ಮಂಗಳೂರು | ಜನ ಜೀವನ ಬದಲಿಸಿದ ಪಂಚ ಗ್ಯಾರಂಟಿಗಳು : ಸಚಿವ ಯು.ಟಿ ಖಾದರ್

Date:

ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ ಮತ್ತು ಯುವನಿಧಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಮೇಲೆ ಪರಿಣಾಮ ಬೀರಲಿದೆ ಎಂಬ ಅನೇಕ ಟೀಕೆಗಳಿಗೆ ಒಳಗಾಗಿದ್ದ ಈ ಯೋಜನೆಗಳು ಇಂದು ದೇಶಕ್ಕೆ ಮಾದರಿ ಜನಪರ ಯೋಜನೆಗಳಾಗಿ ಯಶಸ್ವಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.

- Advertisement -

ಅವರು ಮಂಗಳವಾರ ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ, ಮಂಗಳೂರು ತಾಲೂಕು ಇವರ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕ ಆಡಳಿತ ವ್ಯವಸ್ಥೆಯಿಂದ ಪರಿಣಾಮಕಾರಿಯಾಗಿ ಅನುಷ್ಟಾನಗೊಂಡು ಜನಪರ ಯೋಜನೆಯಾಗಿ ರೂಪುಗೊಂಡಿದೆ. ಇದು ಕೇವಲ ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಲ್ಲ, ಬದಲಾಗಿ ಜನರ ಜೀವನದಲ್ಲಿ ಬದಲಾವಣೆ ತಂದಿರುವುದನ್ನು ದಾಖಲೆಗಳ ಮೂಲಕ ತೋರಿಸುವ ಯೋಜನೆಗಳು ಎಂದು ಅವರು ಹೇಳಿದರು.

ಗ್ಯಾರಂಟಿ ಯೋಜನೆಗಳ ಮೂಲಕ ಸರ್ಕಾರ ನೀಡಿದ ಅನುದಾನವನ್ನು ಫಲಾನುಭವಿಗಳು ಸದ್ಬಳಕೆ ಮಾಡಿಕೊಂಡು ಸ್ವಾಭಿಮಾನ ಮತ್ತು ಆತ್ಮವಿಶ್ವಾಸ ಬೆಳೆಸಿಕೊಂಡು ಗೌರವಯುತವಾದ ಬದುಕು ಸಾಗಿಸುತ್ತಿದ್ದು, ಅವರು ದೇಶದ ಆರ್ಥಿಕ ಶಕ್ತಿಯ ಭಾಗವಾಗಿದ್ದಾರೆ. ಅನೇಕರು ತಮ್ಮ ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಂಡಿದ್ದಾರೆ ಎಂದು ಸಚಿವರು ಹೇಳಿದರು.

WhatsApp Image 2026 09 01 at 6.37.37 PM

ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವು, ಗೃಹಜ್ಯೋತಿಯಿಂದ ಉಚಿತ ವಿದ್ಯುತ್, ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣ, ಅನ್ನಭಾಗ್ಯದಿಂದ ಬಡಕುಟುಂಬಗಳಿಗೆ ಆಹಾರದ ಭದ್ರತೆಗೆ ನೆರವು ಹಾಗೂ ಯುವಜನರಿಗೆ ಆರ್ಥಿಕ ನೆರವು ನೀಡಿ ಜನಜೀವನ ಬದಲಾವಣೆಗೆ ಸಹಕಾರಿಯಾಗಿದೆ ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಹೆಚ್ ಎಂ. ರೇವಣ್ಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಎಂಎ ಗಫೂರ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಶಾಲೆಟ್ ಲವೀನಾ ಪಿಂಟೋ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಮತಾ ಡಿ ಎಸ್ ಗಟ್ಟಿ, ವಿಧಾನಪರಿಷತ್ ಶಾಸಕ ಐವನ್ ಡಿಸೋಜಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಜೋಕಿಂ ಸ್ಟ್ಯಾನಿ ಅಲ್ವಾರಿಸ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಉಮರ್ ಯು. ಹೆಚ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್‌ ಕುಮಾರ್, ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಜೋಕಿಂ ಡಿಸೋಜಾ, ಸುರೇಖಾ ಚಂದ್ರಹಾಸ್, ಸದಸ್ಯರಾದ ಆಲಿಸ್ಟನ್ ಕ್ಲೈವ್ ಡಿಕುನ್ಹಾ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಶಾಹುಲ್ ಹಮೀದ್, ರಫೀಕ್, ಉಮಾನಾಥ್ ಶೆಟ್ಟಿ, ಪದ್ಮನಾಭ ಸಾಲ್ಯಾನ್, ಮತ್ತಿತರರು ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ ಕಾರ್ಯಕ್ರಮ ಆಯೋಜಿಸಿದ್ದರು.

ಕಾರ್ಯಕ್ರಮದ ಮುಂಚಿತವಾಗಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಹೆಚ್ ಎಂ. ರೇವಣ್ಣ ಸಂಜೀವಿನಿ ಮಾಸಿಕ ಸಂತೆ ಉದ್ಘಾಟಿಸಿದರು.
ತಾಲೂಕು ಪಂಚಾಯತ್ ಆಡಳಿತ ಅಧಿಕಾರಿ ಶಕುಂತಲಾ ಶೆಣೈ ಸ್ವಾಗತಿಸಿ, ಗ್ರಾಮೀಣ ಉದ್ಯೋಗ ಇಲಾಖೆ ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...