ನೆಲ್ಯಾಡಿ: ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Date:

ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

- Advertisement -

ಮೃತಪಟ್ಟವರನ್ನು ಕಾಸರಗೋಡು ಜಿಲ್ಲೆಯ ಏರಿಕ್ಕುಲಮ್ ನಿವಾಸಿ ರಿಜೇಶ್. ವಿ. (33) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತೋರ್ವ ಬೈಕ್ ಸವಾರನನ್ನು ಕೊಕ್ಕಡ ಗ್ರಾಮದ ಹಳಿಂಗೇರಿ ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಲಭ್ಯ ಮಾಹಿತಿಯ ಪ್ರಕಾರ, ಗಿರೀಶ್ ಅವರು ಗುಂಡ್ಯದಿಂದ ಕೊಕ್ಕಡ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದು, ಪೆರಿಯಶಾಂತಿ ಸಮೀಪ ತಮ್ಮ ಬೈಕನ್ನು ಕೊಕ್ಕಡದ ಕಡೆಗೆ ತಿರುಗಿಸುವ ವೇಳೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಬೈಕ್ ಢಿಕ್ಕಿ ಹೊಡೆದಿದೆ. ಆ ಬೈಕ್‌ನಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ರಿಜೇಶ್ ಅವರು ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಗಿರೀಶ್ ಅವರನ್ನು ಸ್ಥಳೀಯರು ಹಾಗೂ ಸಾರ್ವಜನಿಕರ ಸಹಕಾರದಿಂದ ತಕ್ಷಣ ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟ ರಿಜೇಶ್ ಅವರ ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಚಿಕ್ಕಮಗಳೂರು | ‘ಮಳಲೂರು ಏತ ನೀರಾವರಿ ಯೋಜನೆ’: ಹೆಸರಿಗಷ್ಟೇ ಈ ಯೋಜನೆ ಆಗಿದೆಯೇ?

ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ...