ಮಂಗಳೂರು | ದುರಸ್ತಿ ವೇಳೆ ಲಾರಿ ಅಡಿಗೆ ಸಿಲುಕಿ ಚಾಲಕ ಸಾವು

Date:

ಲಾರಿಯ ತಾಂತ್ರಿಕ ದೋಷ ಸರಿಪಡಿಸುವ ವೇಳೆ ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಕನ್ಯಾನ ಗ್ರಾಮದ ಪಾದೆಕಲ್ಲು–ಪೆರೋಡಿ ಸರವುಗುಡ್ಡೆ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.

- Advertisement -

ಮಾಹಿತಿಯ ಪ್ರಕಾರ, ಲಾರಿಯಲ್ಲಿ ಕಾಣಿಸಿಕೊಂಡ ತಾಂತ್ರಿಕ ವೈಫಲ್ಯವನ್ನು ಸರಿಪಡಿಸಲು ಮಹೇಶ್ ಅವರು ವಾಹನದ ಕೆಳಭಾಗಕ್ಕೆ ಇಳಿದು ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಏಕಾಏಕಿ ಲಾರಿ ಮುಂದಕ್ಕೆ ಚಲಿಸಿದ ಪರಿಣಾಮ ಅವರು ಚಕ್ರಗಳ ಅಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಘಟನೆಯ ಬಳಿಕ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಅಂಬ್ಯುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಲಾರಿಯ ಅಡಿಯಿಂದ ಮೃತದೇಹವನ್ನು ಹೊರತೆಗೆದರು. ಬಳಿಕ ಮೃತದೇಹವನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ರವಾನಿಸಲಾಯಿತು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ತ್ರೀ ಸಬಲೀಕರಣಕ್ಕೆ ರಾಣಿ ಚನ್ನಮ್ಮನ ಜೀವನ, ಹೋರಾಟವೇ ಪ್ರೇರಣೆ: ಪ್ರೊ. ಸಿ.ಎಂ ತ್ಯಾಗರಾಜ

ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರು ಪ್ರತಿಪಾದಿಸಿದ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ...

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ...

ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ...