ಮಂಗಳೂರು | ಮುಸ್ಲಿಮರ ಮೇಲಿನ ಅಪನಂಬಿಕೆ ಹೆಚ್ಚುತ್ತಿದೆ; ಇದನ್ನು ಹೋಗಲಾಡಿಸುವುದು ನಮ್ಮೆಲ್ಲರ ಜವಾಬ್ದಾರಿ: ಡಾ. ವಾಸು

Date:

ಆಧ್ಯಾತ್ಮಿಕ ಕೇಂದ್ರಗಳು ಹೆಚ್ಚಾಗುತ್ತಿದ್ದರೂ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಹಾಗೂ ನೈಜ ಆಧ್ಯಾತ್ಮಿಕತೆ ಕ್ಷೀಣಿಸುತ್ತಿರುವುದು ವಿಷಾದನೀಯ. ಆಧ್ಯಾತ್ಮಿಕತೆಯ ಜೊತೆಗೆ ಮಾನವೀಯ ಮೌಲ್ಯಗಳನ್ನೂ ಪ್ರತಿಪಾದಿಸಿ, ಅವುಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡ ಪ್ರವಾದಿ ಮುಹಮ್ಮದ್ (ಸ) ಅವರ ಚಿಂತನೆಗಳು ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿವೆ ಎಂದು ಈದಿನ.ಕಾಮ್ ಮುಖ್ಯಸ್ಥ ಡಾ. ವಾಸು ಎಚ್.ವಿ. ಹೇಳಿದರು.

- Advertisement -

ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ‘ಕ್ರಾಂತಿಯ ಜ್ಯೋತಿ – ಪ್ರವಾದಿ ಮುಹಮ್ಮದ್ (ಸ) ಸೀರತ್ ಅಭಿಯಾನ’ದ ಅಂಗವಾಗಿ ‘ಪ್ರವಾದಿ ಮುಹಮ್ಮದ್ (ಸ): ವರ್ತಮಾನ ಭಾರತದ ಪೂರ್ವಾಗ್ರಹ ಮತ್ತು ವಾಸ್ತವ’ ಎಂಬ ಕೇಂದ್ರೀಯ ವಿಷಯದಲ್ಲಿ ಶುಕ್ರವಾರ ಸಂಜೆ ಮಂಗಳೂರಿನ ಪುರಭವನದಲ್ಲಿ ನಡೆದ ವಿಚಾರಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...
WhatsApp Image 2026 09 12 at 4.57.09 PM 1

ಇಂದು ಜಗತ್ತಿನಾದ್ಯಂತ ಮಸೀದಿ, ಮಂದಿರ, ಚರ್ಚ್ ಸೇರಿದಂತೆ ಆಧ್ಯಾತ್ಮಿಕ ಕೇಂದ್ರಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಅದಕ್ಕೆ ಅನುಗುಣವಾಗಿ ಜನರಲ್ಲಿ ಮಾನವೀಯ ಮೌಲ್ಯಗಳು ಹಾಗೂ ಆಧ್ಯಾತ್ಮಿಕತೆ ಹೆಚ್ಚಾಗುತ್ತಿಲ್ಲ. ಪ್ರವಾದಿ ಮುಹಮ್ಮದ್ (ಸ) ಅವರು ಆಧ್ಯಾತ್ಮಿಕತೆಯೊಂದಿಗೆ ಮಾನವೀಯ ಮೌಲ್ಯಗಳಿಗೂ ಮಹತ್ವ ನೀಡಿದರು. ತಮ್ಮ ಬದುಕಿನಲ್ಲಿಯೇ ಆ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾದರು ಎಂದು ಅವರು ಹೇಳಿದರು.

