ಮಂಗಳೂರು | ಬ್ಯಾರಿ ಭಾಷೆ ಜನಾಂಗದ ವ್ಯಕ್ತಿತ್ವದ ಪ್ರತಿಬಿಂಬ : ಯು.ಟಿ. ಖಾದರ್

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮೇಲ್ತೆನೆ ದೇರಳಕಟ್ಟೆ ಇದರ ಸಹಯೋಗದಲ್ಲಿ ಮುಡಿಪು ನಂದರಪದವಿನ ಎಸ್.ಕೆ ಸಭಾಂಗಣದಲ್ಲಿ ಮಂಗಳವಾರ ನಡೆದ ಉಳ್ಳಾಲ ತಾಲೂಕು 3ನೇ ಬ್ಯಾರಿ ಸಾಹಿತ್ಯ ಸಮ್ಮೇಳನವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಭವ್ಯವಾಗಿ ನಡೆಯಿತು. ಸಮ್ಮೇಳನವು ಬ್ಯಾರಿ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ವೇದಿಕೆಯಾಗಿದ್ದು, ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ನೆರವೇರಿತು.

- Advertisement -
WhatsApp Image 2026 05 05 at 8.22.21 PM

ಸಮ್ಮೇಳನವನ್ನು ಉದ್ಘಾಟಿಸಿದ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರು ಮಾತನಾಡಿ, ಬ್ಯಾರಿ ಸಮುದಾಯವು ಶ್ರಮಜೀವಿಗಳು ಹಾಗೂ ಗೌರವ ಮತ್ತು ಸ್ವಾಭಿಮಾನದಿಂದ ಬದುಕುವ ಜನಾಂಗವಾಗಿದೆ. ಬ್ಯಾರಿ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಪರಂಪರೆಯನ್ನು ನಾವು ಅರ್ಥಮಾಡಿಕೊಳ್ಳುವುದರೊಂದಿಗೆ ಹಿರಿಯರ ಮಾರ್ಗದರ್ಶನದಲ್ಲಿ ನಮ್ಮ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವುದು ಅತ್ಯಂತ ಅಗತ್ಯವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬ್ಯಾರಿ ಭಾಷೆ ಕೇವಲ ಮಾತುಕತೆಯ ಮಾಧ್ಯಮವಲ್ಲ, ಅದು ಸಮುದಾಯದ ಸಂಸ್ಕೃತಿ ಮತ್ತು ವ್ಯಕ್ತಿತ್ವವನ್ನು ಪ್ರತಿನಿಧಿಸುವ ಶಕ್ತಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾರಿ, ತುಳು ಮತ್ತು ಕೊಂಕಣಿ ಭಾಷೆಗಳು ಲಿಪಿಯಿಲ್ಲದಿದ್ದರೂ ಸಹ ಸಾವಿರಾರು ವರ್ಷಗಳಿಂದ ಬಾಯಾರಿವಿನ ಮೂಲಕ ಉಳಿದು ಬೆಳೆದಿರುವುದು ಅವುಗಳ ಬಲವಾಗಿದೆ ಎಂದು ಹೇಳಿದರು.

ಬ್ಯಾರಿಭವನ ನಿರ್ಮಾಣದ ಕುರಿತು ಮಾತನಾಡಿದ ಅವರು, ಹಲವು ವರ್ಷಗಳಿಂದ ಎದುರಾಗಿದ್ದ ತಾಂತ್ರಿಕ ಅಡೆತಡೆಗಳು ಈಗ ನಿವಾರಣೆಯಾಗಿದ್ದು, ಶೀಘ್ರದಲ್ಲೇ ವ್ಯವಸ್ಥಿತ ಬ್ಯಾರಿಭವನ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

