ಮಂಗಳೂರು | ರಸ್ತೆ ಅಪಘಾತ; ಒಂದೇ ಕುಟುಂಬದ ಆರು ಮಂದಿಗೆ ತೀವ್ರ ಗಾಯ

Date:

ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ.

- Advertisement -

ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಇಬ್ಬರು ದೊಡ್ಡವರು ಹಾಗೂ ನಾಲ್ವರು ಮಕ್ಕಳು ಪ್ರಯಾಣಿಸುತ್ತಿದ್ದರು. ಸುರಿಕುಮೇರು ಸಮೀಪ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ನಡೆಯುತ್ತಿರುವ ಕಾಮಗಾರಿ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ. ಹೆದ್ದಾರಿಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ ಹಾಗೂ ರಸ್ತೆಯ ಅಸಮರ್ಪಕ ವ್ಯವಸ್ಥೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಪಘಾತದಲ್ಲಿ ಕಾರಿನಲ್ಲಿದ್ದ ಎಲ್ಲ ಆರು ಮಂದಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳೀಯರ ಹೇಳಿಕೆಯಂತೆ, ಸುರಿಕುಮೇರು ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ–75ರ ಕಾಮಗಾರಿ ವೈಜ್ಞಾನಿಕವಾಗಿ ನಡೆಯದ ಕಾರಣ ಈ ಹಿಂದೆಯೂ ಹಲವು ಅಪಘಾತಗಳು ಸಂಭವಿಸಿವೆ. ಸಮರ್ಪಕ ಸೂಚನಾ ಫಲಕಗಳ ಕೊರತೆ, ಸುರಕ್ಷತಾ ಕ್ರಮಗಳ ಅಭಾವ ಹಾಗೂ ರಸ್ತೆಯ ಅವ್ಯವಸ್ಥೆ ಅಪಘಾತಗಳಿಗೆ ಪ್ರಮುಖ ಕಾರಣವಾಗಿವೆ ಎಂದು ಆರೋಪಿಸಿದ್ದಾರೆ.

ಈ ಭಾಗದಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಗುತ್ತಿಗೆದಾರರು ತಕ್ಷಣವೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕಾಮಗಾರಿಯ ದೋಷಗಳನ್ನು ಸರಿಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...