂಕು ವ್ಯಾಪ್ತಿಯಲ್ಲಿ ಪರಿಸರಕ್ಕೆ ಕಾರ್ಖಾನೆಗಳು ಮಾಲಿನ್ಯ ಉಂಟು ಮಾಡುತ್ತಿರುವ ನಡುವೆಯೇ ಮತ್ತಷ್ಟು...

ವಿಜಯಪುರ | ವಿವಿಧ ನಿಗಮಗಳ ಯೋಜನೆಗಳಡಿ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ

ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳಡಿ...