ಮಂಗಳೂರು | ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

Date:

ಮಂಗಳೂರು ನಗರದ ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ಹಾಗೂ ಸಹಕುಲಪತಿ ಫಾ. ಮೆಲ್ವಿನ್ ಜೆ. ಪಿಂಟೋ (63) ಶುಕ್ರವಾರ ನಿಧನರಾಗಿದ್ದಾರೆ.

- Advertisement -

ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಅವರು, ಸಂಸ್ಥೆಗೆ ‘ಡೀಮ್ಡ್ ಟು ಬಿ ಯೂನಿವರ್ಸಿಟಿ’ ಸ್ಥಾನಮಾನ ದೊರಕಿಸುವ ಪ್ರಕ್ರಿಯೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಶಿಕ್ಷಣ ಕ್ಷೇತ್ರದ ಬೆಳವಣಿಗೆ, ನವೀನ ಆವಿಷ್ಕಾರಗಳ ಪ್ರೋತ್ಸಾಹ ಹಾಗೂ ಗುಣಮಟ್ಟದ ಶಿಕ್ಷಣ ವಿಸ್ತರಣೆಗೆ ಅವರು ನೀಡಿದ ಕೊಡುಗೆ ಗಮನಾರ್ಹವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹಲವಾರು ವರ್ಷಗಳಿಂದ ರೆಕ್ಟರ್ ಆಗಿ ಸೇವೆ ಸಲ್ಲಿಸಿದ ಫಾ. ಪಿಂಟೋ, ಶಿಕ್ಷಣ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ್ದರು. ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ಆತ್ಮೀಯ ಸಂಬಂಧ ಬೆಳೆಸಿಕೊಂಡಿದ್ದ ಅವರು, ಸರಳತೆ ಮತ್ತು ಸೇವಾಭಾವದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಅವರ ಅಗಲಿಕೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. “ಫಾ. ಮೆಲ್ವಿನ್ ಜೆ. ಪಿಂಟೋ ಅವರ ನಿಧನವು ಶಿಕ್ಷಣ ಲೋಕಕ್ಕೆ ತುಂಬಲಾರದ ನಷ್ಟ. ಅವರ ಸೇವೆ ಸದಾ ಸ್ಮರಣೀಯ,” ಎಂದು ತಿಳಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಕೂಡ ಸಂತಾಪ ವ್ಯಕ್ತಪಡಿಸಿ, “ಅವರ ಅಗಲಿಕೆ ಶೈಕ್ಷಣಿಕ ಹಾಗೂ ಧಾರ್ಮಿಕ ರಂಗಕ್ಕೆ ಅಪಾರ ನಷ್ಟ ಉಂಟುಮಾಡಿದೆ. ಸಮಾಜದಲ್ಲಿ ದೊಡ್ಡ ಶೂನ್ಯ ಉಂಟಾಗಿದೆ,” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...