ಮಂಗಳೂರು | ನೇತ್ರಾವತಿ ನದಿಯಲ್ಲಿ ಯುವಕನ ಶವ ಪತ್ತೆ; ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನ

Date:

ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಸಮೀಪದ ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ.

- Advertisement -

ಮೃತರನ್ನು ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಮಹಮ್ಮದ್ ಅವರ ಪುತ್ರ ಇರ್ಫಾನ್ (36) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣಾ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ನದಿಯಲ್ಲಿ ಮೃತದೇಹ ತೇಲುತ್ತಿರುವುದು ಗಮನಕ್ಕೆ ಬಂದಿದ್ದು, ತಕ್ಷಣವೇ ಬಂಟ್ವಾಳ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಸ್ಥಳೀಯರು ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಿ, ಗುರುತು ಪತ್ತೆಯಾಗದ ಹಿನ್ನೆಲೆ ಬಂಟ್ವಾಳ ಸರಕಾರಿ ಆಸ್ಪತ್ರೆ ಶವಗಾರದ ಶೀತಲೀಕರಣ ಘಟಕದಲ್ಲಿ ಇರಿಸಿದ್ದರು. ಬಳಿಕ ಸಂಜೆ ವೇಳೆಗೆ ಮೃತದೇಹವು ಗೂಡಿನಬಳಿಯ ಇರ್ಫಾನ್ ಅವರದ್ದೆಂದು ದೃಢಪಟ್ಟಿದೆ.

ಇರ್ಫಾನ್ ಅವರು ಈ ಹಿಂದೆ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದು, ಸುಮಾರು ಮೂರು ವರ್ಷಗಳ ಹಿಂದೆ ಊರಿಗೆ ಮರಳಿದ್ದರು. ನಂತರ ಆಟೋರಿಕ್ಷಾ ಖರೀದಿಸಿ ಚಾಲಕರಾಗಿ ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ. ವಿವಾಹಿತರಾಗಿರುವ ಅವರಿಗೆ ಮೂವರು ಮಕ್ಕಳಿದ್ದಾರೆ.

ಇವರು ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದರು ಎನ್ನಲಾಗಿದ್ದು, ಇದೀಗ ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮೃತದೇಹದ ಕೈಗಳಲ್ಲಿ ಗಾಯದ ಗುರುತುಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣದ ಸತ್ಯಾಸತ್ಯತೆ ಬಹಿರಂಗಪಡಿಸಿ ನ್ಯಾಯ ಒದಗಿಸಬೇಕು ಎಂದು ಕುಟುಂಬ ಸದಸ್ಯರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃಕ್ಷಥಾನ್ ಹೆರಿಟೇಜ್ ರನ್ 2026: ತೆರೆಮರೆಯ ಸಾಧಕರಿಗೆ ಗೌರವ

ಕ್ರೀಡೆ, ಪಾರಂಪರಿಕ ಕ್ಷೇತ್ರ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಮನಾರ್ಹ ಸೇವೆ...

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...