ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 2, 2026 ರಂದು ಜಿಲ್ಲೆಯ 12ನೇ ತರಗತಿವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಆದರೆ, ಕೆಲವು ಖಾಸಗಿ ಶಾಲೆಗಳು, ಕಾಲೇಜುಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳು ತರಗತಿಗಳನ್ನು ನಡೆಸಲಿವೆ ಎಂಬ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ದರ್ಶನ್ ಹೆಚ್.ವಿ., ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ಯಾವುದೇ ಶೈಕ್ಷಣಿಕ ಸಂಸ್ಥೆ ತರಗತಿಗಳನ್ನು ನಡೆಸಿರುವುದು ಕಂಡುಬಂದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ–2005ರಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
This video cannot be played in your browser. Open the video directly