ಪ್ರವಾದಿಯ ಅನುಯಾಯಿಗಳಾದ ಮುಸ್ಲಿಮರು ಮಾನವೀಯ ಮೌಲ್ಯಗಳನ್ನು ಆಧರಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದಕ್ಕೆ ಕೋವಿಡ್-19 ಕಾಲಘಟ್ಟದ ಹಲವು ಘಟನೆಗಳು ಸಾಕ್ಷಿಯಾಗಿವೆ. ಕೋವಿಡ್‌ನಿಂದ ಮೃತಪಟ್ಟವರ ಮೃತದೇಹಗಳನ್ನು ಅವರ ಸ್ವಧರ್ಮೀಯರೇ ಅಂತ್ಯಸಂಸ್ಕಾರ ಮಾಡಲು ಹಿಂದೇಟು ಹಾಕಿದ ಸಂದರ್ಭದಲ್ಲಿ, ಜಾತಿ-ಧರ್ಮದ ಭೇದವಿಲ್ಲದೆ ಮುಸ್ಲಿಮರು ಮೃತದೇಹಗಳ ಅಂತ್ಯಸಂಸ್ಕಾರ ನಡೆಸಿದ ಘಟನೆಗಳು ಮಾನವೀಯತೆಯ ಮಹತ್ವವನ್ನು ನಮಗೆ ನೆನಪಿಸುತ್ತವೆ ಎಂದು ಡಾ. ವಾಸು ಎಚ್.ವಿ. ಹೇಳಿದರು.

ನಮ್ಮ ಧರ್ಮ, ಸಿದ್ಧಾಂತ ಹಾಗೂ ನಂಬಿಕೆಗಳು ವಿಭಿನ್ನವಾಗಿರಬಹುದು. ಆದರೆ ಅವುಗಳನ್ನು ವಿನಾಕಾರಣ ಮುಖಾಮುಖಿಯಾಗಿಸಿ ದ್ವೇಷದ ವಾತಾವರಣ ನಿರ್ಮಿಸುವ ಬದಲು ಪರಸ್ಪರ ಗೌರವ ಮತ್ತು ಮಾನವೀಯತೆಯ ಮೂಲಕ ಆಧ್ಯಾತ್ಮಿಕತೆಯತ್ತ ಸಮಾಜವನ್ನು ಕೊಂಡೊಯ್ಯುವ ಅಗತ್ಯವಿದೆ. ಇದರಿಂದ ನಾಡಿನಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸಲು ಸಾಧ್ಯವಾಗುತ್ತದೆ ಎಂದರು.

ಸಮ-ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ಹಾಗೂ ಮನುಕುಲದ ಹಿತಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟ ಪ್ರವಾದಿ ಮುಹಮ್ಮದ್ (ಸ) ಮತ್ತು ಅವರ ಅನುಯಾಯಿಗಳಾದ ಮುಸ್ಲಿಮರ ಕುರಿತು ಸಮಾಜದಲ್ಲಿ ಅಪನಂಬಿಕೆಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಅಪನಂಬಿಕೆಗಳು ಸಮಾಜದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಅವುಗಳನ್ನು ನಿವಾರಿಸುವ ತುರ್ತು ಅಗತ್ಯವಿದೆ. ಇದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯೂ ಆಗಿದೆ ಎಂದು ಅವರು ಹೇಳಿದರು.

ಪ್ರವಾದಿ ಮುಹಮ್ಮದ್ (ಸ) ಅವರ ಚಿಂತನೆಗಳು, ನಡೆ-ನುಡಿಗಳು ಹಾಗೂ ಮಾನವೀಯ ಮೌಲ್ಯಗಳು ಸಮಾಜವನ್ನು ಹೊಸ ದಾರಿಯತ್ತ ಕೊಂಡೊಯ್ಯಲು ಸಹಕಾರಿಯಾಗಲಿ ಎಂದು ಡಾ. ವಾಸು ಎಚ್.ವಿ. ಆಶಿಸಿದರು.

WhatsApp Image 2026 09 12 at 4.57.09 PM

‘ಮನುಷ್ಯ ತನ್ನ ಸ್ವಾರ್ಥವನ್ನು ಬಿಟ್ಟು ಬದುಕಬೇಕು’

ರೊಜಾರಿಯೊ ಚರ್ಚ್‌ನ ಪ್ರಧಾನ ಗುರು ಫಾ. ವಲೇರಿಯನ್ ಡಿಸೋಜ ಮಾತನಾಡಿ, ದೇವರು ಮನುಷ್ಯನನ್ನು ಸೃಷ್ಟಿಸುವಾಗ ಆತನಲ್ಲಿ ಕೆಲವು ಧ್ಯೇಯಗಳನ್ನು ಅಡಕಗೊಳಿಸಿದ್ದಾನೆ. ಅದರಂತೆ ಜೀವನ ನಡೆಸಿದಾಗ ಮಾತ್ರ ಸಮಾಜದಲ್ಲಿ ನಿಜವಾದ ಶಾಂತಿ ನೆಲೆಸಲು ಸಾಧ್ಯ ಎಂದರು.

