ಮಂಗಳೂರು | ಸಾರ್ವಜನಿಕರ ಆರೋಗ್ಯಕ್ಕೆ ಆದ್ಯತೆ; ಆಹಾರ ಗುಣಮಟ್ಟ ದೂರುಗಳಿಗೆ ಕ್ಯೂಆರ್ ಕೋಡ್

Date:

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹೊಟೇಲ್, ರೆಸ್ಟೋರೆಂಟ್, ಆಹಾರ ಮಳಿಗೆಗಳ ಜತೆಗೆ ಪಿಜಿಗಳಲ್ಲೂ ಅಧಿಕಾರಿಗಳ ತಪಾಸಣೆ ಹಾಗೂ ದಾಳಿ ಕ್ರಮಗಳು ಮುಂದುವರಿಯಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

- Advertisement -

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯಿಂದ ವಿವಿಧೆಡೆ ದಾಳಿ ಹಾಗೂ ತಪಾಸಣೆ ನಡೆಸಲಾಗುತ್ತಿದೆ. ನಿಯಮ ಉಲ್ಲಂಘನೆ ಮಾಡಿ ಸಿಕ್ಕಿಬಿದ್ದವರು ಯಾರೇ ಆಗಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಯಾರೇ ನನ್ನ ಆತ್ಮೀಯರಾಗಿದ್ದರೂ ನಿಯಮ ಉಲ್ಲಂಘನೆ ಮಾಡಿದರೆ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಯಾಕೆಂದರೆ ಅಲ್ಲಿ ಆಹಾರ ಸೇವಿಸುವವರೂ ನನ್ನ ಆತ್ಮೀಯರೇ. ಅವರ ಆರೋಗ್ಯದ ಪರವಾಗಿ ನಾನು ನಿಲ್ಲಬೇಕು. ಹೀಗಾಗಿ ಎಲ್ಲರೂ ಆಹಾರ ಸುರಕ್ಷತೆಗೆ ಆದ್ಯತೆ ನೀಡಬೇಕು” ಎಂದು ಸಚಿವರು ಹೇಳಿದರು.

ಆಹಾರದ ಗುಣಮಟ್ಟದ ಬಗ್ಗೆ ಸಾರ್ವಜನಿಕರು ಸುಲಭವಾಗಿ ದೂರು ನೀಡಲು ಅನುಕೂಲವಾಗುವಂತೆ ಹೊಟೇಲ್, ಆಹಾರ ಮಳಿಗೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲೂ ಕ್ಯೂಆರ್ ಕೋಡ್ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

WhatsApp Image 2026 09 02 at 6.45.58 PM

ಮಂಗಳೂರಿನಲ್ಲಿ ಕ್ಯೂಆರ್ ಕೋಡ್ ಮೂಲಕ ಬಂದ ದೂರುಗಳ ಆಧಾರದ ಮೇಲೆ ಈಗಾಗಲೇ ಎರಡು ಕಡೆ ದಾಳಿ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಆ್ಯಪ್‌ನಲ್ಲಿರುವ ಕ್ಯೂಆರ್ ಕೋಡ್‌ಗಳನ್ನು ಹೊಟೇಲ್, ಆಹಾರ ಮಳಿಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗುವುದು ಎಂದರು.

ಅದೇ ರೀತಿ ಸಾರ್ವಜನಿಕರ ಆರೋಗ್ಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಲಹೆಗಳನ್ನು ಒಳಗೊಂಡ ಸೂಚನಾ ಫಲಕಗಳನ್ನೂ ಅಳವಡಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದರು.

