ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

Date:

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಸೂಕ್ತ ಸ್ಥಳ ಹಾಗೂ ಸಮಯ ನಿಗದಿಪಡಿಸಲಾಗಿದೆ. ಪ್ರತಿಭಟನಾಕಾರರ ಅಹವಾಲುಗಳನ್ನು ಆಲಿಸಲು ಸಚಿವರನ್ನು ನಿಯೋಜಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ತಿಳಿಸಿದ್ದಾರೆ.

- Advertisement -

ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜನರ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದಾಗ ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಹಕ್ಕು. ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರದಿಂದ ನಡೆಯುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

“ಹಿಂದಿನ ಅಧಿವೇಶನದಲ್ಲಿ ಸುಮಾರು 70ರಿಂದ 80 ಪ್ರತಿಭಟನೆಗಳು ನಡೆದಿದ್ದವು. ಈ ವೇಳೆ ಏಳು ಮಂದಿ ಸಚಿವರನ್ನು ನಿಯೋಜಿಸಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ, ಅವರ ಬೇಡಿಕೆಗಳನ್ನು ಸದನದ ಗಮನಕ್ಕೆ ತರಲಾಗಿತ್ತು. ಇದೇ ವ್ಯವಸ್ಥೆಯನ್ನು ಮುಂಬರುವ ಅಧಿವೇಶನದಲ್ಲಿಯೂ ಮುಂದುವರಿಸಲಾಗುವುದು. ಸಚಿವರು ಪ್ರತಿಭಟನಾ ಸ್ಥಳಗಳಿಗೆ ಭೇಟಿ ನೀಡಿ ಅಹವಾಲು ಆಲಿಸಿ, ಸಂಬಂಧಿತ ವಿಚಾರಗಳನ್ನು ಸದನದಲ್ಲಿ ಚರ್ಚೆಗೆ ತರಲಿದ್ದಾರೆ” ಎಂದು ತಿಳಿಸಿದರು.

ಮಂಗಳೂರಿನಲ್ಲಿ ಸೋಮವಾರ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “45 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿ ಸೇವೆ ಸಲ್ಲಿಸಿದ್ದರೂ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾದ ಬಳಿಕ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದರು.

“ಸಭಾಪತಿ ಸ್ಥಾನವು ಸಂಪೂರ್ಣ ಪಕ್ಷಾತೀತವಾಗಿರಬೇಕು. ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರನ್ನು ಸಮಾನವಾಗಿ ಕಾಣುತ್ತೇನೆ. ಪ್ರತಿಪಕ್ಷದ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಾಕಷ್ಟು ಅವಕಾಶ ಕಲ್ಪಿಸಲಾಗುವುದು” ಎಂದು ಹೇಳಿದರು.

ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗಳ ತಿದ್ದುಪಡಿ ಕುರಿತು ಪ್ರತಿಕ್ರಿಯಿಸಿ, “ಸದ್ಯ ಈ ಮಸೂದೆಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸಚಿವ ಸಂಪುಟ ನಿರ್ಧಾರ ಕೈಗೊಂಡು ವಿಧಾನಸಭೆಯಲ್ಲಿ ಮಸೂದೆ ಮಂಡನೆಯಾದ ಬಳಿಕವಷ್ಟೇ ಅವು ವಿಧಾನ ಪರಿಷತ್ ವ್ಯಾಪ್ತಿಗೆ ಬರಲಿವೆ” ಎಂದು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಹಾಗೂ ಶಾಹಿದ್ ತೆಕ್ಕಿಲ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ರೂ.20 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರು ವಶ

ದಕ್ಷಿಣ ಕನ್ನಡ ಅಬಕಾರಿ ಇಲಾಖೆ ಅಧಿಕಾರಿಗಳು ಕೈಗೊಂಡ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ,...

ಬಾಗಲಕೋಟೆ |ಮದ್ಯ–ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಗುರುಮಹಾಂತ ಶ್ರೀಗಳ ಸಾರಥ್ಯ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ...

ಬಾಗಲಕೋಟೆ | ಒಂದೇ ದಿನದಲ್ಲಿ ₹8.17 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಶಾಸಕ...

ದೀಪತೂಣ್  ವಿವಾದ: ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್, ಎಲ್. ಮುರುಗನ್ ಪೊಲೀಸ್ ವಶಕ್ಕೆ!

ಕಾರ್ತಿಕ ದೀಪೋತ್ಸವದ ಅಂಗವಾಗಿ ಮದುರೈನ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ...