ಮಂಗಳೂರು | ವಾಮಂಜೂರು ಜಂಕ್ಷನ್‌ನಲ್ಲಿ ಅವೈಜ್ಞಾನಿಕ ಚರಂಡಿ ಕಾಮಗಾರಿ: ಸ್ಥಳೀಯರ ಆರೋಪ

Date:

ರಾ.ಹೆ. ಇಲಾಖೆಯು ವಾಮಂಜೂರು ಜಂಕ್ಷನ್‌ನಲ್ಲಿ ಅವೈಜ್ಞ್ಞಾನಿಕ ಚರಂಡಿ ಕಾಮಗಾರಿ ಮಾಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -

ಇಲ್ಲಿನ ವಸತಿಪ್ರದೇಶ, ಅಂಗಡಿ-ಮುಂಗಟ್ಟುಗಳ ತ್ಯಾಜ್ಯ ನೀರು ಹರಿಯಲು ರಾಜಕಾಲುವೆಯಲ್ಲೇ ರಾ.ಹೆ. ಇಲಾಖೆಯು ಹೊಸದಾಗಿ ಚರಂಡಿ ಕಾಮಗಾರಿ ಆರಂಭಿಸಿದೆ. ಆದರೆ ಇದರಿಂದ ವಾಮಂಜೂರು ಕೆಳಭಾಗದ ಕುಡಿಯುವ ನೀರಿನ ಬಾವಿಗಳ ನೀರು ಕಲುಷಿತಗೊಳ್ಳುವುದರ ಜೊತೆಗೆ ಫಲ್ಗುಣಿ ನದಿ ನೀರು ಮಲಿನವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮಳೆ ನೀರು ಸರಾಗವಾಗಿ ಹರಿಯುವ ರಾಜಕಾಲುವೆಯಲ್ಲಿ ಬೇಸಿಗೆ ಹೊತ್ತಲ್ಲಿ ದುರ್ವಾಸನೆಯಿಂದ ಕೂಡಿದ ಕೊಳಚೆ ನೀರು ಹರಿಯುತ್ತಿತ್ತು. ಮಳೆಗಾಲದಲ್ಲಿ ಈ ಸಮಸ್ಯೆ ಇರುವುದಿಲ್ಲ. ಆದರೆ ಮಳೆ ನಿಂತಾಗ ವಾಮಂಜೂರು ಜಂಕ್ಷನ್‌ನ ಮೇಲ್ಭಾಗದಿಂದ ಮತ್ತೆ ಕೊಳಚೆ ನೀರು ಹರಿಯುತ್ತಿದೆ. ಹೊಸ ಚರಂಡಿಯ ತ್ಯಾಜ್ಯ ನೀರು ರಾಜಕಾಲುವೆ ಸಂಪರ್ಕಿಸಿ ದರೆ ಆ ನೀರು ಕೆಳಭಾಗದ ಕೆಲರೈಕೋಡಿ, ಸಂಕೇಶ, ಮಂಜಲ್ದೋಟವಾಗಿ ಉಳಾಯಿಬೆಟ್ಟು ಭಾಗದಲ್ಲಿ ಫಲ್ಗುಣಿ ನದಿ ಸೇರುವ ಸಾಧ್ಯಯೆ ಇದೆ. ಇದರಿಂದ ಮತ್ತಷ್ಟು ಸಮಸ್ಯೆಯಾಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕೆಲವು ಸಂದರ್ಭ ತಿರುವೈಲಿನ ಕೆಲರೈಕೋಡಿ ಮತ್ತಿತರ ಪ್ರದೇಶಗಳ ಕುಡಿಯುವ ನೀರಿನ ಬಾವಿಗಳು ಹಾಗೂ ಕೆರೆಕಟ್ಟೆಗಳ ತ್ಯಾಜ್ಯ ನೀರು ಇಂಗುತ್ತಿದೆ. ಅಲ್ಲದೆ ಬಾವಿಗಳ ನೀರು ಕಲುಷಿಗೊಳ್ಳುತ್ತಿದೆ. ಆಗ ನೀರು ಬಳಕೆಗೆ ಯೋಗ್ಯವಾಗಿರುವುದಿಲ್ಲ ಎಂದು ಸ್ಥಳೀಯರು ಜಿಲ್ಲಾಧಿಕಾರಿ, ಮನಪಾ ಸಹಿತ ಸಂಬಂಧಪಟ್ಟ ಇಲಾಖೆಗಳಿಗೆ ದೂರು ನೀಡಿದ್ದಾರೆ.

ಈಗಾಗಲೆ ಫಲ್ಗುಣಿ ನದಿಗೆ ಮರವೂರು, ಮೂಡುಶೆಡ್ಡೆ ಮತ್ತಿತರ ಕಡೆಗಳಲ್ಲಿ ವಿಷಯುಕ್ತ ತ್ಯಾಜ್ಯ ನೀರು ಸೇರುತ್ತಿದೆ. ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಭವಿಷ್ಯದಲ್ಲಿ ವಾಮಂಜೂರು ಭಾಗದಿಂದಲೂ ಭಾರೀ ಪ್ರಮಾಣದ ತ್ಯಾಜ್ಯ ನೀರು ಫಲ್ಗುಣಿಯ ಒಡಲು ಸೇರಲಿದೆ. ವಿಷಯುಕ್ತ ರಾಸಾಯನಿಕ ತ್ಯಾಜ್ಯ ನೀರಿಂದ ಮೀನುಗಳ ಸಾಯಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...