ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕಾಗಿ ವಿದ್ಯಾರ್ಥಿಗಳು ಸಭಾಭವನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.
ಈ ವೇಳೆ ಕಾರಿಡಾರ್‌ನಲ್ಲಿ ಅತಿಯಾದ ಜನದಟ್ಟಣೆ ಉಂಟಾಗಿತ್ತು. ಹೊರಗೆ ನಿಂತಿದ್ದ ವಿದ್ಯಾರ್ಥಿಗಳು ದುರ್ಬಲವಾಗಿದ್ದ ಆಧಾರ ಗೋಡೆಯ ಮೇಲೆ ಒರಗಿ ನಿಂತಾಗ ಗೋಡೆ ಏಕಾಏಕಿ ಕುಸಿದು ಬಿದ್ದಿದೆ ಎನ್ನಲಾಗಿದೆ.
ಪರಿಣಾಮವಾಗಿ ವಿದ್ಯಾರ್ಥಿಗಳು ಮೇಲಿನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ.
This video cannot be played in your browser. Open the video directly
ಹಳೆಯಂಗಡಿಯ ಮಹಮ್ಮದ್ ಶಮಾಜ್(16), ಸೂರಿಂಜೆಯ ಮಹಮ್ಮದ್ ಶನಾನ್ ಅಹ್ಮದ್(18), ಅಡ್ಯಾರ್‌ನ ಹನೀಫ್(23) , ಕಾವೂರ್‌ನ ದಾವೂದ್ ಫರ್ಸಿನ್ ಅಹ್ಮದ್(18), ಮಂಗಳೂರು ಕಸ್ಬಾ ಬೆಂಗ್ರೆಯ ಮಹಮ್ಮದ್ ಶಾಕೀಲ್ ಹುಸೈನ್(18) ಗಾಯಗೊಂಡ ವಿದ್ಯಾರ್ಥಿಗಳು.
ಇವರನ್ನು ನಗರದ ಹೈಲಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಗಂಭೀರವಾಗಿ ಗಾಯಗೊಂಡ ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ತಿಳಿದು ಬಂದಿದೆ.






