ಮಂಗಳೂರು | ಆಗಸ್ಟ್ 8-9ರಂದು ಕೃತಕ ಕೈಕಾಲು ಜೋಡಣೆ ಶಿಬಿರ

Date:

ಕರ್ನಾಟಕ ಅನಿವಾಸಿ ಭಾರತೀಯ ಒಕ್ಕೂಟ- ಜಿದ್ದಾ ವತಿಯಿಂದ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್, ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮತ್ತು ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶಿನಿ ನಿಲಯ ಸಹಯೋಗದಲ್ಲಿ ಉಚಿತ ಕೃತಕ ಕೈಕಾಲು ಜೋಡಣಾ ಶಿಬಿರ ಹಾಗೂ ವಿಕಲಾಂಗ ಸಲಕರಣೆಗಳ ವಿತರಣಾ ಸಮಾರಂಭವು ಆಗಸ್ಟ್ 8,9ರಂದು ನಗರದ ಜೆಪ್ಪು ವೆಲೆನ್ಸಿಯಾದಲ್ಲಿರುವ ರೋಶನಿ ನಿಲಯದಲ್ಲಿ ನಡೆಯಲಿದೆ.

- Advertisement -

ಆಗಸ್ಟ್ 8ರಂದು ಬೆಳಗ್ಗೆ 9.30ಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ಶಿಬಿರ ಉದ್ಘಾಟಿಸಲಿದ್ದು, ಒಕ್ಕೂಟದ ಅಧ್ಯಕ್ಷ ಹಬೀಬ್ ಆರ್. ಅಹ್ಮದ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಡಿ.ವೇದವ್ಯಾಸ ಕಾಮತ್, ಎ.ಕೆ.ಎಂ.ಅಶ್ರಫ್, ಐವನ್ ಡಿಸೋಜ ಸಹಿತ ಗಣ್ಯರು ಭಾಗವಹಿಸಲಿದ್ದಾರೆ. ಅಬ್ದುಲ್ ರಝಾಕ್ ಅನಂತಾಡಿ ಅವರಿಂದ ಪ್ರೇರಣಾ ತರಗತಿ ನಡೆಯಲಿದೆ ಎಂದು ಶಿಬಿರದ ಮುಖ್ಯ ಸಂಯೋಜಕ ರಶೀದ್ ವಿಟ್ಲ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...
1012042862

ಈಗಾಗಲೇ ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗೋವಾ ರಾಜ್ಯದ ಸುಮಾರು 140 ಫಲಾನುಭವಿಗಳು ಹೆಸರು ನೋಂದಾಯಿಸಿದ್ದು, ಅದರಲ್ಲಿ ಪ್ರಥಮವಾಗಿ ನೋಂದಾಯಿಸಿರುವ 100 ಮಂದಿಯನ್ನು ಆಯ್ಕೆ ಮಾಡಿ ಶಿಬಿರಕ್ಕೆ ಆಹ್ವಾನಿಸಲಾಗಿದೆ. ಎರಡು ದಿನಗಳಲ್ಲಿ ಜೈಪುರ ಬ್ರಾಂಡಿನ ಹಗುರ ಹಾಗೂ ಗುಣಮಟ್ಟದ ಕೃತಕ ಕೈಕಾಲುಗಳನ್ನು ತಯಾರಿಸಿ ಅದೇ ದಿನ ಜೋಡಿಸಿ ಕೊಡಲಾಗುವುದು ಎಂದರು.
ಅಪಘಾತ, ಗ್ಯಾಂಗ್ರಿನ್, ಕ್ಯಾನ್ಸರ್ ಮೊದಲಾದ ರೋಗದಿಂದ ಕೈಕಾಲು ಕಳೆದುಕೊಂಡವರು ಹಾಗೂ ಹುಟ್ಟುವಾಗಲೇ ವಿಕಲಾಂಗರಾದ ಬಡ/ಅಶಕ್ತರು ಶಿಬಿರದ ಫಲಾನುಭವಿಗಳಾಗಿ ಭಾಗವಹಿಸಲಿದ್ದಾರೆ. ಇವರ ತಪಾಸಣೆ ನಡೆಸಿ ಅಂಗಾಂಗದ ಅಳತೆ ತೆಗೆದು ಅದೇ ದಿನ ಕೃತಕ ಅಂಗಾಂಗ ತಯಾರಿಸಿ ಜೋಡಿಸಿ ಕಳುಹಿಸಲಾಗುವುದು.

ವಿಕಲಾಂಗರು ಮತ್ತೆ ನಡೆದಾಡಬೇಕು, ಸಂತೃಪ್ತ ಜೀವನ ನಡೆಸುವಂತಾಗಬೇಕು ಎಂಬುದೇ ಶಿಬಿರದ ಮುಖ್ಯ ಉದ್ದೇಶ. ಹೆಚ್ಚುವರಿಯಾಗಿ ಬಂದಿರುವ ನೋಂದಣಿ ಪರಿಶೀಲಿಸಿ ಮುಂದಿನ ಹಂತದಲ್ಲಿ ಶಿಬಿರ ನಡೆಸಲು ಚಿಂತಿಸಲಾಗುವುದು. ಶಿಬಿರಾರ್ಥಿಗಳನ್ನು ಹೊರತುಪಡಿಸಿ ಹೊರಗಿನ ಆಯ್ದ ಅಶಕ್ತರಿಗೆ ಗಾಲಿಕುರ್ಚಿ, ವಾಕರ್, ವಾಟರ್ ಬೆಡ್ ಮೊದಲಾದ ಸಲಕರಣೆಗಳನ್ನು ವಿತರಿಸಲಾಗುವುದು. ಒಟ್ಟು ಸುಮಾರು 25 ಲಕ್ಷ ರೂ. ವೆಚ್ಚ ಅಂದಾಜಿಸಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕ ಅನಿವಾಸಿ ಭಾರತೀಯ ಒಕ್ಕೂಟದ ಮಾಜಿ ಅಧ್ಯಕ್ಷ ಮೊಹಮ್ಮದ್ ಮನ್ಸೂರ್ ಜಿದ್ದಾ, ಮಾಜಿ ಕಾರ್ಯದರ್ಶಿ ಪೀಟರ್ ರೊನಾಲ್ಡ್ ಮಸ್ಕರೇನಸ್, ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸುಜಾಹ್ ಮೊಹಮ್ಮದ್, ಉಪಾಧ್ಯಕ್ಷ ಅಬೂಬಕರ್ ಪುತ್ತು, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್, ಜತೆ ಕಾರ್ಯದರ್ಶಿ ಶೇಖ್ ಇಸ್ಹಾಕ್, ಸದಸ್ಯ ಹಾರಿಸ್ ಕಾನತ್ತಡ್ಕ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...