ಮಂಗಳೂರು | ಬಾಲಕಾರ್ಮಿಕರ ವಿರುದ್ಧ 92 ಪ್ರಕರಣ ದಾಖಲು; ₹3.06 ಲಕ್ಷ ದಂಡ ವಸೂಲಿ

Date:

ಜಿಲ್ಲೆಯಲ್ಲಿ ಮಕ್ಕಳ ಕಲ್ಯಾಣ ಮತ್ತು ರಕ್ಷಣೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ನಡೆದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಹಲವು ಮಹತ್ವದ ಸೂಚನೆಗಳನ್ನು ನೀಡಿದರು.

- Advertisement -

ಜಿಲ್ಲೆಯಲ್ಲಿ ನರ್ಸರಿ, ಬೇಬಿ ಸಿಟಿಂಗ್ ಹಾಗೂ ಇತರ ಪ್ರೀ-ಸ್ಕೂಲ್‌ಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇವುಗಳ ಮೇಲ್ವಿಚಾರಣೆ ಮತ್ತು ನೋಂದಣಿಗೆ ಅಗತ್ಯ ನಿಯಮಗಳನ್ನು ರೂಪಿಸಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ರೈಲು ನಿಲ್ದಾಣಗಳಲ್ಲಿ ಮನೆ ಬಿಟ್ಟು ಬಂದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗುತ್ತಿರುವುದರಿಂದ, ರೈಲ್ವೆ ಪೊಲೀಸರೊಂದಿಗೆ ಸಮನ್ವಯ ಸಾಧಿಸಿ ಮಕ್ಕಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ಹೋಟೆಲ್, ಅಂಗಡಿ ಹಾಗೂ ಇತರೆ ವಾಣಿಜ್ಯ ಸಂಸ್ಥೆಗಳಲ್ಲಿ ಬಾಲಕಾರ್ಮಿಕರ ನೇಮಕಾತಿ ತಡೆಯಲು ಕಾರ್ಮಿಕ ಇಲಾಖೆ ನಿರಂತರ ಪರಿಶೀಲನೆ ನಡೆಸಬೇಕು. ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಸೂಚಿಸುವ ಫಲಕಗಳನ್ನು ಎಲ್ಲ ಸಂಸ್ಥೆಗಳಲ್ಲೂ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ತಿಳಿಸಿದರು. ನಿಯಮ ಉಲ್ಲಂಘಿಸಿದ 92 ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, 49 ಪ್ರಕರಣಗಳಲ್ಲಿ ₹3.06 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಏಪ್ರಿಲ್ 2025ರಿಂದ 2026-27ರವರೆಗೆ ಪಾಕ್ಸೋ ಪ್ರಕರಣಗಳ 34 ಫಲಾನುಭವಿಗಳಿಗೆ ಬಾಲ ನ್ಯಾಯ ನಿಧಿಯಿಂದ ₹1.70 ಲಕ್ಷ ನೆರವು ನೀಡಲಾಗಿದೆ. ಜಿಲ್ಲೆಯ ಎರಡು ದತ್ತು ಕೇಂದ್ರಗಳಲ್ಲಿ ಪ್ರಸ್ತುತ 20 ಮಕ್ಕಳು ಆಶ್ರಯ ಪಡೆದಿದ್ದು, 2010ರಿಂದ ಇದುವರೆಗೆ ಒಟ್ಟು 199 ಮಕ್ಕಳನ್ನು ದತ್ತು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಾಯೋಜಕತ್ವ ಯೋಜನೆಯಡಿ ಅನಾಥ, ಏಕ ಪೋಷಕ ಹಾಗೂ ಜೈಲಿನಲ್ಲಿರುವ ಪೋಷಕರ ಮಕ್ಕಳಿಗೆ ತಿಂಗಳಿಗೆ ₹4,000 ನೆರವು ನೀಡಲಾಗುತ್ತಿದ್ದು, 2026ರ ಮಾರ್ಚ್‌ವರೆಗೆ ಜಿಲ್ಲೆಯಲ್ಲಿ 1,035 ಮಕ್ಕಳು ಇದರ ಪ್ರಯೋಜನ ಪಡೆದಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ರಶ್ಮಿ ಮಾಹಿತಿ ನೀಡಿದರು.

18 ವರ್ಷದೊಳಗಿನ ಹೆಚ್‌ಐವಿ/ಏಡ್ಸ್ ಸೋಂಕಿತ ಸಂಕಷ್ಟದಲ್ಲಿರುವ ಮಕ್ಕಳಿಗೆ ವಿಶೇಷ ಪಾಲನಾ ಯೋಜನೆಯಡಿ ತಿಂಗಳಿಗೆ ₹2,000 ಆರ್ಥಿಕ ನೆರವು ನೀಡಲಾಗುತ್ತಿದೆ. ಕೋವಿಡ್‌ನಿಂದ ಇಬ್ಬರು ಪೋಷಕರನ್ನೂ ಕಳೆದುಕೊಂಡ ಮಕ್ಕಳಿಗೆ ಮುಖ್ಯಮಂತ್ರಿ ಬಾಲ ಸೇವಾ ಯೋಜನೆಯಡಿ ತಿಂಗಳಿಗೆ ₹3,500 ಸಹಾಯಧನ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ 11 ಫಲಾನುಭವಿಗಳಿದ್ದಾರೆ. ಇವರಲ್ಲಿ 7 ಮಂದಿ ಈಗಾಗಲೇ 18 ವರ್ಷ ಪೂರ್ಣಗೊಳಿಸಿದ್ದಾರೆ ಎಂದು ತಿಳಿಸಲಾಯಿತು.

ಅಪರ ಜಿಲ್ಲಾಧಿಕಾರಿ ರಾಜು ಕೆ. ಮಾತನಾಡಿ, ವಿವಿಧ ವಸತಿ ನಿಲಯಗಳಲ್ಲಿರುವ ಹೆಣ್ಣು ಮಕ್ಕಳ ಆರೋಗ್ಯ ತಪಾಸಣೆ ಮತ್ತು ಕೌನ್ಸಿಲಿಂಗ್ ನಿಯಮಿತವಾಗಿ ನಡೆಸಬೇಕು. ಆರೋಗ್ಯದಲ್ಲಿ ಏರುಪೇರು ಕಂಡುಬಂದರೆ ಅಥವಾ ಲೈಂಗಿಕ ಶೋಷಣೆಯ ಯಾವುದೇ ಮಾಹಿತಿ ದೊರೆತರೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶೆ ಜೈಬುನ್ನೀಸಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...