ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಬಾಲಕಿಯನ್ನು ಆಕೆಯ ಮನೆಗೆ ಬಿಡುವ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ದಾರಿ ಮಧ್ಯೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.
ಆರೋಪಿತ ಅದ್ದು ಪಡೀಲ್ ಎಂಬಾತ ರವಿವಾರ ರಾತ್ರಿ ಬಾಲಕಿಯನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಸೆಕ್ಷನ್ 75 ಹಾಗೂ ಪೋಕ್ಸೋ ಕಾಯ್ದೆಯ ಸೆಕ್ಷನ್ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.





