ವ್ಯಕ್ತಿಯೋರ್ವರು ತೋಡಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ರಾಯಿ ನಿವಾಸಿ ಜೀವನ್ ಪಿಂಟೊ (48) ಎಂಬವರು ಎನ್ನಲಾಗಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಜೀವನ್ ಪಿಂಟೊ ಅವರು ತೋಡಿನ ಆಚೆ ಇರುವ ತನ್ನ ಮಾವನ ಮನೆಗೆ ತೆರಳಲು ಕಾಲು ಸಂಕದಲ್ಲಿ ನದಿ ದಾಟುವ ವೇಳೆ ಕಾಲು ಜಾರಿ ನೀರಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ.
ಘಟನಾ ಸ್ಥಳದಲ್ಲಿ ಜೀವನ್ ಪಿಂಟೊ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದು, ಅವರು ತೋಡಿಗೆ ಬಿದ್ದಿರುವ ಅನುಮಾನ ಮತ್ತಷ್ಟು ಬಲಗೊಂಡಿದೆ. ಆದರೆ ಅವರು ತೋಡಿಗೆ ಬಿದ್ದಿರುವುದು ಅಥವಾ ಬೇರೆಡೆ ತೆರಳಿರುವುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.
ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ನಿವಾಸಿಗಳ ಸಹಕಾರದೊಂದಿಗೆ ತೋಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ಮುಂದುವರಿದಿದೆ.





