ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಪೀಠಕ್ಕಾಗಿ ರಚಿಸಲ್ಪಟ್ಟ ಹೋರಾಟ ಸಮಿತಿಯ ಸಂಚಾಲಕ ಐವನ್ ಡಿಸೋಜ ನೇತೃತ್ವದಲ್ಲಿ ಶುಕ್ರವಾರ ಸಮಾಲೋಚನಾ ಸಭೆ ನಡೆಯಿತು.
ಸಭೆಯಲ್ಲಿ ಕೆಸಿಸಿಐ ಅಧ್ಯಕ್ಷ ಪಿ.ಬಿ. ಅಹ್ಮದ್ ಮುದಸ್ಸರ್, ಎಸ್‌ಡಿಎಮ್ ಲಾ ಕಾಲೇಜಿನ ಪ್ರಾಂಶುಪಾಲ ಡಾ.ತಾರಾ ನಾಥ್, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕಾರ್ಯದರ್ಶಿ ಡಾ.ಜೂಲಿಯಾನ ಸಲ್ದಾನ, ಡಾಕ್ಟರ್ ಅಸೋಸಿಯೇಶನ್‌ನ ಡಾ. ಜಿ.ಕೆ. ಭಟ್, ಕೆಥೊಲಿಕ್ ಸಭೆಯ ಅಧ್ಯಕ್ಷ ಸಂತೋಷ್ ಡಿಸೋಜ, ಕೊಂಕಣಿ ಅಕಾಡಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ತುಳು ಅಕಾಡಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಆಟೊರಿಕ್ಷಾ ಸಂಘಟನೆಯ ಅಧ್ಯಕ್ಷ ರಾಜೇಶ್, ಅನಿಲ್ ಲೋಬೋ ಕ್ರೆಡೈ ಅಧ್ಯಕ್ಷ ವಿನೋದ್, ಬಿಲ್ಡರ್ಸ್ ಅಸೋಸಿಯೇಶನ್ ಅಧ್ಯಕ್ಷ ಅರುಣ್‌ರಾಜ್, ನಿವೃತ್ತ ಸರಕಾರಿ ಉದ್ಯೋಗಿಗಳ ಸಂಘದ ಅಧ್ಯಕ್ಷ ಬಿ.ಎಂ. ರಾಜ್ ಗೋಪಾಲ್, ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ರಾವ್, ಬ್ಯಾರೀಸ್ ಕೆನರಾ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಎಸ್. ಎಂ. ರಶೀದ್ ಹಾಜಿ, ಅಮುಕ್ತ್ ಅಧ್ಯಕ್ಷ ಡಾ. ಪುರುಷೋತ್ತಮ್ ಕೆ.ಡಿ., ಇಂಟಕ್ ಅಧ್ಯಕ್ಷ ಮನೋಹರ್ ಶೆಟ್ಟಿ, ಕಾರ್ಮಿಕ ಪರಿಷತ್ ಕಾರ್ಯದರ್ಶಿ ದಯಾನಂದ್ ರೈ ಉಪಸ್ಥಿತರಿದ್ದರು.
ಕರಾವಳಿ ಭಾಗದಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇದೆ. ಕರಾವಳಿಯಿಂದ ಬೆಂಗಳೂರಿಗೆ ತೆರಳಿ ನ್ಯಾಯ ಪಡೆಯುವುದು ಅಸಾದ್ಯವಾಗಿದೆ. ಹೆಚ್ಚು ಹಣವನ್ನೂ ವ್ಯಯಿಸಬೇಕಾಗುತ್ತದೆ. ಹಾಗಾಗಿ ನ್ಯಾಯಾಧೀಶರು ಮಂಗಳೂರು ಭೇಟಿ ನೀಡುವ ಸಂದರ್ಭ ಬೇಕಾದ ಎಲ್ಲಾ ಸಹಕಾರಗಳನ್ನು ನೀಡಲು ಸಂಘಟನೆಯ ಪ್ರಮುಖರು ಭರವಸೆ ನೀಡಿದರು.





