ಮತದಾರರ ಪರಿಷ್ಕರಣೆ SIR ತರಬೇತಿಗೆ ಅಧಿಕಾರಿಗಳೇ ಗೈರು !

Date:

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕು ಕಚೇರಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಬೂತ್ ಮಟ್ಟದ ಏಜೆಂಟರಿಗೆ (ಬಿಎಲ್‌ಎ) ತರಬೇತಿ ಕಾರ್ಯಾಗಾರವು ಮಂಗಳೂರು ವಿಶ್ವವಿದ್ಯಾನಿಲಯದ ಕೊಣಾಜೆ ಕ್ಯಾಂಪಸ್‌ನಲ್ಲಿ ಬುಧವಾರ ಆರಂಭಗೊಂಡಿತು. ಆದರೆ ಕಾರ್ಯಾಗಾರದಲ್ಲಿ ಸಂಬಂಧಪಟ್ಟ ತಾಲೂಕು ಮಟ್ಟದ ಅಧಿಕಾರಿಗಳ ಗೈರುಹಾಜರಿಯಿಂದ ಭಾಗವಹಿಸಿದ ಬಿಎಲ್‌ಎಗಳು ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣ, ವೀರೇಂದ್ರ ಹೆಗ್ಡೆ ಸಭಾಂಗಣ ಹಾಗೂ ಮಲ್ಯ ಸಭಾಂಗಣಗಳಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ವಾಣಿಜ್ಯ ಅಧ್ಯಯನ ವಿಭಾಗದ ಪ್ರೊ. ಪರಮೇಶ್ವರ, ಗಣಿತಶಾಸ್ತ್ರ ವಿಭಾಗದ ಡಾ. ಚಂದ್ರು ಹೆಗ್ಡೆ ಹಾಗೂ ಡಾ. ಮೋಹನ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಎಸ್‌ಐಆರ್ ಪ್ರಕ್ರಿಯೆ, ಮತದಾರರ ನೋಂದಣಿ ಮತ್ತು ಪರಿಷ್ಕರಣೆ ಕುರಿತ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...
Screenshot 2026 06 17 211458

ಕಾರ್ಯಾಗಾರದ ವೇಳೆ ಬಿಎಲ್‌ಒಗಳು ಹಾಗೂ ಬಿಎಲ್‌ಎಗಳ ಪ್ರಶ್ನೆಗಳಿಗೆ ಉತ್ತರ ನೀಡಲು ಉಪತಹಶೀಲ್ದಾರರು ಕೆಲಕಾಲ ಹಾಜರಾಗಿ ತೆರಳಿದ್ದು, ನಂತರ ತಾಲೂಕಿನ ಯಾವುದೇ ಅಧಿಕಾರಿಗಳು ಸ್ಥಳದಲ್ಲಿರಲಿಲ್ಲ ಎಂದು ಆರೋಪಿಸಲಾಗಿದೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಲವು ತಾಂತ್ರಿಕ ಹಾಗೂ ಆಡಳಿತಾತ್ಮಕ ಪ್ರಶ್ನೆಗಳು ಉದ್ಭವಿಸಿದ್ದರೂ, ಅವುಗಳಿಗೆ ಸಮರ್ಪಕ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಭಾಗವಹಿಸಿದ್ದವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಕೆಲ ಬಿಎಲ್‌ಎಗಳು ದೂರವಾಣಿ ಮೂಲಕ ತಾಲೂಕು ತಹಶೀಲ್ದಾರರನ್ನು ಸಂಪರ್ಕಿಸಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಪ್ರಜಾಪ್ರಭುತ್ವದ ದೃಷ್ಟಿಯಿಂದ ಮಹತ್ವದ್ದಾಗಿರುವುದರಿಂದ, ಇಂತಹ ತರಬೇತಿ ಕಾರ್ಯಕ್ರಮಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪೂರ್ಣಾವಧಿ ಹಾಜರಿದ್ದು ಮಾರ್ಗದರ್ಶನ ನೀಡಬೇಕೆಂದು ಭಾಗವಹಿಸಿದವರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಭಟ್ಕಳ | ಗಣಪತಿ ವಿಸರ್ಜನೆ ವೇಳೆ ಮಸೀದಿ ಕಿಟಕಿ ಗಾಜು ಒಡೆದು, ಗೊಜ್ಜು ತೂರಾಟ ಆರೋಪ: ದೂರು–ಪ್ರತಿದೂರು ದಾಖಲು

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿಯ ಕಿಟಕಿ ಗಾಜನ್ನು ಕಲ್ಲಿನಿಂದ...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...