ಮಂಗಳೂರು | ಬಸ್‌ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಚೂರಿಯಿಂದ ಇರಿದು ಕೊಲೆ ಯತ್ನ

Date:

ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ವ್ಯಕ್ತಿಯೊಬ್ಬ ಚೂರಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಚಿ ಸಮೀಪದ ಮೋಂತಿಮಾರು ಪಡ್ಪು ಪ್ರದೇಶದಲ್ಲಿ ನಡೆದಿದೆ.

- Advertisement -

ಮೋಂತಿಮಾರು ಪಡ್ಪು ನಿವಾಸಿ ಜವ್ವಾರ್ (28) ದಾಳಿ ನಡೆಸಿದ ಆರೋಪಿ ಎಂದು ಗುರುತಿಸಲಾಗಿದೆ. ಆತ ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮಾಹಿತಿಯ ಪ್ರಕಾರ, ವಿದ್ಯಾರ್ಥಿನಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಬಸ್ ತಂಗುದಾಣದಲ್ಲಿ ಕಾಯುತ್ತಿದ್ದ ವೇಳೆ ಆರೋಪಿ ಏಕಾಏಕಿ ಚೂರಿಯಿಂದ ದಾಳಿ ನಡೆಸಿದ್ದಾನೆ. ಘಟನೆಯನ್ನು ಕಂಡು ಅಲ್ಲಿದ್ದ ಇತರ ಪ್ರಯಾಣಿಕರು ಜೋರಾಗಿ ಕಿರುಚಿದ ಹಿನ್ನೆಲೆಯಲ್ಲಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದೇ ವೇಳೆ, ದಾಳಿ ನಡೆಸಿದ ಆರೋಪಿ ಬಳಿಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆಯ ಹಿಂದಿನ ಕಾರಣಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...