ಮಂಗಳೂರು | ವೆನ್‍ಲಾಕ್ ಮಾಸ್ಟರ್ ಪ್ಲಾನ್ ತಯಾರಿಸಲು ಜಿಲ್ಲಾಧಿಕಾರಿ ಸೂಚನೆ

Date:

ದಕ್ಷಿಣ ಕನ್ನಡ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ ಕಾರ್ಯರೂಪಕ್ಕೆ ತರುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ ಸೂಚಿಸಿದ್ದಾರೆ.

- Advertisement -

ಅವರು ವೆನ್‍ಲಾಕ್ ಆಸ್ಪತ್ರೆಯಲ್ಲಿ ಬುಧವಾರ ನಡೆದ ಆರೋಗ್ಯ ರಕ್ಷಾ ಸಮಿತಿ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಆಸ್ಪತ್ರೆಯಲ್ಲಿ ವಿವಿಧ ವಿಭಾಗಗಳನ್ನು ರೋಗಿಗಳಿಗೆ ಸ್ನೇಹಿಯಾಗಿ ಕಾರ್ಯರೂಪಕ್ಕೆ ತರಲು ಮಾಸ್ಟರ್ ಪ್ಲಾನ್ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಸೂಚಿಸಿದರು.

ವೆನ್‍ಲಾಕ್ ಆಸ್ಪತ್ರೆಯ ಪ್ರಸಕ್ತ ಇರುವ ಹೊರರೋಗಿ ವಿಭಾಗಗಳ ಕಟ್ಟಡವನ್ನು ತೆರವುಗೊಳಿಸಿ ನೂತನ ಅತ್ಯಾಧುನಿಕ ಮಾದರಿಯ ಒ.ಪಿ.ಡಿ ಕಟ್ಟಡವನ್ನು ನಿರ್ಮಿಸಲು ರಾಜ್ಯ ಸರಕಾರದಿಂದ 70 ಕೋಟಿ ರೂ. ಅನುದಾನ ಮಂಜೂರಾಗಿದೆ. ಪ್ರಸಕ್ತ ಅಲ್ಲಿರುವ ಎಲ್ಲಾ ವಿಭಾಗಗಳನ್ನು ಟ್ರಾಮಾ ಬ್ಲಾಕ್‍ಗೆ ಸ್ಥಳಾಂತರಿಸಿ ಹಳೆ ಒ.ಪಿ.ಡಿ ಕಟ್ಟಡವನ್ನು ಕೆಡವಲಾಗುವುದು. ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ತಿಳಿಸಿದರು.

ರೋಗಿಗಳಿಗೆ ನೆರವಾಗಲು ಒ.ಪಿ.ಡಿ, ಎಕ್ಸ್ ರೇ, ರೇಡಿಯೋಲಜಿ ಮತ್ತಿತರ ಘಟಕಗಳನ್ನು ಒಂದೇ ಕಡೆ ನಿರ್ಮಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಲೇಡಿಗೋಶನ್ ಆಸ್ಪತ್ರೆಗೆ ಪ್ರತ್ಯೇಕ ಆರೋಗ್ಯ ರಕ್ಷಾ ಸಮಿತಿ ರಚಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ವೆನ್‍ಲಾಕ್‍ನಲ್ಲಿ ಪಿ.ಎಂ ಅಭಿಮ್ ಯೋಜನೆಯಡಿ 50 ಬೆಡ್‍ಗಳ ಕ್ರಿಟಿಕಲ್ ಕೇರ್ ಕಟ್ಟಡದ ಕಾಮಗಾರಿ ಕೊನೆಯ ಹಂತದಲ್ಲಿದೆ. ಅತ್ತಾವರ ರಸ್ತೆಯಲ್ಲಿರುವ ವೆನ್‍ಲಾಕ್‍ನ 2.71 ಎಕರೆ ಖಾಲಿ ಜಾಗದಲ್ಲಿ ಪಾರ್ಕಿಂಗ್ ಮಾಡಲು ಪೇ ಆಂಡ್ ಪಾರ್ಕಿಂಗ್ ಕಾಮಗಾರಿಗೆ ಮಹಾನಗರಪಾಲಿಕೆಗೆ ಪತ್ರ ಬರೆಯಲಾಗಿದೆ ಎಂದು ಸಭೆಗೆ ತಿಳಿಸಲಾಯಿತು.

ವೆನ್‍ಲಾಕ್ ಹೊಸ ಸರ್ಜಿಕಲ್ ಬ್ಲಾಕ್ ಕಟ್ಟಡದ ನೆಲಮಹಡಿಯ ಮಳಿಗೆಗಳನ್ನು ವಾಣಿಜ್ಯ ಉಪಯೋಗಕ್ಕೆ ಹರಾಜು ಮೂಲಕ ನೀಡಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಲೇಡಿಗೋಶನ್ ಅಧೀಕ್ಷಕ ಡಾ. ದುರ್ಗಾಪ್ರಸಾದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ತಿಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...