ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲಿನಲ್ಲಿ ಪತ್ರಕರ್ತ ಜಗದೀಶ್ ಪೂಜಾರಿ ಅವರ ಮನೆಯ ಮೇಲೆ ಸೋಮವಾರ ರಾತ್ರಿ ಭಾರೀ ಗಾಳಿ-ಮಳೆಯ ಪರಿಣಾಮ ಮರ ಉರುಳಿ ಬಿದ್ದು ಮನೆಯ ಒಂದು ಭಾಗಕ್ಕೆ ಹಾನಿಯಾಗಿದೆ.
ರಾತ್ರಿ ಸುರಿದ ಭಾರೀ ಗಾಳಿ ಮತ್ತು ಮಳೆಯಿಂದಾಗಿ ಮನೆಯ ಸಮೀಪದಲ್ಲಿದ್ದ ದೊಡ್ಡ ಮರವೊಂದು ಬೇರುಸಹಿತ ಉರುಳಿ ಮನೆಯ ಮೇಲ್ಛಾವಣಿಯ ಮೇಲೆ ಬಿದ್ದಿದೆ. ಪರಿಣಾಮ ಮನೆಯ ಮೇಲ್ಛಾವಣಿ ಸೇರಿದಂತೆ ಒಂದು ಭಾಗಕ್ಕೆ ಭಾಗಶಃ ಹಾನಿಯಾಗಿದೆ. ಘಟನೆ ಸಂಭವಿಸಿದ ವೇಳೆ ಮನೆಯಲ್ಲಿದ್ದವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಗ್ರಾಮ ಆಡಳಿತ ಅಧಿಕಾರಿ ಶ್ರೀನಿವಾಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹಾನಿಯ ವಿವರಗಳನ್ನು ಪರಿಶೀಲಿಸಿದರು. ಅಧಿಕಾರಿಗಳು ಸೂಕ್ತ ವರದಿ ಸಿದ್ಧಪಡಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.