ಮನುಷ್ಯ ಸ್ವಾರ್ಥದ ಜೀವನ ನಡೆಸಿದಾಗ ಸಮಾಜದಲ್ಲಿ ಅಶಾಂತಿ, ದಬ್ಬಾಳಿಕೆ ಹಾಗೂ ಸಂಘರ್ಷಗಳು ಉಂಟಾಗುತ್ತವೆ. ಆದ್ದರಿಂದ ವ್ಯಕ್ತಿಯ ಅಂತರಂಗದ ಪರಿವರ್ತನೆಯೇ ಸಮಾಜದ ಪರಿವರ್ತನೆಗೆ ಮೂಲ ಕಾರಣವಾಗಬೇಕು ಎಂದು ಹೇಳಿದರು.

21ನೇ ಶತಮಾನದಲ್ಲಿ ಬದುಕುತ್ತಿರುವ ನಾವು ಹಿಂದೆಂದೂ ಕಾಣದಂತಹ ತಂತ್ರಜ್ಞಾನ ಕ್ರಾಂತಿಯನ್ನು ಅನುಭವಿಸುತ್ತಿದ್ದೇವೆ. ವಿಶ್ವದ ಯಾವುದೇ ಮೂಲೆಯಲ್ಲಿರುವ ವ್ಯಕ್ತಿಯನ್ನು ಕ್ಷಣಾರ್ಧದಲ್ಲಿ ಸಂಪರ್ಕಿಸುವ ತಂತ್ರಜ್ಞಾನದಿಂದ ಹಿಡಿದು ಇಂದು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದವರೆಗೆ ಮನುಷ್ಯನ ಜ್ಞಾನ ಹಾಗೂ ಪ್ರಗತಿ ವಿಸ್ತರಿಸಿದೆ ಎಂದರು.

ಮನುಷ್ಯನಲ್ಲಿರುವ ಜ್ಞಾನ ಮತ್ತು ಪ್ರಬುದ್ಧತೆಗೆ ಪ್ರವಾದಿ ಮುಹಮ್ಮದ್ (ಸ) ಅವರು ನೀಡಿದ ‘ಓದಿರಿ’ ಎಂಬ ಕರೆಯೂ ಮಹತ್ವದ ಸಾಕ್ಷಿಯಾಗಿದೆ. ಜ್ಞಾನದ ಮೂಲಕ ವ್ಯಕ್ತಿಯ ಅಂತರಂಗವನ್ನು ಹಾಗೂ ಸಮಾಜವನ್ನು ಪರಿವರ್ತಿಸುವ ಸಂದೇಶವನ್ನು ಅದು ನೀಡುತ್ತದೆ. ಏಸು ಕ್ರಿಸ್ತರ ಸಂದೇಶಗಳಲ್ಲಿಯೂ ಇದೇ ರೀತಿಯ ಮಾನವೀಯ ಪರಿವರ್ತನೆಯ ಆಶಯವಿದೆ ಎಂದು ಫಾ. ವಲೇರಿಯನ್ ಡಿಸೋಜ ಹೇಳಿದರು.

WhatsApp Image 2026 09 12 at 4.57.08 PM 2

ಅನುಪಮ ಮಹಿಳಾ ಮಾಸಿಕದ ಸಂಪಾದಕಿ ಸಬೀಹಾ ಫಾತಿಮಾ ಮಾತನಾಡಿ, ನಾವೆಲ್ಲರೂ ಒಬ್ಬನೇ ದೇವನ ಸೃಷ್ಟಿಗಳು ಹಾಗೂ ನಮ್ಮೆಲ್ಲರ ಮೂಲ ಒಂದೇ ಎಂಬ ಮಾನವೀಯ ಸಂದೇಶವನ್ನು ಪ್ರವಾದಿ ಮುಹಮ್ಮದ್ (ಸ) ಅವರು ಸಾರಿದ್ದಾರೆ ಎಂದರು. ಜನರಿಗೆ ಕಾಲಕಾಲಕ್ಕೆ ಸನ್ಮಾರ್ಗದ ಸಂದೇಶವನ್ನು ತಲುಪಿಸಲು ಲಕ್ಷಾಂತರ ಪ್ರವಾದಿಗಳು ಬಂದಿದ್ದು, ಅವರಲ್ಲಿ ಕೊನೆಯವರೇ ಪ್ರವಾದಿ ಮುಹಮ್ಮದ್ (ಸ) ಎಂದು ಹೇಳಿದರು.

