ಮಂಗಳೂರು | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

Date:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಕದ್ರಿ ಸರ್ಕಲ್‌ನಲ್ಲಿ ನಡೆಯಿತು.

- Advertisement -

ಈ ಸಂದರ್ಭ ಮಾತನಾಡಿದ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್, ನೀಟ್ ಪರೀಕ್ಷೆಯಂತಹ ದೇಶದ ಮಹತ್ವದ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಅತ್ಯಂತ ಆಘಾತಕಾರಿ. ಕೇಂದ್ರ ಸರ್ಕಾರ ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕವಾಗಿ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಹಗರಣದ ಹಿಂದೆ ಬಿಜೆಪಿ ಯುವ ಮೋರ್ಚಾದ ಸದಸ್ಯರ ಜಾಲ ಸಕ್ರಿಯವಾಗಿದ್ದು, ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಳೆದ ಕೆಲವು ವರ್ಷಗಳಿಂದ ವಿವಿಧ ರಾಷ್ಟ್ರೀಯ ಪರೀಕ್ಷೆಗಳಲ್ಲಿ ಪದೇ ಪದೇ ಅಕ್ರಮಗಳು ನಡೆಯುತ್ತಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲಿನ ಜನರ ನಂಬಿಕೆ ಕುಸಿಯುತ್ತಿದೆ. ದೇಶದ ಜನರಿಗೆ “ಅಚ್ಚೇ ದಿನ್” ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ, ಕಳೆದ ಹಲವು ವರ್ಷಗಳಲ್ಲಿ ಜನಸಾಮಾನ್ಯರ ಬದುಕನ್ನು ದುಬಾರಿ ಜೀವನದ ಸಂಕಷ್ಟಕ್ಕೆ ತಳ್ಳಿದೆ. ಅದಾನಿ, ಅಂಬಾನಿಗಳಂತಹ ಕಾರ್ಪೊರೇಟ್ ಸಾಮ್ರಾಜ್ಯಗಳಿಗೆ ‘ಅಮೃತಕಾಲ’ವನ್ನೇ ಮೋದಿ ಸರಕಾರ ಧಾರೆ ಎರೆದಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರಾದ ಅಪ್ಪಿ, ಲಾರೆನ್ಸ್ ಡಿಸೋಜಾ, ಸುಹಾನ್ ಆಳ್ವ, ಮುಖಂಡರಾದ ಸುಹೈಲ್ ಕಂದಕ್, ಅಭಿನಂದ್ ಹರೀಶ್, ಬಶೀರ್, ನವಾಝ್ ನರಿಂಗಾನ, ಹಾಶೀರ್ ಪೆರಿಮಾರ್, ಫೈಝಲ್, ಗೋಪಿನಾಥ್, ಹಕೀಂ, ಪೃಥ್ವಿರಾಜ್, ಇಮ್ತಿಯಾಝ್ ಕಲ್ಲಡ್ಕ , ಮಿಥೇಶ್, ರಿತೇಶ್ ಅಂಚನ್, ಸುಮಂಥ್, ಫಯಾಝ್ ಅಮ್ಮೆಮ್ಮಾರ್, ಚಂದ್ರಕಲಾ ಜೋಗಿ, ಸಾರಿಕ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...