ಮಂಗಳೂರು ಪಿಲಿಕುಳಕ್ಕೆ ಹೊಸ ರೂಪ: 339.90 ಎಕರೆ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್

Date:

ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ವಿಜ್ಞಾನ, ಪರಿಸರ, ಶಿಕ್ಷಣ ಹಾಗೂ ಪ್ರವಾಸೋದ್ಯಮ ಒಳಗೊಂಡ ಸಮಗ್ರ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗುತ್ತಿದ್ದು, ಇದಕ್ಕಾಗಿ ಶೀಘ್ರದಲ್ಲೇ ಟೆಂಡರ್ ಕರೆಯುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರಂ ಸಿಂಗ್​ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

- Advertisement -

ಬೆಂಗಳೂರಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ವಿಜ್ಞಾನಿಗಳು ಹಾಗೂ ವಿವಿಧ ಅಧೀನ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಇಲಾಖೆಯ ಪ್ರಮುಖ ಯೋಜನೆಗಳು ಮತ್ತು ಮುಂದಿನ ಕಾರ್ಯಕ್ರಮಗಳ ಕುರಿತು ಸಮಗ್ರ ಮಾಹಿತಿ ಪಡೆದು, ಪಿಲಿಕುಳದ ಅಭಿವೃದ್ಧಿ ಕುರಿತು ವಿಶೇಷವಾಗಿ ಚರ್ಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

“ಲಭ್ಯವಿರುವ ಜಮೀನಿನ ಸಮರ್ಪಕ ಬಳಕೆ, ಈಗಿರುವ ಸೌಲಭ್ಯಗಳ ಉನ್ನತೀಕರಣ, ಹೊಸ ಆಕರ್ಷಣೆಗಳ ಅಭಿವೃದ್ಧಿ, ವಿಜ್ಞಾನ ಶಿಕ್ಷಣ, ಪರಿಸರ ಮತ್ತು ಜೈವವೈವಿಧ್ಯ ಸಂರಕ್ಷಣೆ ಹಾಗೂ ಪ್ರವಾಸಿಗರಿಗೆ ಉತ್ತಮ ಅನುಭವ ನೀಡುವ ಅಂಶಗಳನ್ನು ಮಾಸ್ಟರ್ ಪ್ಲ್ಯಾನ್‌ನಲ್ಲಿ ಸೇರಿಸಬೇಕು” ಎಂದು ಸೂಚಿಸಿದ್ದಾರೆ.

“ಪಿಲಿಕುಳದಲ್ಲಿ ಉತ್ತಮ ಭೂಮಿ, ಪ್ರಕೃತಿ ಸಂಪತ್ತು ಹಾಗೂ ಈಗಾಗಲೇ ವಿಜ್ಞಾನ ಮತ್ತು ಪ್ರವಾಸೋದ್ಯಮಕ್ಕೆ ಪೂರಕವಾದ ಮೂಲಸೌಕರ್ಯ ಇದೆ. ಇದನ್ನು ತುಂಡು-ತುಂಡಾಗಿ ಅಭಿವೃದ್ಧಿಪಡಿಸುವ ಬದಲು ಮುಂದಿನ 10–15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ಮಾಸ್ಟರ್ ಪ್ಲ್ಯಾನ್‌ ರೂಪಿಸಬೇಕು. ಪಿಲಿಕುಳವನ್ನು ದೇಶದ ಪ್ರಮುಖ ವಿಜ್ಞಾನ ಮತ್ತು ಪರಿಸರ ಪ್ರವಾಸೋದ್ಯಮ ತಾಣಗಳಲ್ಲಿ ಒಂದಾಗಿ ಬೆಳೆಸುವ ಸಾಧ್ಯತೆಗಳನ್ನು ಪರಿಶೀಲಿಸಬೇಕು” ಎಂದು ಹೇಳಿದ್ದಾರೆ.

“ಪಿಲಿಕುಳದ ಅಭಿವೃದ್ಧಿಯಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವ(PPP) ಮಾದರಿಯಲ್ಲಿ ಯಾವ ಯೋಜನೆಗಳನ್ನು ಕೈಗೆತ್ತಿಕೊಳ್ಳಬಹುದು, ಯಾವ ಸೌಲಭ್ಯಗಳನ್ನು ವಾಣಿಜ್ಯವಾಗಿ ಮತ್ತು ಸುಸ್ಥಿರವಾಗಿ ನಿರ್ವಹಿಸಬಹುದು ಹಾಗೂ ನಿಸರ್ಗಧಾಮವನ್ನು ಆರ್ಥಿಕವಾಗಿ ಸದೃಢಗೊಳಿಸಲು ಯಾವ ರೀತಿಯ ಆದಾಯ ಮಾದರಿಗಳನ್ನು ರೂಪಿಸಬಹುದು ಎಂಬುದನ್ನು ಮಾಸ್ಟರ್ ಪ್ಲ್ಯಾನ್‌ನಲ್ಲಿ ಸಮಗ್ರವಾಗಿ ಅಧ್ಯಯನ ಮಾಡಬೇಕು” ಎಂದು ಸೂಚಿಸಿದ್ದಾರೆ.