ಇಸ್ಲಾಂ ಮಹಿಳೆಯರಿಗೆ ಹಲವು ಹಕ್ಕುಗಳನ್ನು ನೀಡಿದೆ. ಆದರೆ ಪ್ರಸ್ತುತ ಸಮಾಜದಲ್ಲಿ ಪೂರ್ವಾಗ್ರಹಪೀಡಿತವಾಗಿ ಇಸ್ಲಾಂ ಹಾಗೂ ಮುಸ್ಲಿಮ್ ಮಹಿಳೆಯರ ಕುರಿತು ಶೋಷಣೆಯ ಚಿತ್ರಣವನ್ನು ಬಿಂಬಿಸಲಾಗುತ್ತಿದೆ. ವಾಸ್ತವಾಂಶಗಳನ್ನು ಅರಿಯುವ ಮೂಲಕ ಇಂತಹ ಪೂರ್ವಾಗ್ರಹಗಳನ್ನು ದೂರ ಮಾಡಬೇಕಾಗಿದೆ ಎಂದು ಅವರು ಹೇಳಿದರು.

WhatsApp Image 2026 09 12 at 4.57.08 PM

‘ಪ್ರವಾದಿ ಯಾರಿಗೂ ಧರ್ಮ ಸ್ವೀಕಾರದ ಆಮಿಷವೊಡ್ಡಲಿಲ್ಲ’

ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ಉತ್ತರ ಅಧ್ಯಕ್ಷ ಸಿ.ಎ. ಮುಹಮ್ಮದ್ ಇಸಾಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರವಾದಿ ಮುಹಮ್ಮದ್ (ಸ) ಅವರು ಯಾರನ್ನೂ ಧರ್ಮ ಸ್ವೀಕರಿಸುವಂತೆ ಆಮಿಷಕ್ಕೆ ಒಳಪಡಿಸಲಿಲ್ಲ. ಅಂತಹ ಯಾವುದೇ ನಿರ್ದೇಶನವನ್ನೂ ದೇವರು ನೀಡಿರಲಿಲ್ಲ ಎಂದು ಹೇಳಿದರು. ಪ್ರವಾದಿಯವರಿಗೆ ವಿವಿಧ ರೀತಿಯ ಆಮಿಷಗಳನ್ನು ನೀಡಲಾಗಿದ್ದರೂ ಅವರು ತಮ್ಮ ಧ್ಯೇಯ ಮತ್ತು ಸಿದ್ಧಾಂತಗಳಿಂದ ಹಿಂದೆ ಸರಿಯಲಿಲ್ಲ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸನ್ಮಾರ್ಗ ಸಮೂಹ ಮಾಧ್ಯಮದ ಸಂಪಾದಕ ಎ.ಕೆ. ಕುಕ್ಕಿಲ ಅವರು ವಿಷಯ ಮಂಡಿಸಿದರು. ವೇದಿಕೆಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ನಗರಾಧ್ಯಕ್ಷ ಕೆ.ಎಂ. ಅಶ್ರಫ್, ಮಹಿಳಾ ಘಟಕದ ಸಂಚಾಲಕಿ ಸಾಜಿದಾ ಮೂಮಿನ್, ವಲಯ ಸಂಚಾಲಕ ಸಈದ್ ಇಸ್ಮಾಯೀಲ್ ಹಾಗೂ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಉಪಸ್ಥಿತರಿದ್ದರು.

ಅಭಿಯಾನದ ಸಂಚಾಲಕ ಅಬ್ದುಲ್ ಗಫೂರ್ ಸ್ವಾಗತಿಸಿದರು. ಅಬ್ದುಲ್ ಲತೀಫ್ ಆಲಿಯಾ ಕಿರಾಅತ್ ಪಠಿಸಿದರು. ಶಹೀದಾ ಉಮರ್ ಕಾರ್ಯಕ್ರಮ ನಿರೂಪಿಸಿದರು. ಲುಬ್ನಾ ಝಾಕಿಯಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ...

ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ...

ಕಲಬುರಗಿ | ಸನ್ನತ್ತಿ ಬ್ಯಾರೇಜ್ ಸಂತ್ರಸ್ತ ರೈತರಿಗೆ 13 ವರ್ಷವಾದರೂ ಪರಿಹಾರವಿಲ್ಲ!

ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ಚಿತ್ತಾಪುರ ಹಾಗೂ...