ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

Date:

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ ಖಂಡಿಸಿ ಪ್ರಜಾಪ್ರಭುತ್ವ ಉಳಿಸಿ ಆಂದೋಲನ–ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೇತೃತ್ವದಲ್ಲಿ ಶನಿವಾರ ಮಂಗಳೂರಿನಲ್ಲಿ ಪ್ರತಿರೋಧ ರ್ಯಾಲಿ, ಪ್ರತಿಭಟನಾ ಸಭೆ ಹಾಗೂ ಟಾರ್ಚ್‌ಲೈಟ್ ಪ್ರದರ್ಶನ ನಡೆಯಿತು.

- Advertisement -

ಕಾಂಗ್ರೆಸ್, ಎಸ್‌ಡಿಪಿಐ, ಡಬ್ಲ್ಯುಪಿಐ, ಸಿಪಿಐ (ಎಂಎಲ್) ಲಿಬರೇಶನ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಮತ್ತು ಜಾತ್ಯತೀತ ಸಂಘಟನೆಗಳ ಸಹಭಾಗಿತ್ವದಲ್ಲಿ ನಗರದ ಮಿಲಾಗ್ರಿಸ್ ಚರ್ಚ್ ಬಳಿಯಿಂದ ಆರಂಭಗೊಂಡ ರ್ಯಾಲಿ ಮಂಗಳೂರು ಮಿನಿ ವಿಧಾನಸೌಧದ ಎದುರು ಸಮಾಪನಗೊಂಡಿತು. ತ್ರಿವರ್ಣ ಧ್ವಜ ಹಿಡಿದು ಸಾಗಿದ ಪ್ರತಿಭಟನಾಕಾರರು ಕೇಂದ್ರ ಸರಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ನಡೆದ ಪ್ರತಿಭಟನಾ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ, ಟಾರ್ಚ್‌ಲೈಟ್ ಪ್ರದರ್ಶನ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸಿಪಿಐ (ಎಂಎಲ್) ಲಿಬರೇಶನ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ, ಸಂವಿಧಾನಬದ್ಧವಾಗಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರನ್ನು ಬಂಧಿಸಿರುವ ಕೇಂದ್ರ ಸರಕಾರ ಅವರನ್ನು ತಕ್ಷಣ ಬಿಡುಗಡೆಗೊಳಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಪದ್ಮರಾಜ ಪೂಜಾರಿ ಮಾತನಾಡಿ, ಕೇಂದ್ರ ಸರಕಾರ ಸಂವಿಧಾನ ವಿರೋಧಿಯಾಗಿ ಆಡಳಿತ ನಡೆಸುತ್ತಿದ್ದು, ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಅದರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದರು.

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಮಾತನಾಡಿ, ಬಿಜೆಪಿ ವಿರುದ್ಧದ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು. ಬಿಜೆಪಿ ನೇತೃತ್ವದ ಕೇಂದ್ರ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳು ಒಗ್ಗಟ್ಟಾಗಬೇಕು. ಬಾಂಗ್ಲಾದೇಶ ಮತ್ತು ಶ್ರೀಲಂಕಾ ಮಾದರಿಯ ಚಳವಳಿ ನಡೆಸುವ ಅಗತ್ಯವಿದೆ ಎಂದು ಕರೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಮತಗಳ್ಳರನ್ನು ಓಡಿಸುವ ಕಾಲ ಸನ್ನಿಹಿತವಾಗಿದೆ. ದೇಶದ ಸಂವಿಧಾನದ ಮೇಲೆ ನಂಬಿಕೆಯಿರುವ ಎಲ್ಲರೂ ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕು ಎಂದು ಹೇಳಿದರು.

ಮಾಜಿ ಮೇಯರ್ ಕೆ. ಅಶ್ರಫ್ ಹಾಗೂ ಡಬ್ಲ್ಯುಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಪದ್ರಂಗಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ನಗರ ಅಧ್ಯಕ್ಷ ಅಶ್ರಫ್ ಅಡ್ಡೂರು, ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು, ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಝಾಹಿದ್ ಮಲಾರ್, ಆಮ್ ಆದ್ಮಿ ಪಕ್ಷದ ಮುಖಂಡ ಹಬೀಬ್ ಖಾದರ್, ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ ಮತ್ತು ಭಾಸ್ಕರ್ ಕೆ., ಮಂಗಳೂರು ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಸುರೇಂದ್ರ ಕಾಂಬ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್, ಪ್ರಕಾಶ್ ಸಾಲ್ಯಾನ್ ಮತ್ತು ಜೆ. ಅಬ್ದುಲ್ ಸಲೀಮ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಸ್. ಅಪ್ಪಿ, ಜಯಶೀಲಾ ಅಡ್ಯಂತಾಯ, ಮಾಜಿ ಕಾರ್ಪೊರೇಟರ್‌ಗಳಾದ ಅಬ್ದುಲ್ ರವೂಫ್ ಬಜಾಲ್, ಅಶ್ರಫ್ ಬಜಾಲ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...