ಮಂಗಳೂರು ಪಾಲಿಕೆ ಚುನಾವಣೆಗೆ ನಿರ್ದೇಶನ ಕೋರಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Date:

ಅವಧಿ ಮುಗಿದು 15 ತಿಂಗಳು ಕಳೆದಿರುವ ಮಂಗಳೂರು ಮಹಾನಗರ ಪಾಲಿಕೆಗೆ ಕೂಡಲೇ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಅತ್ತಾವರ ನಿವಾಸಿ, ಪತ್ರಕರ್ತ ರಹಿಮಾನ್ ಖಾನ್ ಲೊಹಾನಿ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗ ಹಾಗೂ ಮಂಗಳೂರು ಮಹಾನಗರ ಪಾಲಿಕೆಗೆ ನೋಟಿಸ್ ಜಾರಿಗೊಳಿಸಿತು. ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿ ವಿಚಾರಣೆಯನ್ನು ಆಗಸ್ಟ್ 25ಕ್ಕೆ ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಂವಿಧಾನದ 243 – ಯು ವಿಧಿ ಪ್ರಕಾರ ಸ್ಥಳೀಯ ಸಂಸ್ಥೆಗಳಿಗೆ ಅವುಗಳ ಅವಧಿ ಮುಗಿಯುವ ಆರು ತಿಂಗಳು ಮುಂಚಿತವಾಗಿ ಮುಂದಿನ ಅವಧಿಗೆ ಚುನಾವಣೆ ನಡೆಸಬೇಕು. ಆದರೆ, ಮಂಗಳೂರು ಮಹಾನಗರ ಪಾಲಿಕೆಗೆ ಕೊನೆಯ ಬಾರಿ 2019ರ ನವೆಂಬರ್ 12ಕ್ಕೆ ಚುನಾವಣೆ ನಡೆದಿದೆ. ಪಾಲಿಕೆಗೆ ಐದು ವರ್ಷದ ಅವಧಿ 2025ರ ಫೆಬ್ರವರಿ 27ಕ್ಕೆ ಮುಗಿದಿದೆ. ಅವಧಿ ಮುಗಿದು 15 ತಿಂಗಳು ಕಳೆದಿದ್ದು, ಚುನಾವಣೆ ನಡೆದಿಲ್ಲ. ಸದ್ಯ ಪಾಲಿಕೆಯು ಆಡಳಿತಾಧಿಕಾರಿಯ ಆಡಳಿತದಲ್ಲಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಪ್ರಸ್ತುತ ಪಾಲಿಕೆಯು ಸರ್ಕಾರದ ನಿಯುಕ್ತ ಆಡಳಿತಾಧಿಕಾರಿಯ ಅಡಿ ಕಾರ್ಯನಿರ್ವಹಿಸುತ್ತಿದೆ. ಇದರಿಂದ ಸ್ಥಳೀಯ ಜನರಿಗೆ ಪ್ರಜಾಸತ್ತಾತ್ಮಕ ಪ್ರಾತಿನಿಧ್ಯ ಸಿಗುತ್ತಿಲ್ಲ ಹಾಗೂ ನಗರದ ವಾರ್ಡ್​​‌ಗಳ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ. ಚುನಾವಣೆ ವಿಳಂಬದ ಕುರಿತು ಅರ್ಜಿದಾರರು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದಾಗ, ಸರ್ಕಾರದ ಕಡೆಯಿಂದ ಈವರೆಗೆ ಯಾವುದೇ ಅಧಿಕೃತ ಆದೇಶ ಅಥವಾ ಸ್ಪಷ್ಟನೆ ಬಂದಿಲ್ಲ ಎಂಬ ಬೇಜವಾಬ್ದಾರಿಯುತ ಉತ್ತರ ನೀಡಲಾಗಿದೆ.

ಇದನ್ನೂ ಓದಿದ್ದೀರಾ? ರಾಜ್ಯದ ಮುಖ್ಯಮಂತ್ರಿಯಾಗಲಿರುವ ಡಿ‌ಕೆಶಿ: ಸ್ಥಳೀಯ ಸರ್ಕಾರಕ್ಕಾಗಿ ಪಂಚಾಯತ್ ಚುನಾವಣೆ ನಡೆಸುತ್ತಾರೆಯೇ?

ಆದ್ದರಿಂದ ಹೈಕೋರ್ಟ್ ಕೂಡಲೇ ಮಧ್ಯ ಪ್ರವೇಶಿಸಿ, ವಾರ್ಡ್‌ಗಳ ಮೀಸಲಾತಿಯನ್ನು ಅಂತಿಮಗೊಳಿಸಿ, ಮಂಗಳೂರು ಮಹಾನಗರ ಪಾಲಿಕೆಗೆ ಕೂಡಲೇ ಸಾರ್ವತ್ರಿಕ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಆದೇಶ ಹೊರಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಚುನಾವಣೆ ವಿಳಂಬವಾಗಿರುವುದರಿಂದ ಪಾಲಿಕೆಗೆ ಚುನಾಯಿತ ಜನಪ್ರತಿನಿಧಿಗಳು ಇಲ್ಲದಂತಾಗಿದೆ. ಇದರಿಂದ ಮಂಗಳೂರು ನಗರದ ನಾಗರಿಕರಿಗೆ ಉತ್ತಮ ಆಡಳಿತ ಸಿಗದಂತಾಗಿದೆ. ಮೂಲಭೂತ ಸೌಲಭ್ಯಗಳ ಕೊರತೆ ಕಾಡುತ್ತಿದೆ. ಆದ್ದರಿಂದ ತಕ್ಷಣ ಪಾಲಿಕೆಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಹಾಗೂ ರಾ‍ಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...