ದ.ಕ. ಜಿಲ್ಲೆಯಲ್ಲಿ ಎಸ್.ಐ.ಆರ್ ಪ್ರಕ್ರಿಯೆಗೆ ಚಾಲನೆ: ಮತಗಟ್ಟೆಗಳಿಗೆ ಡಿ.ಸಿ. ಭೇಟಿ

Date:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಆರಂಭಗೊಂಡಿತು. ಇದರ ಮೊದಲ ಹಂತವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು ಚಾಲನೆ ನೀಡಿದರು. ಜಿಲ್ಲೆಯ 1876 ಮತಗಟ್ಟೆಗಳಲ್ಲಿ ಬಿ.ಎಲ್.ಒ.ಗಳು ಮತದಾರರ ಮನೆ ಬಾಗಿಲಿಗೆ ತೆರಳಿ ಗಣತಿ ನಮೂನೆಗಳನ್ನು ಮತದಾರರಿಗೆ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದರು.

- Advertisement -

ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಮಂಗಳವಾರ ಮಂಗಳೂರು ನಗರದ ಕೆಲವು ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಯನ್ನು ವಿತರಿಸಿದರು. ಅಲ್ಲದೆ ವಿವಿಧ ಮತಗಟ್ಟೆಗಳಲ್ಲಿ ಎಸ್.ಐ.ಆರ್ ಪ್ರಕ್ರಿಯೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ ಉಪಸ್ಥಿತರಿದ್ದರು. ಜಿಲ್ಲೆಯ ವಿವಿದೆಡೆ ಹಿರಿಯ ಅಧಿಕಾರಿಗಳು ಮತದಾರರ ಮನೆಗೆ ತೆರಳಿ ಎಸ್.ಐ.ಆರ್ ಪ್ರಕ್ರಿಯೆ ಪರಿಶೀಲಿಸಿದರು. ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗಡೆ, ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ಅವರ ಮನೆಗೂ ಅಧಿಕಾರಿಗಳು ಭೇಟಿ ನೀಡಿ ಗಣತಿ ನಮೂನೆಯನ್ನು ನೀಡಿದರು. ಹಿರಿಯ ನಾಗರಿಕರಿಗೆ ಖುದ್ದು ಭೇಟಿ ನೀಡಿ ನಮೂನೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಮತದಾರರ ಸೌಲಭ್ಯ ಕೇಂದ್ರ
ಮತದಾರರಿಗೆ ದ್ವಿಪ್ರತಿಯಲ್ಲಿ ಎನ್ಯುಮರೇಷನ್ ಫಾರ್ಮ್ ನೀಡಲಾಗಿದ್ದು, ಅಗತ್ಯ ಮಾಹಿತಿಯನ್ನು ಈ ನಮೂನೆಯಲ್ಲಿ ಭರ್ತಿ ಮಾಡಿ, 1 ಪ್ರತಿಯನ್ನು ಮತದಾರರು ತಮ್ಮ ಬಳಿ ಇಟ್ಟುಕೊಂಡು ಮತ್ತೊಂದು ಪ್ರತಿಯನ್ನು ಬಿ.ಎಲ್.ಒ.ಗಳಿಗೆ ಹಸ್ತಾಂತರಿಸಬೇಕು. ಅರ್ಜಿ ನಮೂನೆ ಭರ್ತಿ ಮಾಡಲು ಹಾಗೂ 2002 ರ ಮತದಾರರ ಪಟ್ಟಿಯ ವಿವರ ಭರ್ತಿ ಮಾಡಲು ಮತದಾರರಿಗೆ ಸಹಕರಿಸಲು ಪ್ರತಿ ಮತಗಟ್ಟೆಯಲ್ಲಿ ಮತದಾರರ ಸೌಲಭ್ಯ ಕೇಂದ್ರ ವನ್ನು ಸ್ಥಾಪಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 18,05,189 ಮತದಾರರು ಇದ್ದಾರೆ.

ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಹಾಗೂ ಪಾರದರ್ಶಕತೆ ಖಚಿತಪಡಿಸಲು ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿಯೊಂದು ಮತಗಟ್ಟೆಗೆ ಬೂತ್ ಮಟ್ಟದ ಏಜೆಂಟ್‍ರನ್ನು ನೇಮಕ ಮಾಡಲು ಜಿಲ್ಲಾಡಳಿತ ಸೂಚಿಸಿದೆ. ಯಾವುದೇ ಒಬ್ಬ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು, ಅದೇ ರೀತಿ ಯಾವುದೇ ಒಬ್ಬ ಅನರ್ಹ ಮತದಾರ ಮತದಾರರ ಪಟ್ಟಿಗೆ ಸೇರಬಾರದು ಎಂಬುದು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮುಖ್ಯ ಉದ್ದೇಶ.

ಮತಗಟ್ಟೆ ಮಟ್ಟದ ಅಧಿಕಾರಿಗಳು ಗಣತಿ ನಮೂನೆಗಳನ್ನು ವಿತರಿಸಿ ಮತ್ತು ಸಂಗ್ರಹಿಸಲು ಮನೆ ಮನೆ ಭೇಟಿ ನೀಡುವ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಮತದಾರರು ಸಂಪೂರ್ಣ ಸಹಕಾರ ನೀಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಈಗಿನ ಮತದಾರರ ಪಟ್ಟಿಯಲ್ಲಿರುವಂತೆ ಹೆಸರು, ಮತಗಟ್ಟೆ ಸಂಖ್ಯೆ, ವಿಧಾನಸಭಾ ಕ್ಷೇತ್ರದ ಹೆಸರು ಗಣತಿ ನಮೂನೆಯಲ್ಲಿ ಅರ್ಜಿಯಲ್ಲಿ ಮುದ್ರಣವಾಗಿದೆ. ಮತದಾರರ ಫೋಟೋ ಹಳೆಯದಾಗಿದ್ದರೆ ಅರ್ಜಿಯೊಂದಿಗೆ ಹೊಸ ಫೋಟೋ ನೀಡಬಹುದು.

ಜುಲೈ 29ರವರೆಗೆ ಮನೆ ಮನೆ ಭೇಟಿ
ಇಂದಿನಿಂದ ಮನೆ ಮನೆ ಭೇಟಿ ಪ್ರಾರಂಭವಾಗಿದ್ದು, ಜುಲೈ 29 ರವರೆಗೆ ನಡೆಯಲಿದೆ. ಆಗಸ್ಟ್ 5 ರಂದು ಮತದಾರರ ಕರಡು ಪಟ್ಟಿ ಪ್ರಕಟವಾಗಲಿದೆ. ಮತದಾರರ ಕ್ಲೈಮ್ ಮತ ಆಕ್ಷೇಪಣೆಗಳಿದ್ದರೆ ಆಗಸ್ಟ್ 5 ರಿಂದ ಸೆಪ್ಟೆಂಬರ್ 4 ರವರೆಗೆ ನೀಡಬಹುದು. ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ. ಗಣತಿ ನಮೂನೆ ಸ್ವೀಕರಿಸಿದ ಮನೆಗಳಿಗೆ ನೇರಳೆ ಬಣ್ಣದ ಸ್ಟಿಕ್ಕರ್ ಹಾಗೂ ಮನೆಗೆ ಬೀಗ ಹಾಕಿದ್ದರೆ ಕೆಂಪು ಬಣ್ಣದ ಸ್ಟಿಕ್ಕರ್ ಅಂಟಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...