ಮಂಗಳೂರು | ಬಾಂಗ್ಲಾದೇಶಿಗನೆಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಪ್ರಕರಣ ದಾಖಲು

Date:

ಜಾರ್ಖಂಡ್‌ನಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಬಾಂಗ್ಲಾದೇಶಿಗನೆಂದು ಆರೋಪಿಸಿ ಆತನ ಮೇಲೆ ನಾಲ್ವರು ದುಷ್ಕರ್ಮಿಗಳು ದಾಳಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ನಡೆದಿದೆ.

- Advertisement -

ಘಟನೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಪತ್ರಿಕಾ ಹೇಳಿಕೆ ನೀಡಿದ್ದು, “ಹಲ್ಲೆಗೊಳಗಾದ ಕಾರ್ಮಿಕನ ಹೆಸರು ದಿಲ್ಜಾನ್ ಅನ್ಸಾರಿ. ಇವರು ಕಳೆದ 10-15 ವರ್ಷಗಳಿಂದ ಮಂಗಳೂರಿನಲ್ಲಿ ಪ್ರತಿ ವರ್ಷ 4-6 ತಿಂಗಳು ಕೆಲಸ ಮಾಡುತ್ತಿದ್ದರು. ಇದೀಗ ಆರೋಪಿಗಳು ಅವರನ್ನು ಬಾಂಗ್ಲಾದೇಶಿ ಎಂದು ಆರೋಪಿಸಿ, ವಿವಿಧ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಕೆಲವು ಅನಾವಶ್ಯಕ ಮತ್ತು ಅಪಹಾಸ್ಯದ ಟೀಕೆಗಳನ್ನು ಮಾಡಿದ್ದಾರೆ. ದಿಲ್ಜಾನ್ ಅನ್ಸಾರಿ ಅವರು ಬಾಂಗ್ಲಾದೇಶಿ ಅಲ್ಲವೆಂದು ಹೇಳಿದಾಗ, ಆರೋಪಿಗಳು ಅವರ ತಲೆಗೆ ಹೊಡೆದು ದಾಳಿ ಮಾಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಸ್ಥಳೀಯ ಹಿಂದೂ ಮಹಿಳೆಯೊಬ್ಬರು ಬಂದು ಅವರನ್ನು ರಕ್ಷಿಸಿದ್ದಾರೆ. ವಲಸೆ ಕಾರ್ಮಿಕನಾಗಿದ್ದರಿಂದ ಭಯದಿಂದ ದಿಲ್ಜಾನ್ ಅನ್ಸಾರಿ ದೂರು ನೀಡದೆ ಮನೆಗೆ ತೆರಳಿದ್ದರು. ನಂತರ ಸ್ಥಳೀಯ ನಾಯಕರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಪರಿಶೀಲನೆ ನಡೆಸಿದಾಗ ದಿಲ್ಜಾನ್ ಅನ್ಸಾರಿ ಭಾರತೀಯರಾಗಿದ್ದು, ಕೆಲಸಕ್ಕಾಗಿ ಇಲ್ಲಿಗೆ ಬಂದಿರುವುದು ದೃಢಪಟ್ಟಿದೆ.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಎಸ್‌ಐಆರ್ ನೆಪದಲ್ಲಿ ಮುಸ್ಲಿಂ ಮತದಾರರ ಹೊರಗುಳಿವು; ರಾಜಕೀಯ ದುರುದ್ದೇಶ ಆರೋಪ – ಶಿವಸುಂದರ

ಈ ಘಟನೆಗೆ ಸಂಬಂಧಿಸಿ ಬಿಎನ್​ಎಸ್​ ಕಾಯ್ದೆಯಡಿ 126(2), 109, 352, 351(3),353, 118(1) r/w 3(5) ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್ ಮತ್ತು ಮೋಹನ್ ಎಂದು ಗುರುತಿಸಲಾಗಿದ್ದು, ಅವರನ್ನು ಕೂಡಲೇ ಬಂಧಿಸುವಂತೆ ಸೂಚನೆ ನೀಡಲಾಗಿದೆ” ಎಂದು ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಇಂತಹ ಘಟನೆಗಳು ನಮ್ಮ ಸಮಾಜದಲ್ಲಿ ದ್ವೇಷ, ಅಪಪ್ರಚಾರ ಮತ್ತು ಅಜ್ಞಾನದಿಂದ ಉಂಟಾಗುತ್ತಿವೆ. ಸ್ಥಳೀಯರ ಸಹಾಯ ಮತ್ತು ಪೊಲೀಸ್ ಇಲಾಖೆಯ ತ್ವರಿತ ಕ್ರಮದಿಂದ ಮಾತ್ರ ಇಂತಹ ದುರಂತಗಳನ್ನು ತಡೆಗಟ್ಟಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ಎಸ್‌ಐಆರ್‌ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ...