ಮಂಗಳೂರು | ಸಂಡೆ ಬಜಾರದದ ಮೇಲೆ ನಗರಪಾಲಿಕೆ ದಾಳಿ: ರಸ್ತೆ ತಡೆದು ಸಿಐಟಿಯು ಪ್ರತಿಭಟನೆ

Date:

ಮಂಗಳೂರು ನಗರದ ಪುರಭವನದ ಬಳಿ ಭಾನುವಾರ ರಜಾದಿನ ವ್ಯಾಪಾರ ಮಾಡುವ ಸಂಡೆ ಬಜಾರ್ ವ್ಯಾಪಾರಿಗಳ ವಿರುದ್ಧ ನಗರಪಾಲಿಕೆ ಕಾರ್ಯಾಚರಣೆ ಮುಂದುವರಿಸಿದೆ.ಇಂದು ಬೀದಿವ್ಯಾಪಾರಿಗಳು ವ್ಯಾಪಾರ ಆರಂಭಿಸಲು ಮುಂದಾಗುತ್ತಿದ್ದಂತೆ ನಗರಪಾಲಿಕೆ ಆಯುಕ್ತರು ಕಾರ್ಯಾಚರಣೆ ಆರಂಭಿಸಲು ಆದೇಶ ನೀಡಿದರು.

- Advertisement -

ಪಾಲಿಕೆ ಆಯುಕ್ತರ ಆದೇಶಕ್ಕೆ ಬೀದಿ ವ್ಯಾಪಾರಿಗಳು ಆಕ್ಷೇಪ ವ್ಯಕ್ತಪಡಿಸಿ ಪಾದಚಾರಿಗಳ ಓಡಾಟಕ್ಕೆ ಬೇಕಾದಷ್ಟು ಜಾಗ ಇದ್ದರೂ ತೆರವುಗೊಳಿಸುವುದು ಸರಿಯಲ್ಲ ಎಂದು ಆಯುಕ್ತರನ್ನು ತರಾಟೆಗೆ ತೆಗೆದುಕೊಂಡರು.
ಆಯುಕ್ತರು ಧಾಳಿ ಮುಂದುವರಿಸಿದಾಗ ಬೀದಿಬದಿ ವ್ಯಾಪಾರಿಗಳು ಘೋಷಣೆ ಕೂಗುತ್ತ ರಸ್ತೆ ತಡೆಸಿ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಪ್ರತಿಭಟನೆ ಉದ್ಧೇಶಿಸಿ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ಗೌರವಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡುತ್ತಾ, ಪಾಲಿಕೆ ಆಯುಕ್ತರು ಹಠಮಾರಿ ಧೋರಣೆ ತಳೆಯುತ್ತಾ ಬಡವರ ಮೇಲೆ ಸವಾರಿ ಮಾಡುವುದೇ ದೊಡ್ಡ ಸಾಧನೆ ಎಂದು ಭಾವಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಬೀದಿ ವ್ಯಾಪಾರಿಗಳ ಕಾನೂನನ್ನು ಅನುಷ್ಠಾನ ಮಾಡದೆ ಧಾಳಿ ಮಾಡುತ್ತಿರುವುದು ಆಶ್ಚರ್ಯ ಉಂಟಾಗಿದೆ ಎಂದು ಅವರು ಹೇಳಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ ಪಾಲಿಕೆ ಅಧಿಕಾರಿಗಳು ಬಡವರ ಮೇಲೆ ಕನಿಷ್ಠ ಸೌಜನ್ಯ ತೋರಿಸದೆ ಅಮಾನವೀಯವಾಗಿ ಧಾಳಿ ನಡೆಸಿ ಅವರ ಸರಕುಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.

ಬೀದಿಬದಿ ವ್ಯಾಪಾರಿ ಸಂಘಟನೆಗಳ ಪ್ರಮುಖರಾದ ಮುಜಾಫರ್ ಅಹ್ಮದ್, ಸಂತೋಷ್ ಆರ್. ಎಸ್, ಮೊಹಮ್ಮದ್ ಮುಸ್ತಫಾ, ಅಬ್ದುಲ್ ರಹಿಮಾನ್ ಅಡ್ಯಾರ್, ವಿಜಯ್ ಜೈನ್, ಹಂಝ ಮೊಹಮ್ಮದ್, ಎಂ.ಎನ್ ಶಿವಪ್ಪ, ನೌಶಾದ್ ಉಳ್ಳಾಲ, ಶಿವಾನಂದ ನಾಯ್ಕ್, ಪಕೀರ ನಾಯ್ಕ್, ನಾಗರಾಜ್, ಹನುಮಂತ, ಜ್ಯೋತಿಬಾಯಿ, ಲಕ್ಕಮ್ಮ, ಸಯ್ಯದ್ ಸಾದಿಕ್, ಅಶ್ರಫ್, ನೌಶಾದ್ ಕಣ್ಣೂರ್, ರಫೀಕ್ ಪಾಂಡೇಶ್ವರ,ಜನವಾದಿ ಮಹಿಳಾ ಸಂಘಟನೆ ನಗರ ಕಾರ್ಯದರ್ಶಿ ಯೋಗೀತಾ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....