Advertisements
WhatsApp Image 2026 05 05 at 8.22.20 PM

ಸಮ್ಮೇಳನಾಧ್ಯಕ್ಷರಾಗಿದ್ದ ಬಹುಭಾಷಾ ಕವಿ ಮತ್ತು ಗಾಯಕ ಬಶೀರ್ ಅಹ್ಮದ್ ಕಿನ್ಯ ಅವರು ಮಾತನಾಡಿ, ಬ್ಯಾರಿ ಭಾಷೆಯು ನಮ್ಮ ತಾಯಿಭಾಷೆಯಾಗಿದ್ದು, ಅದನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಭಾಷೆ ಉಳಿದರೆ ಜನಾಂಗ ಉಳಿಯುತ್ತದೆ; ಜನಾಂಗ ಬೆಳೆದರೆ ಸಂಸ್ಕೃತಿಯೂ ಬೆಳೆಯುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಝುಲೇಖ ಮುಮ್ರಾಜ್ ಅವರ ‘ನಿಲಾವು’ ಲೇಖನ ಸಂಕಲನ ಹಾಗೂ ಆಯಿಷಾ ಯು.ಕೆ ಸಂಪಾದಕತ್ವದ ‘ಹಸ್‌ರತ್’ ಕವನ ಸಂಕಲನಗಳನ್ನು ಯು.ಟಿ. ಖಾದರ್ ಅವರು ಲೋಕಾರ್ಪಣೆಗೊಳಿಸಿದರು. ಈ ಕೃತಿಗಳು ಬ್ಯಾರಿ ಸಾಹಿತ್ಯದ ಶ್ರೀಮಂತಿಕೆಯನ್ನು ಮತ್ತಷ್ಟು ವಿಸ್ತರಿಸುವಲ್ಲಿ ಪ್ರಮುಖ ಪಾತ್ರವಹಿಸುವುದಾಗಿ ಗಣ್ಯರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ನಾನಿ ಅಲ್ಯಾರಿಸ್, ಉಡುಪಿ ಜಿಲ್ಲಾ ಆಯುಷ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಮುಹಮ್ಮದ್ ಇಕ್ಯಾಲ್ ಕೆ, ಉಳ್ಳಾಲ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಫೀಕ್ ಅಂಬ್ಲಮೊಗರು, ಸ್ವಚ್ಛತಾ ರಾಯಬಾರಿ ಶೀನ ಶೆಟ್ಟಿ ಹಾಗೂ ಮುಡಿಪು ಜನ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೃಷ್ಣ ಮೂಲ್ಯ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಸಮ್ಮೇಳನದ ಆರಂಭದಲ್ಲಿ ಹೂಹಾಕುವ ಕಲ್ಲು ಜಂಕ್ಷನ್‌ನಿಂದ ಸಭಾಂಗಣದವರೆಗೆ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಿತು. ಈ ಮೆರವಣಿಗೆಯನ್ನು ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಎಸ್.ಕೆ. ಅಬ್ದುಲ್ ಖಾದರ್ ಹಾಜಿ ಉದ್ಘಾಟಿಸಿದರು. ಬಳಿಕ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್ ಧ್ವಜಾರೋಹಣ ನೆರವೇರಿಸಿದರು.

WhatsApp Image 2026 05 05 at 8.22.21 PM 1

ಸಮ್ಮೇಳನದ ಅಂಗವಾಗಿ ಚರ್ಚಾಗೋಷ್ಠಿ, ಕವಿಗೋಷ್ಠಿ, ಮೆಹಂದಿ ಸ್ಪರ್ಧೆ, ಆಶುಭಾಷಣ ಸ್ಪರ್ಧೆ, ಕನ್ನಡದಿಂದ ಬ್ಯಾರಿ ಭಾಷೆಗೆ ಅನುವಾದ ಸ್ಪರ್ಧೆ ಸೇರಿದಂತೆ ಹಲವು ಕಾರ್ಯಕ್ರಮಗಳು ಜರುಗಿದವು. ಜೊತೆಗೆ ಸಾಧಕರಿಗೆ ಸನ್ಮಾನ ಹಾಗೂ ಬ್ಯಾರಿ ನಾಟಕ ಪ್ರದರ್ಶನವೂ ನಡೆಯಿತು.

ಸಮ್ಮೇಳನವನ್ನು ಯಶಸ್ವಿಗೊಳಿಸಲು ಸ್ವಾಗತ ಸಮಿತಿಯ ಅಧ್ಯಕ್ಷ ವಿ. ಇಬ್ರಾಹಿಂ ನಡುಪದವು, ಕಾರ್ಯಾಧ್ಯಕ್ಷ ಆಲಿಕುಂಞ ಪಾರೆ, ಗೌರವ ಕಾರ್ಯದರ್ಶಿ ಎನ್.ಎಸ್. ನಾಸಿರ್ ನಡುಪದವು ಸೇರಿದಂತೆ ಅನೇಕರು ಶ್ರಮಿಸಿದರು. ಮೇಲ್ತೆನೆ ಅಧ್ಯಕ್ಷ ಮಂಗಳೂರ ರಿಯಾಝ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಕಾಡೆಮಿಯ ರಿಜಿಸ್ಟ್ರಾರ್ ರಾಜೇಶ್ ಜಿ ಸ್ವಾಗತಿಸಿದರು. ಕಾರ್ಯಕ್ರಮದ ಸದಸ್ಯ ಸಂಚಾಲಕ ಹಮೀದ್ ಹಸನ್ ಮಾಡೂರು ವಂದಿಸಿದರು. ಯು.ಎಚ್. ಖಾಲಿದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...