ಮಂಗಳೂರು | ಡಿಜಿಟಲ್ ಜನಗಣತಿ ಆರಂಭ: ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ

Date:

ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ–1948ರಡಿ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ದೇಶದ ಮೊದಲ ಡಿಜಿಟಲ್ ಜನಗಣತಿ ಕಾರ್ಯ ಆರಂಭಗೊಂಡಿದೆ.

- Advertisement -

ಈ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತಿದ್ದು, ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಸಾರ್ವಜನಿಕರ ಸಹಭಾಗಿತ್ವವನ್ನು ಉತ್ತೇಜಿಸಲು ಸ್ವಯಂ ಮನೆ ಗಣತಿ (Self Enumeration) ಮಾಡಲು ಅವಕಾಶ ಕಲ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕಾಯ್ದೆಯ ಪ್ರಕಾರ ನಾಗರಿಕರ ಹೆಸರು ಹಾಗೂ ವೈಯಕ್ತಿಕ ಮಾಹಿತಿ ಸಂಪೂರ್ಣ ಗೌಪ್ಯವಾಗಿ ಉಳಿಸಲಾಗುತ್ತದೆ. ಸಂಗ್ರಹಿಸಲಾದ ದತ್ತಾಂಶವನ್ನು ಯಾವುದೇ ತೆರಿಗೆ ಅಥವಾ ತನಿಖಾ ಉದ್ದೇಶಗಳಿಗೆ ಬಳಸುವುದಿಲ್ಲ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.

ಏಪ್ರಿಲ್ 1ರಿಂದ 15ರವರೆಗೆ ಸಾರ್ವಜನಿಕರು ನಿರ್ದೇಶನಾಲಯ ನೀಡಿರುವ ಸರಳ ಹಂತಗಳನ್ನು ಅನುಸರಿಸಿ ಕೇವಲ 15–20 ನಿಮಿಷಗಳಲ್ಲಿ ಆನ್‌ಲೈನ್ ಮೂಲಕ ತಮ್ಮ ಮನೆಯ ಸ್ವಯಂ ಗಣತಿಯನ್ನು ಪೂರ್ಣಗೊಳಿಸಬಹುದು. ಈ ಪ್ರಕ್ರಿಯೆಯ ನಂತರ ಏಕೀಕೃತ ಸ್ವಯಂ ಗಣತಿ ಗುರುತಿನ ಸಂಖ್ಯೆ (Self Enumeration ID) ಲಭ್ಯವಾಗುತ್ತದೆ.

ಪರಿಶೀಲನೆಗಾಗಿ ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಈ ಐಡಿಯನ್ನು ನೀಡುವ ಮೂಲಕ ಮನೆ ಗಣತಿ ಕಾರ್ಯವನ್ನು ಪೂರ್ಣಗೊಳಿಸಬಹುದಾಗಿದೆ. ಸಂಗ್ರಹಿಸಲಾದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಲು ಗಣತಿದಾರರು ಹಾಗೂ ಮೇಲ್ವಿಚಾರಕರು ಪರಿಶೀಲನೆ ನಡೆಸಲಿದ್ದಾರೆ.

“ವಿಕಸಿತ ಭಾರತ @ 2047” ಗುರಿಗೆ ಕೈಜೋಡಿಸಲು ಮಂಗಳೂರು ತಾಲೂಕಿನ ಸಾರ್ವಜನಿಕರು https://se.census.gov.in ಮೂಲಕ ತಮ್ಮ ಮನೆ ಗಣತಿಯನ್ನು ಆನ್‌ಲೈನ್‌ನಲ್ಲಿ ಮಾಡಿಕೊಳ್ಳುವಂತೆ ತಹಸೀಲ್ದಾರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...