“ಯಾರ ವ್ಯಾಪಾರವನ್ನೂ ಬಂದ್ ಮಾಡಿಸುವುದು ಸರ್ಕಾರದ ಉದ್ದೇಶವಲ್ಲ. ಆದರೆ ಜನರಿಗೆ ಮೋಸವಾಗಬಾರದು. ವ್ಯಾಪಾರಿಗಳೂ ತಮ್ಮ ಬದುಕು ಕಟ್ಟಿಕೊಳ್ಳಬೇಕು. ವ್ಯಾಪಾರದ ಮೂಲಕ ಅವರೂ ಸಮಾಜಕ್ಕೆ ಕೊಡುಗೆ ನೀಡಬೇಕು. ಹಾಗಾಗಿ ಪ್ರಥಮ ಹಂತದಲ್ಲಿ ಕನಿಷ್ಠ ದಂಡ ವಿಧಿಸಿ ಎಚ್ಚರಿಕೆ ನೀಡುವ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಯು.ಟಿ. ಖಾದರ್ ಹೇಳಿದರು.

ಎಸ್‌ಐಆರ್‌ನಿಂದ ಅರ್ಹರನ್ನು ಕೈಬಿಡಬಾರದು

ಎಸ್‌ಐಆರ್‌ಗೆ ಸಂಬಂಧಿಸಿ ದ್ವಿತೀಯ ಹಂತದ ಪರಿಶೀಲನೆ ನಡೆಯುತ್ತಿದ್ದು, ಈ ಸಂದರ್ಭ ಪಟ್ಟಿಯಿಂದ ಹೆಸರು ತೆಗೆಯುವುದು ಮಾತ್ರವಲ್ಲ, ಅರ್ಹ ಮತದಾರರ ಹೆಸರು ಸೇರ್ಪಡೆ ಬಗ್ಗೆ ಗಮನ ಹರಿಸುವಂತೆ ಚುನಾವಣಾ ಆಯೋಗದ ಆಯುಕ್ತರಿಗೆ ಮನವಿ ಮಾಡಲಾಗಿದೆ. ಹೆಸರಿನಲ್ಲಿ ತೊಂದರೆ ಇದ್ದಾಗ ಸರಿಪಡಿಸುವ ಕೆಲಸವಾಗಬೇಕು. ಮ್ಯಾಪಿಂಗ್‌ಗೆ ಸಂಬಂಧಿಸಿ ವಿದೇಶದಲ್ಲಿ ಇರುವ ನೆಪದಲ್ಲಿ ಮತದಾರರ ಪಟ್ಟಿಯಿಂದ ಕೈಬಿಡಬಾರದು. ಅವರಿಗೆ ವಿಶೇಷ ವ್ಯವಸ್ಥೆ ಮಾಡಿ ಮತದಾನದ ಹಕ್ಕು ಒದಗಿಸಬೇಕು. ನನ್ನ ವ್ಯಾಪ್ತಿಯಲ್ಲಿ ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ. ಎನ್ಯುಮರೇಶನ್ ಫಾರಂ ಭರ್ತಿ ಮಾಡಿ ಬಿಎಲ್‌ಒಗಳಿಗೆ ನೀಡದಿದ್ದಲ್ಲಿ ಅದು ಜನರ ಸಮಸ್ಯೆಯೇ ಹೊರತು ಅಧಿಕಾರಿಗಳದ್ದಲ್ಲ. ಹಾಗಾಗಿ ದ್ವಿತೀಯ ಹಂತ ಸೇರಿದಂತೆ ಮುಂದಿನ ಹಂತದ ಎಲ್ಲಾ ರೀತಿಯ ಪರಿಶೀಲನಾ ವ್ಯವಸ್ಥೆಯನ್ನು ರಾಜ್ಯಕ್ಕೆ ಏಕ ಮಾದರಿಯಲ್ಲಿ ನಡೆಸಲು ಚುನಾವಣಾ ಆಯೋಗ ಕ್ರಮ ವಹಿಸಬೇಕು ಎಂದು ಸಚಿವ ಯು.ಟಿ.ಖಾದರ್ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮುಡಾದ ನೂತನ ಅಧ್ಯಕ್ಷ ಸಂತೋಷ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಹೈದರ್ ಕೈರಂಗಳ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...