ಮಂಗಳೂರು | ಮೀನುಗಾರಿಕಾ ಬೋಟ್‌ಗಳಿಗೆ ನಿರಂತರ ಡೀಸೆಲ್ ಪೂರೈಕೆ : ಸ್ಪೀಕರ್ ಸೂಚನೆ

Date:

ಮಂಗಳೂರು ನಗರದ ಮೀನುಗಾರಿಕಾ ಬಂದರಿನಿಂದ ಹೊರಡುವ ಬೋಟ್‌ಗಳಿಗೆ ಡೀಸೆಲ್ ಹಾಗೂ ಎಲ್‌ಪಿಜಿ ಸಿಲಿಂಡರ್‌ಗಳನ್ನು ನಿರಂತರವಾಗಿ ಒದಗಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸೂಚಿಸಿದರು.

- Advertisement -

ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೀನುಗಾರಿಕಾ ಸಂಘಟನೆಗಳು, ಬೋಟ್ ಮಾಲಕರು, ತೈಲ ಕಂಪನಿಗಳ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮೀನುಗಾರಿಕಾ ಬೋಟ್‌ಗಳಿಗೆ ಯಾವುದೇ ರೀತಿಯ ಡೀಸೆಲ್ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಹಳೆಯ ಬಂದರಿನಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಡೀಸೆಲ್ ಔಟ್‌ಲೆಟ್ ಅನ್ನು ಪುನಃ ಪ್ರಾರಂಭಿಸಲು ಹಾಗೂ ಅಗತ್ಯ ಕೋಡ್ ಸಂಖ್ಯೆಯನ್ನು ತುರ್ತಾಗಿ ನೀಡುವಂತೆ ಮೀನುಗಾರಿಕೆ ನಿರ್ದೇಶಕರಿಗೆ ಸೂಚನೆ ನೀಡಿದರು. ಅಲ್ಲದೆ ತೈಲ ಕಂಪನಿಗಳು ಡೀಸೆಲ್ ಸರಬರಾಜು ನಿರಂತರವಾಗಿ ಮಾಡಬೇಕೆಂದು ತಿಳಿಸಿದರು.

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಹಿನ್ನೆಲೆ ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ, ಮೀನುಗಾರಿಕಾ ಬೋಟ್‌ಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ ಎಂದು ಮೀನುಗಾರ ಮುಖಂಡರು ಸಭೆಯಲ್ಲಿ ತಿಳಿಸಿದರು. ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ಚೇತನ್ ಬೆಂಗ್ರೆ, ಡೀಸೆಲ್ ದರ ಏರಿಕೆಯಿಂದ ಉಂಟಾಗುತ್ತಿರುವ ನಷ್ಟವನ್ನು ಸರ್ಕಾರ ಭರಿಸಬೇಕೆಂದು ಆಗ್ರಹಿಸಿದರು.

ತೈಲ ಕಂಪನಿಗಳ ಪ್ರತಿನಿಧಿಗಳು ಮಾತನಾಡಿ, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಒಟ್ಟು ಎಲ್‌ಪಿಜಿ ವಿತರಣೆಯ 20% ಅನ್ನು ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಇಂದಿರಾ ಕ್ಯಾಂಟೀನ್, ರೆಸ್ಟೋರೆಂಟ್ ಹಾಗೂ ಮೀನುಗಾರಿಕೆ ಕ್ಷೇತ್ರಗಳಿಗೆ ಆದ್ಯತೆಯ ಆಧಾರದ ಮೇಲೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಮೀನುಗಾರರು ಸಮುದ್ರಕ್ಕೆ ತೆರಳುವ ವೇಳೆ ಅಡುಗೆಗಾಗಿ ಬಳಸುವ ಎಲ್‌ಪಿಜಿ ಸಿಲಿಂಡರ್‌ಗಳಲ್ಲಿಯೂ ಕೊರತೆ ಉಂಟಾಗದಂತೆ, ಕನಿಷ್ಠ 130 ರಿಂದ 150 ಸಿಲಿಂಡರ್‌ಗಳನ್ನು ಒದಗಿಸುವಂತೆ ಸೂಚಿಸಲಾಯಿತು. ಪ್ರತಿ ಬೋಟ್‌ಗೆ ಒಂದು ಸಿಲಿಂಡರ್ ನೀಡುವ ವ್ಯವಸ್ಥೆಯನ್ನು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಮೂಲಕ ಮಾಡಬೇಕೆಂದು ಸ್ಪೀಕರ್ ನಿರ್ದೇಶಿಸಿದರು.

ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ಮಾತನಾಡಿ, ಪ್ರತಿ ಜಿಲ್ಲೆಗೆ ನೀಡುವ ಕೋಟಾದಲ್ಲೇ ಮೀನುಗಾರರಿಗೆ 130–150 ಸಿಲಿಂಡರ್‌ಗಳನ್ನು ಮೀಸಲಿಡುವಂತೆ ಹಾಗೂ ಈ ಕುರಿತು ತೈಲ ಕಂಪನಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಮಾತನಾಡಿ, ನಿಗಮದ ಮೂಲಕ ಡೀಸೆಲ್ ವಿತರಣಾ ಏಜೆನ್ಸಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದು, ಕೋಡ್ ಸಂಖ್ಯೆ ಪಡೆದ ಬಳಿಕ ಇಲಾಖೆಯಿಂದ ಕೋಟಾ ಪಡೆದು ಮೀನುಗಾರರಿಗೆ ಡೀಸೆಲ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...