ಮಂಗಳೂರು | ವಿಮೆ–ಫಿಟ್ನೆಸ್ ಇಲ್ಲದ ಶಾಲಾ ವಾಹನ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿರುದ್ಧ ಪ್ರಕರಣ ದಾಖಲು

Date:

ಮಾಣಿ ಸಮೀಪದ ಕಲ್ಲೆಟ್ಟಿ ಪ್ರದೇಶದಲ್ಲಿ ಜು.22ರಂದು ಮರ ಬಿದ್ದು ದುರಂತಕ್ಕೀಡಾದ ಶಾಲಾ ವಾಹನದ ದಾಖಲೆ ಪತ್ರಗಳು ಮಾನ್ಯವಾಗಿರದ ಹಿನ್ನೆಲೆಯಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಮುಖ್ಯಸ್ಥ ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಜು.22ರಂದು ಸಂಜೆ ಬರಿಮಾರ್–ಕಲ್ಲೆಟ್ಟಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಶಾಲಾ ವಾಹನದ ಮೇಲೆ ಮರ ಉರುಳಿ ಬಿದ್ದ ಪರಿಣಾಮ ವಾಹನದಲ್ಲಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಘಟನೆಯ ತನಿಖೆ ನಡೆಸಿದ ಪೊಲೀಸರು ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ವಾಹನದ ದಾಖಲೆಗಳ ಕುರಿತು ವರದಿ ಪಡೆದಿದ್ದರು. ತನಿಖೆಯಲ್ಲಿ ಅಪಘಾತ ಸಂಭವಿಸಿದ ವೇಳೆ ವಾಹನದ ವಿಮಾ ಪತ್ರ (Insurance) ಹಾಗೂ ಅರ್ಹತಾ ಪತ್ರ (Fitness Certificate) ಚಾಲ್ತಿಯಲ್ಲಿರಲಿಲ್ಲ ಎಂಬುದು ದೃಢಪಟ್ಟಿದೆ. ಅಲ್ಲದೆ, ವಾಹನವನ್ನು ಶ್ರೀರಾಮ ವಿದ್ಯಾಕೇಂದ್ರದ ಹೆಸರಿನಲ್ಲಿ ನೋಂದಾಯಿಸಲಾಗಿದ್ದರೂ, ಅದರ ಮಾಲಕತ್ವ ಬೇರೆ ಟ್ರಸ್ಟ್‌ನ ಹೆಸರಿನಲ್ಲಿರುವುದೂ ಬೆಳಕಿಗೆ ಬಂದಿದೆ.

ಅಗತ್ಯ ದಾಖಲೆಗಳಿಲ್ಲದೆ ವಿದ್ಯಾರ್ಥಿಗಳ ಸುರಕ್ಷತೆಗೆ ಅಪಾಯ ಉಂಟುಮಾಡುವ ರೀತಿಯಲ್ಲಿ ವಾಹನವನ್ನು ಸಾರ್ವಜನಿಕ ರಸ್ತೆಯಲ್ಲಿ ಸಂಚರಿಸಲು ಕಾರಣರಾದ ಆರೋಪದ ಮೇರೆಗೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಮುಖ್ಯಸ್ಥ ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 109/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 125 ಹಾಗೂ ಮೋಟಾರು ವಾಹನ ಕಾಯ್ದೆಯ ಕಲಂ 196 ಮತ್ತು 192(1)ರ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...