ಮಂಗಳೂರು | ಹಳ್ಳಿಗಳಿಗೂ ಸರಕಾರಿ ಬಸ್ ಸೇವೆ ವಿಸ್ತರಿಸಲು ಆಗ್ರಹಿಸಿ ಪ್ರತಿಭಟನೆ

Date:

ದಕ್ಷಿಣ ಕನ್ನಡ ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಭಾಗಗಳ ಎಲ್ಲಾ ರೂಟ್‌ಗಳಲ್ಲೂ ಸರಕಾರಿ ಬಸ್‌ಗಳನ್ನು ಸಂಚರಿಸುವಂತೆ ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆಯು ಮಂಗಳೂರಿನ ಬಿಜೈ ಸರಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು.

- Advertisement -

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ, ರಾಜ್ಯ ಸರಕಾರದ ಶಕ್ತಿ ಯೋಜನೆಯ ಲಾಭ ಪ್ರತಿಯೊಂದು ಹಳ್ಳಿಯ ಮಹಿಳೆಯರಿಗೂ ತಲುಪಬೇಕು ಎಂದು ಒತ್ತಾಯಿಸಿದರು. ಗ್ರಾಮೀಣ ಭಾಗದ ಸಾವಿರಾರು ಮಹಿಳೆಯರು ಶಾಲೆ, ಕಾಲೇಜು, ಅಂಗಡಿ, ಹೊಟೇಲ್, ಆಸ್ಪತ್ರೆ, ಬೀದಿಬದಿ ವ್ಯಾಪಾರ, ಕಟ್ಟಡ ಕಾರ್ಮಿಕ ಹಾಗೂ ಮನೆ ಕೆಲಸಗಳಿಗೆ ಪ್ರತಿದಿನ ನಗರಕ್ಕೆ ಖಾಸಗಿ ಬಸ್‌ಗಳನ್ನೇ ಅವಲಂಬಿಸಬೇಕಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಖಾಸಗಿ ಬಸ್‌ಗಳಲ್ಲಿ ದುಬಾರಿ ದರ ನೀಡಿ ಪ್ರಯಾಣಿಸುವುದು ದುಡಿಯುವ ಮಹಿಳೆಯರಿಗೆ ಆರ್ಥಿಕ ಹೊರೆ ಆಗುತ್ತಿದೆ. ಆದ್ದರಿಂದ ಗ್ರಾಮಾಂತರ ಪ್ರದೇಶಗಳಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಬಸ್‌ಗಳನ್ನು ಸಂಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಕಿರಣ್ ಪ್ರಭ, ಜಯಂತಿ ಶೆಟ್ಟಿ, ಭಾರತಿ ಬೊಳರು, ಪದ್ಮಾವತಿ ಶೆಟ್ಟಿ ಮಾತನಾಡಿದರು. ಅಸುಂತಾ ಡಿಸೋಜ, ಪ್ರಮೋದಿನಿ ಹಾಗೂ ಯೋಗಿತಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಜಿಲ್ಲಾ ಕಾರ್ಯದರ್ಶಿ ಪ್ರಮಿಳಾ ಶಕ್ತಿನಗರ ಸ್ವಾಗತಿಸಿ, ಮೂಡುಬಿದಿರೆ ತಾಲೂಕು ಅಧ್ಯಕ್ಷೆ ರಾಧಾ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...