“ಸರ್ಕಾರದ ಅನುದಾನವನ್ನೇ ಅವಲಂಬಿಸುವ ವ್ಯವಸ್ಥೆಯ ಬದಲು, ಪಿಲಿಕುಳ ತನ್ನ ವೈಶಿಷ್ಟ್ಯವನ್ನು ಉಳಿಸಿಕೊಂಡೇ ಆರ್ಥಿಕವಾಗಿ ಸದೃಢವಾಗುವ ಮಾದರಿ ರೂಪಿಸಬೇಕು. ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸುವಂತಹ ಸೌಲಭ್ಯಗಳು, ವಿಜ್ಞಾನ ಚಟುವಟಿಕೆಗಳು ಹಾಗೂ ವಿಶಿಷ್ಟ ಅನುಭವಗಳನ್ನು ಅಭಿವೃದ್ಧಿಪಡಿಸುವ ಸಾಧ್ಯತೆಗಳನ್ನು ಮಾಸ್ಟರ್ ಪ್ಲ್ಯಾನ್ ಪರಿಶೀಲಿಸಬೇಕು. ವಿಜ್ಞಾನವನ್ನು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಹೆಚ್ಚು ಆಕರ್ಷಕ ಹಾಗೂ ಅನುಭವಾಧಾರಿತವಾಗಿ ತಲುಪಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲೂ ಸೈನ್ಸ್ ಗ್ಯಾಲರಿ ಸ್ಥಾಪಿಸುವ ಕುರಿತ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿದ್ದೀರಾ? ದಸರಾ ಕಲಾ ಕೆಲಸಗಳನ್ನು ನೇರವಾಗಿ ಕಲಾವಿದರಿಗೆ ನೀಡಲು ಆಗ್ರಹ

ಬೆಂಗಳೂರಿನ ಸೈನ್ಸ್ ಗ್ಯಾಲರಿ ಜಾಗತಿಕ Science Gallery Network‌ನ ಏಷ್ಯಾದ ಮೊದಲ ಗ್ಯಾಲರಿ ಆಗಿದ್ದು, ವಿಜ್ಞಾನ, ಕಲೆ ಮತ್ತು ಸಾರ್ವಜನಿಕ ಸಂವಾದವನ್ನು ಒಂದೇ ವೇದಿಕೆಯಲ್ಲಿ ತರುವ ವಿಶಿಷ್ಟ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದೇ ಮಾದರಿಯ ಅನುಭವವನ್ನು ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಯುವಜನರಿಗೂ ತಲುಪಿಸುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಹೇಳಿದ್ದಾರೆ.

ಅಲ್ಲದೆ, Science Gallery Bengaluru, ಇಲಾಖೆಯ ಅಧೀನದಲ್ಲಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯಗಳ ನಡುವೆ ಪ್ರದರ್ಶನ ಮತ್ತು ವಿಜ್ಞಾನ ವಿಷಯಗಳನ್ನು ಮೇಳೈಸುವ ವ್ಯವಸ್ಥೆ ರೂಪಿಸುವ ಸಾಧ್ಯತೆಯನ್ನೂ ಪರಿಶೀಲಿಸಬೇಕೆಂದು ಸಚಿವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೂ ಮಾಫಿಯಾ, ಬೆದರಿಕೆ ಆರೋಪ: ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟು ಜಾರ್ಖಂಡ್ ಬುಡಕಟ್ಟು ನಾಯಕಿ ಆತ್ಮಹತ್ಯೆ

ಜಾರ್ಖಂಡ್‌ನ ರಾಂಚಿಯಲ್ಲಿ ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಮತ್ತು ನಾಯಕಿ ನಿಶಾ ಕುಮಾರಿ...

ದೇಶದ ಭದ್ರತೆಗೆ ಧಕ್ಕೆಯಾದ ಅಗ್ನಿಪಥ್ ಯೋಜನೆ ತಕ್ಷಣವೇ ರದ್ದುಗೊಳಿಸಿ: ಕಾಂಗ್ರೆಸ್ ಆಗ್ರಹ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಶಸ್ತ್ರ ಪಡೆಗಳ 'ಅಗ್ನಿಪಥ್' ನೇಮಕಾತಿ ಯೋಜನೆಯನ್ನು...

ಸರ್ಕಾರಿ ಶಾಲೆ ಮುಚ್ಚುವುದು, ಖಾಸಗೀಕರಣ ಎರಡೂ ಅಪಾಯದ ಸೂಚನೆ; ಅವುಗಳನ್ನು ಉಳಿಸಿ, ಉನ್ನತೀಕರಿಸಬೇಕು! ಏಕೆಂದರೆ…

ಒಂದು ಸರ್ಕಾರಿ ಶಾಲೆ ಮುಚ್ಚಿದಾಗ ಆ ಪ್ರದೇಶದ ಮಕ್ಕಳಿಗೆ ಹತ್ತಿರದಲ್ಲೇ ದೊರೆಯುತ್ತಿದ್ದ...