ಮಂಗಳೂರು | ಗಾಯಗೊಂಡ ತಾಯಿ-ಮಗುವಿಗೆ ಸಿಟಿ ಬಸ್‌ನಲ್ಲೇ ಆಸ್ಪತ್ರೆಗೆ ಸಾಗಿಸಿದ ಚಾಲಕ-ನಿರ್ವಾಹಕ; ಮಾನವೀಯತೆಗೆ ಸಾರ್ವಜನಿಕರ ಮೆಚ್ಚುಗೆ

Date:

ಮಂಗಳೂರಿನಲ್ಲಿ ಅಪಘಾತದಿಂದ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ತಾಯಿ ಮತ್ತು ಪುಟ್ಟ ಮಗುವನ್ನು ಸಿಟಿ ಬಸ್ ಚಾಲಕ ಹಾಗೂ ನಿರ್ವಾಹಕ ತಮ್ಮ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದ ಘಟನೆ ನಡೆದಿದೆ.

- Advertisement -

ಶುಕ್ರವಾರ ಕಾವೂರಿನಿಂದ ಕುಂಜತ್ತಬೈಲ್ ಕಡೆಗೆ ಸಂಚರಿಸುತ್ತಿದ್ದ ರೂಟ್ ನಂ. 13 ಬಿ ‘ಮಾಸ್ಟರ್’ ಸಿಟಿ ಬಸ್ ಮರಕಡ ಜಂಕ್ಷನ್ ತಲುಪಿದ ವೇಳೆ ತಾಯಿ ಮತ್ತು ಮಗು ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿರುವುದನ್ನು ಚಾಲಕ ದಯಾನಂದ್ ಹಾಗೂ ನಿರ್ವಾಹಕ ಸಂದೀಪ್ ಗಮನಿಸಿದರು. ತಕ್ಷಣವೇ ಬಸ್ಸನ್ನು ನಿಲ್ಲಿಸಿ ಗಾಯಾಳುಗಳ ನೆರವಿಗೆ ಧಾವಿಸಿದ ಅವರು, ಮಗುವಿನ ಸ್ಥಿತಿ ಗಂಭೀರವಾಗಿರುವುದನ್ನು ಅರಿತು ಸಮಯ ವ್ಯರ್ಥ ಮಾಡದೆ ಕ್ರಮ ಕೈಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪರಿಸ್ಥಿತಿಯನ್ನು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ವಿವರಿಸಿ ಅವರನ್ನು ಕೆಳಗಿಳಿಯುವಂತೆ ವಿನಂತಿಸಿದ ಸಿಬ್ಬಂದಿ, ಗಾಯಗೊಂಡ ತಾಯಿ-ಮಗುವನ್ನು ಅದೇ ಬಸ್ಸಿನಲ್ಲಿ ಹತ್ತಿರದ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ದೊರಕುವಂತೆ ಮಾಡಿದರು. ಅವರ ಸಮಯಪ್ರಜ್ಞೆ ಮತ್ತು ಮಾನವೀಯ ಸ್ಪಂದನೆಯಿಂದ ಇಬ್ಬರಿಗೂ ಶೀಘ್ರ ಚಿಕಿತ್ಸೆ ದೊರಕಿದ್ದು, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಚಾಲಕ ದಯಾನಂದ್ ಮತ್ತು ನಿರ್ವಾಹಕ ಸಂದೀಪ್ ಅವರ ಈ ನಿಸ್ವಾರ್ಥ ಸೇವೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಶ್ಲಾಘಿಸಿದ್ದಾರೆ. ದಕ್ಷಿಣ ಕನ್ನಡ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಕೂಡ ಬಸ್ ಸಿಬ್ಬಂದಿಯ ಮಾನವೀಯ ಕಾರ್ಯವನ್ನು ಪ್ರಶಂಸಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...