ಮಂಗಳೂರು ದಸರಾ‌ : ವ್ಯವಸ್ಥಿತ ಸಿದ್ಧತೆಗೆ ಸಚಿವ ಯು.ಟಿ ಖಾದರ್ ಸೂಚನೆ

Date:

ಮುಂಬರುವ ಮಂಗಳೂರು ದಸರಾ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಗೆ ಪ್ರವಾಸಿಗರನ್ನು ಆಕರ್ಷಿಸುವಂತೆ ಸಿದ್ಧತೆ ನಡೆಸಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸೂಚಿಸಿದರು.

- Advertisement -

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗಳೂರು ದಸರಾ ಮಹೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದಸರಾದ ವಿದ್ಯುತ್ ದೀಪಾಲಂಕಾರ, ಸ್ವಚ್ಛತೆ, ಅಲಂಕಾರ ಸೇರಿದಂತೆ ಮಂಗಳೂರು ನಗರದಲ್ಲಿ ಹಬ್ಬದ ವಾತಾವರಣ ಮೂಡುವಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಬೇಕು. ಕುದ್ರೋಳಿ ದೇವಸ್ಥಾನ, ಮಂಗಳಾದೇವಿ, ಉರ್ವಾ ಮಾರಿಯಮ್ಮ ಸೇರಿದಂತೆ ನಗರದಲ್ಲಿ ಪ್ರಮುಖ ದಸರಾ ನಡೆಯುವ ಸ್ಥಳಗಳ ಪ್ರಮುಖ ರಸ್ತೆಗಳಲ್ಲಿ, ಪ್ರಮುಖ ಜಂಕ್ಷನ್‍ಗಳಲ್ಲಿ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಬೇಕು. ಎಲ್ಲ ಇಲಾಖೆಯವರು ಸಹಕಾರ ನೀಡಲು ಸಚಿವರು ಸೂಚಿಸಿದರು.

ಟ್ರಾಫಿಕ್ ವ್ಯವಸ್ಥೆ ನಿರ್ವಹಿಸಲು ಸುಸಜ್ಜಿತ ವ್ಯವಸ್ಥೆಯೊಂದಿಗೆ ಟ್ರಾಫಿಕ್ ಪೊಲೀಸರನ್ನು ನಿಯೋಜಿಸಬೇಕು. ದಸರಾ ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ಯಾವುದೇ ಅಡೆತಡೆಯಾಗದಂತೆ ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ ವ್ಯವಸ್ಥೆ ನಿರ್ವಹಿಸಬೇಕು.

ಆರೋಗ್ಯ ಇಲಾಖೆ ವತಿಯಿಂದ 24/7 ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವಂತೆ ಸಚಿವರು ಸೂಚಿಸಿದರು. ದಸರಾ ಸಮಯದಲ್ಲಿ ಸಿಟಿ ಬಸ್‍ಗಳು ರಾತ್ರಿ ದೀರ್ಘಕಾಲದವರೆಗೆ ಸಂಚಾರ ನಡೆಸುವಂತೆ ಆರ್.ಟಿ.ಓ ಗಮನಹರಿಸಬೇಕು. ನಗರದಲ್ಲಿ ವಾಣಿಜ್ಯ ವ್ಯಾಪಾರ ಕೇಂದ್ರಗಳು ರಾತ್ರಿ ದೀರ್ಘಕಾಲದವರೆಗೆ ವ್ಯವಹಾರ ನಡೆಸುವಂತಾಗಬೇಕು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಹಾನಗರಪಾಲಿಕೆ ಆಯುಕ್ತ ರಾಹುಲ್ ರತ್ನಮ್ ಪಾಂಡೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...