ಮಂಗಳೂರು | ಹಿತ್ತಿಲಪೇಲ ನದಿಗೆ ಶಾಶ್ವತ ಸೇತುವೆ; ಆದಿವಾಸಿ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದನೆ

Date:

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಅಪಾಯಕಾರಿ ನದಿಗೆ ಶಾಶ್ವತ ಸೇತುವೆ ನಿರ್ಮಾಣದ ಕುರಿತು ಸೂಕ್ತ ವರದಿ ಸಲ್ಲಿಸುವಂತೆ ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮನು ಬಿ.ಕೆ. ಅವರು ಮೇಲಂತಬೆಟ್ಟು ಗ್ರಾಮ ಪಂಚಾಯತ್‌ಗೆ ಮೌಖಿಕ ಆದೇಶ ನೀಡಿದ್ದಾರೆ.

- Advertisement -

ಲಾಯಿಲ ಗ್ರಾಮದ ಬರಮೇಲು ನಡುಗುಡ್ಡೆ ಮರದ ಕಾಲುಸಂಕ ಪ್ರದೇಶಕ್ಕೆ ಭೇಟಿ ನೀಡಿದ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ರಾಮಲಿಂಗಪ್ಪ ಅವರು, ತಾಲೂಕಿನಲ್ಲಿ ಸೇತುವೆಗಳ ಕೊರತೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಈ ವೇಳೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಮಾತನಾಡಿ, ಸವಣಾಲು ಗ್ರಾಮದ ಹಿತ್ತಿಲಪೇಲದಲ್ಲಿ ಅಪಾಯಕಾರಿ ನದಿಗೆ ಸೇತುವೆ ಇಲ್ಲದ ಕಾರಣ ಕಳೆದ ವರ್ಷ ಇಬ್ಬರು ಯುವಕರು ದ್ವಿಚಕ್ರ ವಾಹನ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದ ಘಟನೆ ಕುರಿತು ವಿವರಿಸಿದರು. ರಸ್ತೆ, ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳಿಂದ ವಂಚಿತವಾಗಿರುವ ಅಲ್ಲಿನ ಮಲೆಕುಡಿಯ ಸಮುದಾಯದ ಕುಟುಂಬಗಳ ಸಂಕಷ್ಟವನ್ನೂ ನ್ಯಾಯಾಧೀಶರ ಗಮನಕ್ಕೆ ತಂದರು.

ಈ ವರ್ಷ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ನದಿ ದಾಟುವುದನ್ನು ನಿಷೇಧಿಸಿ ಬ್ಯಾನರ್ ಅಳವಡಿಸಿರುವುದರಿಂದ 9 ಆದಿವಾಸಿ ಮಲೆಕುಡಿಯ ಕುಟುಂಬಗಳು ತೀವ್ರ ತೊಂದರೆ ಅನುಭವಿಸುತ್ತಿವೆ ಎಂದು ಅವರು ತಿಳಿಸಿದರು.

ಇದಕ್ಕೆ ಸ್ಪಂದಿಸಿದ ನ್ಯಾಯಾಧೀಶರು, ಸ್ಥಳದಲ್ಲಿದ್ದ ಉಪ ತಹಶೀಲ್ದಾರ್ ಮಲ್ಲಪ್ಪ ನಡುಗಡ್ಡಿ ಅವರಿಗೆ ಈ ಕುರಿತು ವಿಸ್ತೃತ ವರದಿಯನ್ನು ಸೋಮವಾರ ಮಧ್ಯಾಹ್ನದೊಳಗೆ ಸಲ್ಲಿಸುವಂತೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಗ್ರಾಮ ಆಡಳಿತಾಧಿಕಾರಿಗೆ ಸೂಚಿಸಲು ನಿರ್ದೇಶನ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...