ಮಂಗಳೂರು | ಮೂಡಾದಲ್ಲಿ ಬ್ರೋಕರ್‌ಗಳ ಹಾವಳಿಗೆ ಕಡಿವಾಣ; ನಿಯಮ ಸರಳೀಕರಣಕ್ಕೆ ಒತ್ತು : ಸಂತೋಷ್ ಶೆಟ್ಟಿ

Date:

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)ದಲ್ಲಿ ಮಧ್ಯವರ್ತಿಗಳು ಹಾಗೂ ಬ್ರೋಕರ್‌ಗಳ ಹಾವಳಿಗೆ ಕಡಿವಾಣ ಹಾಕಿ, ಸಾರ್ವಜನಿಕರು ನೇರವಾಗಿ ಕಚೇರಿಗೆ ಬಂದು ತಮ್ಮ ಕೆಲಸಗಳನ್ನು ಮಾಡಿಕೊಳ್ಳುವಂತಹ ವಾತಾವರಣ ನಿರ್ಮಿಸಲಾಗುವುದು ಎಂದು ಮೂಡಾದ ನೂತನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭರವಸೆ ನೀಡಿದ್ದಾರೆ.

- Advertisement -

ಸೋಮವಾರ ಮೂಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಈ ದಿನ,ಕಾಮ್‌ ಜೊತೆ ಮಾತನಾಡಿದ ಅವರು, ಮೂಡಾದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಮೂಡಾದ ನಿಯಮಗಳು ಮತ್ತು ಪ್ರಕ್ರಿಯೆಗಳು ಸಂಕೀರ್ಣವಾಗಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಗಳನ್ನು ಸರಳೀಕರಣಗೊಳಿಸಲಾಗುವುದು. ಯಾವುದೇ ಕೆಲಸಕ್ಕಾಗಿ ಸಾರ್ವಜನಿಕರು ಮಧ್ಯವರ್ತಿಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮೂಡಾ ವ್ಯಾಪ್ತಿಯ ವಿವಿಧ ಬಡಾವಣೆಗಳ ನಿವೇಶನ ಹಂಚಿಕೆ ಹಾಗೂ ಕಾಮಗಾರಿಗಳ ಕುರಿತು ಮಾಹಿತಿ ನೀಡಿದ ಸಂತೋಷ್ ಶೆಟ್ಟಿ, ಕುಂಜತ್ತಬೈಲ್ ಲೇಔಟ್ 18 ಎಕರೆ ಪ್ರದೇಶದಲ್ಲಿದ್ದು, ಸುಮಾರು 200 ನಿವೇಶನಗಳಿವೆ. ಈಗಾಗಲೇ 35 ನಿವೇಶನಗಳನ್ನು ಹಂಚಿಕೆ ಮಾಡಲಾಗಿದ್ದು, ಉಳಿದ ನಿವೇಶನಗಳ ಹಂಚಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ಕೋಣಾಜೆ ಲೇಔಟ್ 13.5 ಎಕರೆ ಪ್ರದೇಶದಲ್ಲಿದ್ದು, 142 ನಿವೇಶನಗಳಿವೆ. ಕೆಲವು ತಾಂತ್ರಿಕ ಕಾರಣಗಳಿಂದ ಕಾಮಗಾರಿ ಹಾಗೂ ಪ್ರಕ್ರಿಯೆಯಲ್ಲಿ ವಿಳಂಬವಾಗಿದ್ದು, ಸಮಸ್ಯೆಗಳನ್ನು ಬಗೆಹರಿಸಿ ಶೀಘ್ರವೇ ಕಾಮಗಾರಿ ಮುಂದುವರಿಸಲಾಗುವುದು ಎಂದು ತಿಳಿಸಿದರು.

ಚೇಳ್ಯಾರು ಲೇಔಟ್ 45 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದ್ದು, ಸುಮಾರು 700 ನಿವೇಶನಗಳ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಈ ಹಿಂದೆ ನಿವೇಶನ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಉಂಟಾಗಿದ್ದ ಗೊಂದಲವನ್ನು ಪ್ರಸ್ತುತ ಮಾರುಕಟ್ಟೆ ಮೌಲ್ಯಕ್ಕೆ ಅನುಗುಣವಾಗಿ ಪರಿಹರಿಸಲಾಗುವುದು ಎಂದರು.

WhatsApp Image 2026 08 31 at 11.00.25 PM 2

ಸುರತ್ಕಲ್–ಬೈಕಂಪಾಡಿ–ಮೂಲ್ಕಿ ಕಡೆಗೆ ಮಂಗಳೂರು ವಿಸ್ತರಣೆ

ಮಂಗಳೂರು ನಗರ ಒಂದೇ ಭಾಗದಲ್ಲಿ ಕೇಂದ್ರೀಕೃತವಾಗಿ ಬೆಳೆಯದೆ ಸುರತ್ಕಲ್, ಬೈಕಂಪಾಡಿ ಹಾಗೂ ಮೂಲ್ಕಿ ಭಾಗಗಳತ್ತ ವಿಸ್ತರಿಸಬೇಕಾಗಿದೆ. ಈ ಪ್ರದೇಶಗಳ ಅಭಿವೃದ್ಧಿಗೆ ಅಗತ್ಯವಿರುವ ರಸ್ತೆ ಹಾಗೂ ಮೂಲಸೌಕರ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಸಂತೋಷ್ ಶೆಟ್ಟಿ ಹೇಳಿದರು.

ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳಲು ಮೂಡಾ ವತಿಯಿಂದ ಫ್ಲೈಓವರ್ ಹಾಗೂ ಅಂಡರ್‌ಪಾಸ್‌ಗಳ ನಿರ್ಮಾಣದ ಯೋಜನೆಗಳನ್ನು ಮುಂಬರುವ ದಿನಗಳಲ್ಲಿ ರೂಪಿಸಲಾಗುವುದು ಎಂದರು.

ಕೆರೆಗಳ ಪುನಶ್ಚೇತನ, ವಸತಿ ಪ್ರದೇಶಗಳಲ್ಲಿ ಪುಟ್ಟ ಪಾರ್ಕ್‌ಗಳು

ಮೂಡಾ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಗುರುತಿಸಿ, ಅವುಗಳ ಅಭಿವೃದ್ಧಿ ಹಾಗೂ ಪುನಶ್ಚೇತನ ಕಾಮಗಾರಿಗಳಿಗೆ ವೇಗ ನೀಡಲಾಗುವುದು. ಕದ್ರಿ ಪಾರ್ಕ್‌ನಂತಹ ಬೃಹತ್ ಉದ್ಯಾನವನ ನಿರ್ಮಿಸಲು ನಗರದಲ್ಲಿ ಜಾಗದ ಕೊರತೆಯಿದೆ. ಹೀಗಾಗಿ ವಸತಿ ಪ್ರದೇಶಗಳಲ್ಲಿ ಲಭ್ಯವಿರುವ 25 ಸೆಂಟ್ಸ್, 50 ಸೆಂಟ್ಸ್ ಹಾಗೂ ಖಾಸಗಿ ಜಾಗಗಳನ್ನು ಪಡೆದುಕೊಂಡು ಸಣ್ಣ ಮತ್ತು ಸುಂದರ ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಚಿಂತನೆ ಇದೆ ಎಂದು ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...